ಮಂಗಳೂರು : ಮಂಗಳೂರಿನಲ್ಲಿ ಇಂದು ಸಂಜೆಯಿಂದಲೇ ಗುಡುಗು ಸಹಿತ ಮಳೆ ಆರಂಭವಾಗಿದ್ದು ಬಾರಿ ಮಳೆಗೆ ಜನಜೀವನ ಅಸ್ಥವ್ಯಸ್ಥಗೊಂಡಿದೆ. ಕಳೆದ ಎರಡು ದಿನಗಳಿಂದ ಉಪಲೋಕಾಯುಕ್ತ ಮಂಗಳೂರಿಗೆ ಆಗಮಿಸಿದ್ದು ವಿವಿಧ ಸ್ಥಳಗಳಿಗೆ ಭೇಟಿನೀಡಿ ಕುಂದುಕೊರತೆಗಳನ್ನು ಆಲಿಸಿದ್ದಾರೆ.
ಮಂಗಳೂರಿನ ಉರ್ವಸ್ಟೋರ್ ಬಳಿ ಇರುವ ಜಿಲ್ಲಾ ಪಂಚಾಯತ್ ಸಭಾಂಗಣದ ಒಳಗೆ ಮಳೆ ನೀರು ನುಗ್ಗಿದೆ. ಆ ಮೂಲಕ ಅಧಿಕಾರಿಗಳಿಗೂ ಫೆಂಗಲ್ ಚಂಡಮಾರುತದ ಎಫೆಕ್ಟ್ ತಟ್ಟಿದೆ. ನೇತ್ರಾವತಿ ಸಭಾಂಗಣದಲ್ಲಿ ಉಪ ಲೋಕಾಯುಕ್ತ ನ್ಯಾಯಮೂರ್ತಿ ಬಿ.ವೀರಪ್ಪ ನೇತ್ರತ್ವದಲ್ಲಿ ಅಹವಾಲು ಹಾಗೂ ಕುಂದುಕೊರತೆ ಸ್ವೀಕಾರ ಸಭೆ ನಡೆಯುತ್ತಿತ್ತು. ಈ ವೇಳೆ ಅಧಿಕಾರಿಗಳು ಕುಳಿತಿದ್ದ ಜಾಗದ ಕಡೆ ಮಳೆ ನೀರು ನುಗ್ಗಿದೆ. ಕುರ್ಚಿ ಅಡಿ ಭಾಗಕ್ಕೆ ಮಳೆ ನೀರು ನುಗಿದೆ. ಸುಮಾರು ಒಂದು ಗಂಟೆ ಕಾಲ ಗುಡುಗು ಸಹಿತ ಭಾರಿ ಮಳೆ ಸುರಿದಿದ ಇದರಿಂದ ಅಲ್ಲಲ್ಲಿ ಕೃತಕ ನೆರೆ ಸಂಭವಿಸಿದ್ದು ಜನಸಾಮನ್ಯರು ಪರದಾಡುವಂತಾಯಿತು.