Friday, November 22, 2024
Flats for sale
Homeಜಿಲ್ಲೆಮಂಗಳೂರು : ಎಡನೀರು ಶ್ರೀಗಳ ಮೇಲೆ ಹಲ್ಲೆ ಯತ್ನ : ದ.ಕ. ಸಂಸದ ಕ್ಯಾ. ಬ್ರಿಜೇಶ್‌...

ಮಂಗಳೂರು : ಎಡನೀರು ಶ್ರೀಗಳ ಮೇಲೆ ಹಲ್ಲೆ ಯತ್ನ : ದ.ಕ. ಸಂಸದ ಕ್ಯಾ. ಬ್ರಿಜೇಶ್‌ ಚೌಟ, ಹಿಂದೂ ಮಹಾ ಸಭಾ ಕರ್ನಾಟಕ ಘಟಕ ತೀವ್ರ ಖಂಡನೆ…!

ಮಂಗಳೂರು : ಕಾಸರಗೋಡಿನ ಎಡನೀರು ಮಠದ ಶ್ರೀ ಸಚ್ಚಿದಾನಂದ ಭಾರತೀ ತೀರ್ಥ ಶ್ರೀಗಳು ಸಂಚರಿಸುತ್ತಿದ್ದ ಕಾರನ್ನು ಸಮಾಜಘಾತುಕ ಶಕ್ತಿಗಳು ಅಡ್ಡಗಟ್ಟಿ ಹಾನಿಗೊಳಿಸಿರುವುದನ್ನು ದಕ್ಷಿಣ ಕನ್ನಡ ಸಂಸದ ಕ್ಯಾ. ಬ್ರಿಜೇಶ್ ಚೌಟ ಹಾಗೂ ಹಿಂದೂ ಮಹಾ ಸಭಾ – ಕರ್ನಾಟಕ ಘಟಕ ತೀವ್ರವಾಗಿ ಖಂಡಿಸಿದೆ.

ಈ ಬಗ್ಗೆ ಪತ್ರಿಕಾ ಹೇಳಿಕೆ ನೀಡಿರುವ ಸಂಸದರು, “400 ವರ್ಷಗಳ ಪ್ರಾಚೀನ ಇತಿಹಾಸ ಹೊಂದಿರುವ ಎಡನೀರು ಸಂಸ್ಥಾನದ ಪೀಠಾಧಿಪತಿಯಾಗಿರುವ ಶ್ರೀ ಸಚ್ಚಿದಾನಂದ ಭಾರತೀ ಶ್ರೀಪಾದಂಗಳವರ ವಾಹನದ ಮೇಲೆ ದಾಳಿ ಮಾಡಿದ ದುಷ್ಕರ್ಮಿಗಳನ್ನು ಕೇರಳ ಸರ್ಕಾರವು ಕೂಡಲೇ ಬಂಧಿಸಿ ಇಂಥಹ ವಿಕೃತಿ ಮನಸ್ಥಿತಿಗಳನ್ನು ಮಟ್ಟ ಹಾಕುವ ಕೆಲಸವನ್ನು ಮಾಡಬೇಕು. ಶಾಂತಿ-ಸಾಮರಸ್ಯದ ಮೂಲಕ ಹಿಂದೂ ಸಮಾಜದ ಪರ ಕೆಲಸ ಮಾಡುತ್ತಿರುವ ಸ್ವಾಮೀಜಿ ಮೇಲೆಯೇ ಕಿಡಿಗೇಡಿಗಳು ನಡುರಸ್ತೆಯಲ್ಲೇ ಈ ರೀತಿ ಕಾನೂನು ಕೈಗೆತ್ತಿಕೊಂಡು ಹಲ್ಲೆಗೆ ಮುಂದಾಗಿರುವುದು ಅತ್ಯಂತ ಗಂಭೀರ ವಿಚಾರವಾಗಿದೆ ಎಂದು ಹೇಳಿದ್ದಾರೆ.

ಸಾರ್ವಜನಿಕ ಕಾರ್ಯಕ್ರಮದಿಂದ ಹಿಂದಿರುಗುವಾಗ ಕಾಸರಗೋಡಿನ ಬೋವಿಕ್ಕಾನ–ಇರಿಯಣ್ಣಿ ಮಾರ್ಗ ಮಧ್ಯೆ ಸ್ವಾಮೀಜಿಗಳು ಪ್ರಯಾಣಿಸುತ್ತಿದ್ದ ಕಾರನ್ನು ಫಾಲೋ ಮಾಡಿಕೊಂಡು ಬಂದ ದುಷ್ಕರ್ಮಿಗಳ ಗುಂಪು ದಾಳಿ ನಡೆಸಿರುವುದು ಅಕ್ಷಮ್ಯ. ಲಕ್ಷಾಂತರ ಹಿಂದೂಗಳು ಭಕ್ತಿಯಿಂದ ಆರಾಧಿಸುವ ಹಾಗೂ ಹಿಂದೂ ಸಮಾಜದ ಆಧರಣೀಯರು, ಮಾರ್ಗದರ್ಶಕರಾಗಿರುವ, ಆಧ್ಯಾತ್ಮಿಕ ಗುರು ಎಡನೀರು ಸಂಸ್ಥಾನದ ಶ್ರೀಗಳ ಮೇಲೆ ನಡೆದಿರುವ ಈ ದಾಳಿಯು ಹಿಂದೂ ಸಮುದಾಯದವರ ಮೇಲೆ ನಡೆಸಿರುವ ದಾಳಿಯಾಗಿದೆ. ಇಂಥಹ ಜಿಹಾದಿ ಮನಸ್ಥಿತಿಯ ಘಟನೆಗಳನ್ನು ಇಡೀ ಹಿಂದೂ ಸಮಾಜವು ಒಟ್ಟಾಗಿ ಖಂಡಿಸಬೇಕು ಎಂದು ಕ್ಯಾ. ಚೌಟ ಅಭಿಪ್ರಾಯಪಟ್ಟರು. ಹೀಗಿರುವಾಗ, ಕೇರಳ ಸರ್ಕಾರವು ಸ್ವಾಮೀಜಿ ಮೇಲಿನ ಹಲ್ಲೆ ಯತ್ನ ಪ್ರಕರಣದ ತನಿಖೆಯನ್ನು ತ್ವರಿತಗತಿಯಲ್ಲಿ ನಡೆಸಿ ತಪ್ಪಿತಸ್ಥರನ್ನು ಬಂಧಿಸಿ ಕಠಿಣ ಕಾನೂನು ಕ್ರಮ ಕೈಗೊಳ್ಳಬೇಕು. ಜತೆಗೆ ಎಡನೀರು ಶ್ರೀಗಳಿಗೆ ಸೂಕ್ತ ಭದ್ರತೆಯನ್ನು ಸರ್ಕಾರದ ಕಡೆಯಿಂದ ಕಲ್ಪಿಸಬೇಕೆಂದು ಮುಖ್ಯಮಂತ್ರಿ ಪಿಣರಾಯಿ ವಿಜಯನ್ ಅವರನ್ನು ಸಂಸದರು ಒತ್ತಾಯಿಸಿದ್ದಾರೆ.

ಕಾಸರಗೋಡು ಜಿಲ್ಲೆ ಯ ಎಡನೀರು ಮಠದ ಸ್ವಾಮೀ ಜಿ ಅವರ ವಾಹನಕ್ಕೆ ದಾಳಿ ನಡೆಸಿದ ಕಿಡಿಗೇಡಿಗಳನ್ನು ತಕ್ಷಣ ಬಂಧಿಸಬೇಕೆಂದು ಹಿಂದೂ ಮಹಾ ಸಭಾ ಅಧ್ಯಕ್ಷ ಡಾ. ಎಲ್ ಕೆ ಸುವರ್ಣ ಆಗ್ರಹಿಸಿದ್ದಾರೆ. ಸಾರ್ವಜನಿಕ ಕಾರ್ಯಕ್ರಮದಿಂದ ಹಿಂದಿರುಗುವಾಗ ಬೋವಿಕಾನ – ಇರಿಯಣ್ಣಿ ಮಾರ್ಗ ಮಧ್ಯೆ ವಾಹನವನ್ನು ತಡೆದ ಮತಾಂದ ರ ತಂಡವೊಂದು ತಗಾದೆ ಎಬ್ಬಿಸಿತ್ತು. ಇದೇ ದಾರಿಯಲ್ಲಿ ಕಾರ್ಯಕ್ರಮ ಮುಗಿಸಿ ಮರಳಿ ಬರುವಾಗ ಇರಿಯಣ್ಣಿಯಿಂದಲೇ ಹಿಂಬಾಲಿಸಿದ ಬಂದವರ ಪೈಕಿ ಬಾವಿಕೆರೆ ಎಂಬಲ್ಲಿ ದೊಣ್ಣೆಯಿಂದ ಕಾರಿನ ಗಾಜಿಗೆ ಹೊಡೆದರೆಂದೂ, ಕಾರಿನ ಗಾಜಿಗೆ ಹಾನಿಯಾಗಿದೆಯೆಂದೂ ತಿಳಿದುಬಂದಿದೆ. ಈ ಸಂದರ್ಭ ಸ್ವಾಮೀಜಿಯವರು ಕಾರು ನಿಲ್ಲಿಸದೇ ಶಾಂತರಾಗಿ ಮುಂದುವರಿದಿದ್ದಾರೆ.

ಎಡನೀರು ಸಂಸ್ಥಾನದ ಶ್ರೀ ಶ್ರೀ ಸಚ್ಚಿದಾನಂದ ಭಾರತೀ ಶ್ರೀಪಾದಂಗಳವರ ವಾಹನದ ಮೇಲೆ ದುಷ್ಕರ್ಮಿಗಳ ದಾಳಿಇದು ಹಿಂದೂ ಸಮಾಜದ ಮೇಲೆ ಆಗಿರುವ ದಾಳಿ ಇದನ್ನು ಹಿಂದೂ ಸಮಾಜ ಸಹಿಸಲ್ಲ ಲಕ್ಷಾಂತರ ಹಿಂದೂಗಳು ಭಕ್ತಿಯಿಂದ ಆರಾಧಿಸುವ ಎಡನೀರು ಸಂಸ್ಥಾನದ ಸ್ವಾಮೀಜಿಗಳ ವಾಹನದ ಮೇಲಾದ ಆದ ದಾಳಿಯನ್ನು ಖಂಡಿಸುತ್ತಾ , ಕೇಂದ್ರ ಸರಕಾರ ಈ ಘಟನೆ ಯಾ ವರದಿ ಪಡೆದು ಸೂಕ್ತ ಭದ್ರತೆ ನೀಡಲು ಕೇರಳ ಸರಕಾರ ಕ್ಕೆ ಆದೇಶ ನೀಡಬೇಕು ಎಂದು ಹಿಂದೂ ಮಹಾ ಸಭಾ ಒತ್ತಾಯಿಸಿದೆ.

RELATED ARTICLES

LEAVE A REPLY

Please enter your comment!
Please enter your name here

Most Popular