Thursday, November 21, 2024
Flats for sale
Homeಜಿಲ್ಲೆಮಂಗಳೂರು : ಎಂಡಿಎಂಎ ಸಾಗಾಟ ಮಾಡುತ್ತಿದ್ದ ಮೂವರ ಬಂಧನ.

ಮಂಗಳೂರು : ಎಂಡಿಎಂಎ ಸಾಗಾಟ ಮಾಡುತ್ತಿದ್ದ ಮೂವರ ಬಂಧನ.

ಮಂಗಳೂರು : ಬೆಂಗಳೂರಿನಿಂದ ಮಂಗಳೂರು ನಗರಕ್ಕೆ ಕಾರಿನಲ್ಲಿ ನಿಷೇದಿತ ಮಾದಕ ವಸ್ತುವಾದ ಎಂಡಿಎಂಎ ನ್ನು ಸಾಗಾಟ,ಮಾರಾಟ ಮಾಡುತ್ತಿದ್ದ ಮೂವರನ್ನು ಮಂಗಳೂರು ಸಿಸಿಬಿ ಪೊಲೀಸರು ಯಶಸ್ವಿಯಾಗಿ ಬಂಧಿಸಿದ್ದಾರೆ .

ಬಂಧಿತರನ್ನು ಕಾಸರಗೋಡು ನಿವಾಸಿ ಶಾಜಹಾನ್ (32). ಪಿ.ಎಂ,ಮೊಹಮ್ಮದ್ ನಿಶಾದ್(27) ಹಾಗೂ ಮಡಿಕೇರಿ ನಿವಾಸಿ ಮನ್ಸೂರು ಎಂ.ಎಂ(27) ಎಂದು ತಿಳಿದುಬಂದಿದೆ.

ಮಂಗಳೂರು ನಗರಕ್ಕೆ ಬೆಂಗಳೂರಿನಿಂದ ನಿಷೇದಿತ ಮಾದಕ ವಸ್ತುವಾದ ಎಂಡಿಎಂಎ ನ್ನು ಖರೀದಿಸಿಕೊಂಡು ಹೊಸ ಮಾರುತಿ ಬಲೆನೋ ಕಾರಿನಲ್ಲಿ ಸಾಗಾಟ/ಮಾರಾಟ ಮಾಡುತ್ತಿದ್ದ ಬಗ್ಗೆ ಖಚಿತ ಮಾಹಿತಿಯನ್ನು ಪಡೆದ ಮಂಗಳೂರು ಸಿಸಿಬಿ ಪೊಲೀಸರು ಮಂಗಳೂರು ನಗರದ ಸುರತ್ಕಲ್ ಎನ್ಐಟಿಕೆ ಮುಕ್ಕ ಪರಿಸರದಲ್ಲಿ ಅಕ್ರಮವಾಗಿ ಎಂಡಿಎಂಎ ಮಾದಕ ವಸ್ತುವನ್ನು ಹೊಂದಿಕೊಂಡು ಸಾರ್ವಜನಿಕರಿಗೆ ಮಾರಾಟ ಮಾಡುತ್ತಿದ್ದ ಕಾರನ್ನು ಪತ್ತೆ ಹಚ್ಚಿ ಕಾರಿನಲ್ಲಿದ್ದ 42 ಗ್ರಾಂ ಎಂಡಿಎಂಎ ನ್ನು ವಶಪಡಿಸಿಕೊಂಡಿದ್ದಾರೆ. ಆರೋಪಿಗಳಿಂದ 2,10,000/- ರೂ ಮೌಲ್ಯದ 42 ಗ್ರಾಂ ನಿಷೇಧಿತ ಮಾದಕ ವಸ್ತು ಎಂಡಿಎಂಎ, 5 ಮೊಬೈಲ್ ಫೋನ್ ಗಳು, ಹೊಸ ಮಾರುತಿ ಬಲೆನೋ ಕಾರು, ಡಿಜಿಟಲ್ ತೂಕ ಮಾಪಕವನ್ನು ಸ್ವಾಧೀನಪಡಿಸಿಕೊಳ್ಳಲಾಗಿದೆ. ವಶಪಡಿಸಿಕೊಂಡ ಸೊತ್ತಿನ ಒಟ್ಟು ಮೌಲ್ಯ ರೂ. 12,18,500/- ಎಂದು ಅಂದಾಜಿಸಲಾಗಿದೆ. ಈ ಬಗ್ಗೆ ಸೆನ್ ಕ್ರೈಂ ಪೊಲೀಸ್ ಠಾಣೆಯಲ್ಲಿ ಪ್ರಕರಣ ದಾಖಲಾಗಿದೆ.

ಆರೋಪಿಗಳ ಪೈಕಿ ಶಾಜಹಾನ್ ಎಂಬಾತನ ವಿರುದ್ಧ ಈ ಹಿಂದೆ ಕಾಸರಗೋಡು ಜಿಲ್ಲೆ ಮೇಲ್ಪರಂಬ, ಬೇಕಲಂ, ವಿದ್ಯಾನಗರ, ಕುಂಬಳೆ, ಕಾಸರಗೋಡು ಪೊಲೀಸ್ ಠಾಣೆಗಳಲ್ಲಿ ಮಾದಕ ವಸ್ತು ಮಾರಾಟ/ಸೇವನೆಗೆ ಸಂಬಂಧಪಟ್ಟಂತೆ ಒಟ್ಟು 7 ಪ್ರಕರಣ ದಾಖಲಾಗಿದೆ. ಇನ್ನೋರ್ವ ಆರೋಪಿ ಮೊಹಮ್ಮದ್ ನಿಶಾದ್ ಎಂಬಾತನ ವಿರುದ್ಧ ಪುತ್ತೂರು ನಗರ ಹಾಗೂ ಮಡಿಕೇರಿ ಪೊಲೀಸ್ ಠಾಣೆಯಲ್ಲಿ 2 ದ್ವಿಚಕ್ರ ವಾಹನ ಕಳವು ಪ್ರಕರಣ ದಾಖಲಾಗಿದೆ.

ಈ ಮಾದಕ ವಸ್ತು ಎಂಡಿಎಂಎ ಮಾರಾಟ/ಸಾಗಾಟದ ಪತ್ತೆ ಕಾರ್ಯದಲ್ಲಿ ಸಿಸಿಬಿ ಘಟಕದ ಎಸಿಪಿ ಮನೋಜ್ ಕುಮಾರ್ ನಾಯ್ಕ್ ರವರ ನೇತೃತ್ವದಲ್ಲಿ ಪೊಲೀಸ್ ನಿರೀಕ್ಷಕರಾದ ಶ್ಯಾಮ್ ಸುಂದರ್ ಹೆಚ್ ಎಂ, ಪಿಎಸ್ಐಯವರಾದ ನರೇಂದ್ರ ಮತ್ತು ಸಿಸಿಬಿ ಸಿಬ್ಬಂದಿಯವರು ಪಾಲ್ಗೊಂಡಿದ್ದರು.

RELATED ARTICLES

LEAVE A REPLY

Please enter your comment!
Please enter your name here

Most Popular