Sunday, July 26, 2026
Homeಜಿಲ್ಲೆಭಟ್ಕಳ : ಇನ್ಸ್ಟಾಗ್ರಾಮ್ ಗೆಳೆಯನ ಕಿರುಕುಳಕ್ಕೆ ಬೇಸತ್ತು ಯುವತಿ ನೇಣಿಗೆ ಶರಣು.

ಭಟ್ಕಳ : ಇನ್ಸ್ಟಾಗ್ರಾಮ್ ಗೆಳೆಯನ ಕಿರುಕುಳಕ್ಕೆ ಬೇಸತ್ತು ಯುವತಿ ನೇಣಿಗೆ ಶರಣು.

ಭಟ್ಕಳ : ಇನ್ಸ್ಟಾಗ್ರಾಮ್ ಗೆಳೆಯನ ಕಿರುಕುಳಕ್ಕೆ ಬೇಸತ್ತು ಯುವತಿಯೋರ್ವಳು ನೇಣು ಬಿಗಿದುಕೊಂಡು ಆತ್ಮಹತ್ಯೆ ಮಾಡಿಕೊಂಡಿರುವ ಘಟನೆ ಕೊಡಮಕ್ಕಿ, ಹಾಡವಳ್ಳಿಯಲಿ ನಡೆದಿದೆ.

ಮೃತ ಯುವತಿಯನ್ನು ನೇತ್ರಾ ಮುತ್ತಯ್ಯ ಗೋವಾಳಿ ಎಂದು ತಿಳಿದು ಬಂದಿದೆ. ಈಕೆ ವಕೀಲರ ಕಛೇರಿಯಲ್ಲಿ ಕೆಲಸ ಮಾಡಿಕೊಂಡಿದ್ದಳು. ಈಕೆಗೆ ಆರೋಪಿಯಾದ ಮುಂಡಳ್ಳಿ ನಿವಾಸಿ ಗೋವರ್ಧನ ಮೊಗೇರ ಇನ್ಸ್ಟಾಗ್ರಾಮ್ ನಲ್ಲಿ ಪರಿಚಯವಾಗಿ ನಂತರ ಗೆಳೆತನ ಮಾಡಿಕೊಂಡವನು ತಾನು ಖರ್ಚು ಮಾಡಿದ ಹಣ ಕೊಡುವಂತೆ ಹೇಳಿ ಕರೆ ಮಾಡಿ ಹೆದರಿಸಿ ಚಿತ್ರಹಿಂಸೆ ನೀಡಿ, ನಿನ್ನ ಅಶ್ಲೀಲ ಫೋಟೋಗಳನ್ನು ತಾನು ಫೇಸ್ಬುಕ್ನಲ್ಲಿ ಹಾಕಿ ನಿನ್ನ ಮಾನ ಮರ್ಯಾದೆ ತೆಗೆದು ನಿನಗೆ ಸಾಯಿಸುತ್ತೇನೆ’ ಇಲ್ಲಾದರೆ ಮರ್ಯಾದೆಗೆ ನೀನೆ ಸಾಯಬೇಕು ಎಂದು ಹೇಳ ಪ್ರಚೋದನೆ ನೀಡಿದಕ್ಕೆ ಮನನೊಂದ ಯುವತಿ ತನ್ನ ಹಳೆಯ ಮನೆಯಲ್ಲಿ ಕುತ್ತಿಗೆ ನೇಣು ಬಿಗಿದುಕೊಂಡು ಆತ್ಮಹತ್ಯೆ ಮಾಡಿಕೊಂಡಿದ್ದಾಳೆ.

ಆರೋಪಿ ಗೋವರ್ಧನ ಮೊಗೇರ ತನ್ನ ಮಗಳ ಸಾವಿಗೆ ಈತನೇ ಕಾರಣ ಎಂದು ಈತನ ವಿರುದ್ಧ ಕಾನೂನು ಕ್ರಮ ಕೈಗೊಳ್ಳಲು ಭಟ್ಕಳ ಗ್ರಾಮೀಣ ಠಾಣೆಯಲ್ಲಿ ಮೃತ ಯುವತಿಯ ತಂದೆ ಮುತ್ತಯ್ಯ ಗೋವಾಳಿ ದೂರು ನೀಡಿದ್ದಾರೆ.

ದೂರು ದಾಖಲಿಸಿಕೊಂಡ ಗ್ರಾಮೀಣ ಠಾಣೆಯ ಪಿ.ಎಸ್.ಐ ಶ್ರೀಧರ ನಾಯ್ಕ ಮೃತ ಯುವತಿಯ ಮೃತ ದೇಹವನ್ನು ಮರಣೋತ್ತರ ಪರೀಕ್ಷೆಗೆ ಒಳಪಡೆಸಿ ಕುಟುಂಬಸ್ಥರಿಗೆ ಹಸ್ತಾಂತರ ಮಾಡಿದ್ದಾರೆ..

ಸದ್ಯ ಕುಟುಂಬಸ್ಥರ ಆಕ್ರಂದನ ಮುಗಿಲು ಮುತ್ತಿದ್ದು ಆರೋಪಿ ಗೋವರ್ಧನ ಮೊಗೇರಗೆ ಕಠಿಣ ಶಿಕ್ಷೆ ಯಾಗಬೇಕೆಂದು ಆಗ್ರಹಿಸಿದ್ದಾರೆ .

RELATED ARTICLES

LEAVE A REPLY

Please enter your comment!
Please enter your name here

Most Popular