ಮಂಗಳೂರು : ಸುಪ್ರೀಂ ಕೋರ್ಟ್ನಲ್ಲಿ ಬಾಕಿ ಇರುವ ಪ್ರಕರಣಗಳನ್ನು ರಾಜೀ ಸಂಧಾನದ ಮೂಲಕ ಇತ್ಯರ್ಥಪಡಿಸಲು “ಸಮಾಧಾನ ಸಮಾರೋಹ್-2026” ಹೆಸರಿನಲ್ಲಿ ವಿಶೇಷ ಲೋಕ ಅದಾಲತ್ ಆಯೋಜಿಸಲಾಗಿದೆ ಎಂದು ದಕ್ಷಿಣ ಕನ್ನಡ ಜಿಲ್ಲಾ ಪ್ರಧಾನ ಮತ್ತು ಸತ್ರ ನ್ಯಾಯಾಧೀಶರಾದ ಶ್ರೀ ಬಸವರಾಜ್ ರವರು ತಿಳಿಸಿದ್ದಾರೆ.
ಆಗಸ್ಟ್ 21, 22 ಹಾಗೂ 23, 2026ರಂದು ನಡೆಯಲಿರುವ ಈ ವಿಶೇಷ ಲೋಕ ಅದಾಲತ್ ಮೂಲಕ ಜಿಲ್ಲೆಯ ಜನತೆಗೆ ತಾವಿರುವ ಸ್ಥಳದಲ್ಲಿಯೇ ತಮ್ಮ ಪ್ರಕರಣಗಳನ್ನು ಸಂಧಾನದ ಮೂಲಕ ಇತ್ಯರ್ಥಪಡಿಸಿಕೊಳ್ಳುವ ಸುವರ್ಣಾವಕಾಶ ಕಲ್ಪಿಸಲಾಗಿದೆ.
ಕಾನೂನು ಸೇವಾ ಸಮಿತಿ ವ್ಯಾಪ್ತಿಯಲ್ಲಿರುವ ಪ್ರಕರಣಗಳಿಗೆ ಸಂಬಂಧಪಟ್ಟಂತೆ ನೋಟಿಸ್ ಜಾರಿ ಮಾಡಿ, ಸೂಕ್ತ ಮಧ್ಯಸ್ಥಿಕೆದಾರರನ್ನು ನೇಮಿಸಿ ಮಧ್ಯಸ್ಥಿಕೆಗೆ ಅಗತ್ಯ ಸ್ಥಳಾವಕಾಶ ಒದಗಿಸಲಾಗುವುದು ಎಂದು ತಿಳಿಸಲಾಗಿದೆ.
ಸುಪ್ರೀಂ ಕೋರ್ಟ್‌ಲ್ಲಿ ಬಾಕಿ ಇರುವ ಪ್ರಕರಣಗಳ ರಾಜೀ ಸಂಧಾನ ಕುರಿತು ಯಾವುದೇ ಅನುಮಾನಗಳಿದ್ದಲ್ಲಿ ಸಂಬಂಧಪಟ್ಟ ತಾಲೂಕು ಕಾನೂನು ಸೇವಾ ಸಮಿತಿ ಅಥವಾ ಜಿಲ್ಲಾ ಕಾನೂನು ಸೇವಾ ಪ್ರಾಧಿಕಾರವನ್ನು ಸಂಪರ್ಕಿಸುವಂತೆ ಸಾರ್ವಜನಿಕರಿಗೆ ಮನವಿ ಮಾಡಲಾಗಿದೆ.
ಚೆಕ್ ಬೌನ್ಸ್ ಪ್ರಕರಣಗಳಿಗೆ ವಿಶೇಷ ಲೋಕ ಅದಾಲತ್
ಒಟ್ಟು 55335 ಪ್ರಕರಣಗಳು ಬಾಕಿಯಾಗಿದ್ದು ಅದರಲ್ಲಿ 13357 ಚೆಕ್ ಬೌನ್ಸ್ ಪ್ರಕರಣಗಳಾಗಿವೆ. ಉದೇಶದಾದ್ಯಂತ ಚೆಕ್ ಬೌನ್ಸ್ ಪ್ರಕರಣಗಳು ಹೆಚ್ಚುತ್ತಿರುವ ಹಿನ್ನೆಲೆ, ಎನ್.ಐ. ಆಕ್ಟ್ ಕಲಂ 138ರಡಿ ದಾಖಲಾಗಿರುವ ಚೆಕ್ ಬೌನ್ಸ್ ಪ್ರಕರಣಗಳ ಇತ್ಯರ್ಥಕ್ಕಾಗಿ ವಿಶೇಷ ಲೋಕ ಅದಾಲತ್ ಕೂಡ ಆಯೋಜಿಸಲಾಗಿದೆ.
ಈ ವಿಶೇಷ ಲೋಕ ಅದಾಲತ್‌ಗಳು ಜುಲೈ 18, 2026 ಹಾಗೂ ನವೆಂಬರ್ 21, 2026ರಂದು ನಡೆಯಲಿದ್ದು, ಹೆಚ್ಚಿನ ಸಂಖ್ಯೆಯಲ್ಲಿ ಪ್ರಕರಣಗಳನ್ನು ರಾಜೀ ಮೂಲಕ ಇತ್ಯರ್ಥಪಡಿಸಲು ಪಕ್ಷಕಾರರಿಗೆ ಅವಕಾಶ ಕಲ್ಪಿಸಲಾಗಿದೆ ಎಂದು ತಿಳಿಸಿದ್ದಾರೆ. ಪತ್ರಿಕಾಗೋಷ್ಠಿಯಲ್ಲಿ ಝೈಬುನ್ನಿಸ್ಸಾ ರವರು ಉಪಸ್ಥಿತರಿದ್ದರು.


