ಮಂಗಳೂರು : ಕರ್ನಾಟಕದ 6 ಜಿಲ್ಲೆಗಳಿಗೆ ರೆಡ್ ಅಲರ್ಟ್ ಘೋಷಿಸಲಾಗಿದ್ದು, ಅರಬ್ಬಿ ಸಮುದ್ರದಲ್ಲಿ ವಾಯುಭಾರ ಕುಸಿತ ಹಿನ್ನೆಲೆ ಕರ್ನಾಟಕದಾದ್ಯಂತ ಮಳೆ ಯಾಗುತ್ತಿದೆ. ಬೆಂಗಳೂರಲ್ಲೂ ಮೇ 26ರವರೆಗೆ ಮಳೆ ಮುಂದುವರೆಯಲಿದೆ ಎಂದು ಹವಾಮಾನ ಇಲಾಖೆ ಮುನ್ಸೂಚನೆ ನೀಡಿದೆ. ದಕ್ಷಿಣ ಕನ್ನಡ, ಉತ್ತರ ಕನ್ನಡ, ಉಡುಪಿ, ಬೆಳಗಾವಿ, ಚಿಕ್ಕಮಗಳೂರು, ಶಿವಮೊಗ್ಗ ಜಿಲ್ಲೆಗಳಲ್ಲಿ ಹೆಚ್ಚಿನ ಪ್ರಮಾಣದ ಮಳೆಯಾಗಲಿದೆ. ಬಾಗಲಕೋಟೆ, ಧಾರವಾಡ, ಹಾವೇರಿ, ಹಾಸನ, ಕೊಡಗಿಗೆ ಆರೆಂಜ್ ಅಲರ್ಟ್ ಘೋಷಿಸಲಾಗಿದೆ.
ಕರಾವಳಿ ಭಾಗದಲ್ಲಿ ಪೂರ್ವ ಮುಂಗಾರು ಮಳೆ ಬಿರುಸು ಪಡೆ ಯುವ ಸಾಧ್ಯತೆ ಇದ್ದು, ಭಾರ ತೀಯ ಹವಾಮಾನ ಇಲಾಖೆಯು ಮೇ 20, 21 ರಂದು ‘ರೆಡ್ ಅಲರ್ಟ್’, ಮೇ 22 ರಿಂದ 25ರವರೆಗೆ ‘ಯೆಲ್ಲೋ ಅಲರ್ಟ್’ ಘೋಷಿಸಿದೆ. ಈ ವೇಳೆ ದಕ್ಷಿಣ ಕನ್ನಡ, ಉಡುಪಿ ಜಿಲ್ಲೆಯಲ್ಲಿ ಗುಡುಗು, ಸಿಡಿಲು, ಗಾಳಿ ಯಿಂದ ಕೂಡಿದ ಭಾರೀ ಮಳೆ ಸುರಿಯುವ ಸಾಧ್ಯತೆ ಇದೆ.ಬಿರುಸಿನ ಮಳೆಯ ಮುನ್ಸೂಚನೆ ಹಿನ್ನೆಲೆಯಲ್ಲಿ ದಕ್ಷಿಣ ಕನ್ನಡ ಜಿಲ್ಲಾಡಳಿತದಿಂದ ಮುನ್ನೆಚ್ಚರಿಕೆ ಕ್ರಮ ಕೈಗೊಳ್ಳಲಾಗಿದೆ.
ವಿಪತ್ತು ನಿರ್ವಹಣೆಯನ್ನು ಚಾಚೂ ತಪ್ಪದೇ ಕಡ್ಡಾಯವಾಗಿ ನಿರ್ವಹಿಸಬೇಕು, ಜಿಲ್ಲಾ ಮಟ್ಟದ ಮತ್ತು ತಾಲೂಕು ಮಟ್ಟದ ಅಧಿಕಾರಿಗಳು ಕಡ್ಡಾಯವಾಗಿ ಕೇಂದ್ರ ಸ್ಥಾನದಲ್ಲಿರಬೇಕು, ಜಿಲ್ಲಾಡಳಿತವು ವಿವಿಧ ಪ್ರದೇಶಗಳಿಗೆ ನೇಮಿಸಲಾದ ಇನ್ಸಿಡೆಂಟ್ ಕಮಾಂಡರ್ ಜಾಗೃತರಾಗಿ ಸಾರ್ವಜನಿಕ ದೂರು ಗಳಿಗೆ ತತ್‌ಕ್ಷಣ ಸ್ಪಂದಿಸಬೇಕು.ನೀರು ಇರುವ ತಗ್ಗು ಪ್ರದೇಶ, ಕೆರೆ, ನದಿ ತೀರ ಸಮುದ್ರ ತೀರಕ್ಕೆ ಮಕ್ಕಳು ಹೋಗದಂತೆ ಪಾಲಕರು ಜಾಗ್ರತೆ ವಹಿಸಬೇಕು, ಮಕ್ಕಳು ಹಾಗೂ ಸಾರ್ವಜನಿಕರು ಅಪಾಯಕಾರಿ ಮರ ಮತ್ತು ವಿದ್ಯುತ್ ಕಂಬದ ಹತ್ತಿರ ಸುಳಿಯಬಾರದು. ತುಂಡಾದ ವಿದ್ಯುತ್ ತಂತಿಗಳಿಂದ ದೂರವಿರಬೇಕು. ದುರ್ಬಲವಾದ ಅಥವಾ ಹಳೆಯ ಕಟ್ಟಡ/ಮರಗಳ ಹತ್ತಿರ, ಮರಗಳ ಕೆಳಗೆ ನಿಲ್ಲಬಾರದು ಎಂದು ಜಿಲ್ಲಾಡಳಿತ ಸೂಚಿಸಿದೆ.