ಮಂಗಳೂರು ; ದಕ್ಷಿಣ ಕನ್ನಡ ಜಿಲ್ಲಾ ಬ್ಯಾಡ್ಮಿಂಟನ್ ಅಸೋಸಿಯೇಷನ್ ನಿಂದ 5 ವರ್ಷಕ್ಕಿಂತ ಮೇಲ್ಪಟ್ಟ ಮಕ್ಕಳಿಗಾಗಿ ಪ್ರತ್ಯೇಕವಾಗಿ ದಿನಾಂಕ: 01-04-2025 ರಿಂದ 30-04-2025 ರವರೆ ಉಚಿತ ಬ್ಯಾಡ್ಮಿಂಟನ್ ತರಬೇತಿ ಶಿಬಿರ ನಡೆಯಲಿದೆ ಎಂದು ಪತ್ರಿಕಾಗೋಷ್ಠಿಯಲ್ಲಿ ತಿಳಿಸಿದ್ದಾರೆ.
ಈ ಉಪಕ್ರಮವು ಯುವ ಉತ್ಸಾಹಿಗಳಲ್ಲಿ ಕ್ರೀಡೆಯನ್ನು ಉತ್ತೇಜಿಸುವ ಮತ್ತು ಅವರ ಪ್ರತಿಭೆಯನ್ನು ಬೆಳೆಸುವ ಗುರಿಯನ್ನು ಹೊಂದಿದ್ದು 5 ವರ್ಷಕ್ಕಿಂತ ಮೆಲ್ಪಟ್ಟವರಿಗೆ 10 ಎಸಿ ಬ್ಯಾಡ್ಮಿಂಟನ್ ಕೋರ್ಟ್‌ಗಳನ್ನು ಹೊಂದಿರುವ ಫಾದರ್ ಮುಲ್ಲರ್ಸ್ ಒಳಾಂಗಣ ಕ್ರೀಡಾಂಗಣದಲ್ಲಿ 9 ಘಂಟೆಯಿಂದ 12 ರ ವರೆಗೆ ನಡೆಯಲಿದೆ ಎಂದು ದಕ್ಷಿಣ ಕನ್ನಡ ಜಿಲ್ಲಾ ಬ್ಯಾಡ್ಮಿಂಟನ್ ಅಸೋಸಿಯೇಷನ್‌ನ ಉಪಾಧ್ಯಕ್ಷ ಅವಿನಾಶ್ ಸುವರ್ಣ ತಿಳಿಸಿದ್ದಾರೆ.
ಯುವ ಪೀಳಿಗೆಯಲ್ಲಿ ಬ್ಯಾಡ್ಮಿಂಟನ್ ಅನ್ನು ಉತ್ತೇಜಿಸಲು ಮತ್ತು ಅವರ ಕೌಶಲ್ಯಗಳನ್ನು ಅಭಿವೃದ್ಧಿಪಡಿಸಲು ಇದೊಂದು ಉತ್ತಮ ವೇದಿಕೆಯಾಗಿದ್ದು ಅನುಭವಿ ತರಬೇತುದಾರರು ಭಾಗವಹಿಸುವವರಿಗೆ ಮಾರ್ಗದರ್ಶನ ನೀಡುತ್ತಾರೆ, ಪ್ರಕಾಶ್ ಪಡುಕೋಣೆ ಬ್ಯಾಡ್ಮಿಂಟನ್ ಅಕಾಡೆಮಿಯಿಂದ ಅರ್ಹ ತರಬೇತಿ ಪಡೆದ ತರಬೇತುದಾರರೊಂದಿಗೆ ಹೆಚ್ಚಿನ ತರಬೇತಿ ನೀಡುತ್ತಾರೆಂದು ತಿಳಿಸಿದ್ದಾರೆ.
ಪತ್ರಿಕಾಗೋಷ್ಠಿಯಲ್ಲಿ ದಕ್ಷಿಣ ಕನ್ನಡ ಜಿಲ್ಲಾ ಬ್ಯಾಡ್ಮಿಂಟನ್ ಅಸೋಸಿಯೇಷನ್‌ನ ಉಪಾಧ್ಯಕ್ಷ ಅವಿನಾಶ್ ಸುವರ್ಣ, ಎ ಎಸ್ ವೆಂಕಟೇಶ್ ಜಂಟಿ ಕಾರ್ಯದರ್ಶಿ, ದಯಾನಂದ ಪಿ ಎಸ್ ಖಜಾಂಚಿ, ಸುರೇಶ್ ಎಚ್‌ಪಿ ಇಸಿ ಸದಸ್ಯ ಪತ್ರಿಕಾಗೋಷ್ಠಿಯಲ್ಲಿ ಉಪಸ್ಥಿತರಿದ್ದರು