Wednesday, March 11, 2026
Flats for sale
Homeಜಿಲ್ಲೆಮಂಗಳೂರು ; ಕಣಚೂರು ವೈದ್ಯಕೀಯ ಶಿಕ್ಷಣ ಮಹಾವಿದ್ಯಾಲಯದಲ್ಲಿ ಪದವಿ ಪ್ರದಾನ..!

ಮಂಗಳೂರು ; ಕಣಚೂರು ವೈದ್ಯಕೀಯ ಶಿಕ್ಷಣ ಮಹಾವಿದ್ಯಾಲಯದಲ್ಲಿ ಪದವಿ ಪ್ರದಾನ..!

ಮಂಗಳೂರು : ಶೈಕ್ಷಣಿಕ ಪದವಿ ಪಡೆಯುವುದು ಒಂದು ಸ್ಮರಣೀಯ ಸಂದರ್ಭ. ಅದು ನಮ್ಮ ಜೀವನದ ಪ್ರಯಾಣದ ಒಂದು ಭಾಗ. ನಮ್ಮ ಯಶಸ್ಸನ್ನು ಸಂಭ್ರಮಿಸಬೇಕು ಜತೆಗೆ ನಮ್ಮ ವೃತ್ತಿ ಜೀವನ ಪಯಣ ಮುಂದುವರಿಸಬೇಕು ಎಂದು ಬೆಂಗಳೂರು ರಾಜೀವ್ ಗಾಂಧಿ ಆರೋಗ್ಯ ವಿಜ್ಞಾನ ವಿಶ್ವವಿದ್ಯಾಲಯದ ಉಪಕುಲಪತಿ ಡಾ. ಭಗವಾನ್ ಬಿ.ಸಿ ಹೇಳಿದರು.

ಅವರು ಕಣಚೂರು ವೈದ್ಯಕೀಯ ಶಿಕ್ಷಣ ಮಹಾವಿದ್ಯಾಲಯದ ಕಾಲೇಜಿನ ಸಭಾಂಗಣದಲ್ಲಿ ಶನಿವಾರ ಜರಗಿದ ಪದವಿ ಪ್ರದಾನ ಸಮಾರಂಭದಲ್ಲಿ ಮುಖ್ಯ ಅತಿಥಿಯಾಗಿ ಪಾಲ್ಗೊಂಡು 129 ಪದವೀದರರಿಗೆ ಮತ್ತು 26 ಸ್ನಾತಕೋತ್ತರ ಪದವೀದರರಿಗೆ ಪದವಿ ಪ್ರದಾನ ಮಾಡಿ ಘಟಕೋತ್ಸವ ಭಾಷಣ ಮಾಡಿದರು.

ನೂತನ ಪದವಿದರರು ತೆಗೆದುಕೊಂಡ ಪ್ರತಿಜ್ಞೆಗೆ ಬದ್ಧವಾಗಿ, ಪ್ರಾಮಾಣಿಕತೆಯಿಂದ, ಶ್ರದ್ಧೆ, ಶ್ರಮ, ಕರ್ತವ್ಯ ನಿಷ್ಟೆಯಿಂದ ವೃತ್ತಿ ಜೀವನ ನಿರ್ವಹಿಸಿದರೆ ಯಶಸ್ಸು ಸಾಧಿಸಬಹುದೆಂದು ಸಲಹೆ ನೀಡಿದರು.
ಕಣಚೂರು ಇಸ್ಲಾಮಿಕ್ ಶಿಕ್ಷಣ ಟ್ರಸ್ಟ್ ಅಧ್ಯಕ್ಷ ಡಾ.ಹಾಜಿ ಯು.ಕೆ. ಮೋನು ಅಧ್ಯಕ್ಷತೆ ವಹಿಸಿದ್ದರು. ಕರ್ನಾಟಕ ರಾಜ್ಯ ಆರೋಗ್ಯ ರಕ್ಷಣಾ ಮಂಡಳಿಯ ಅಧ್ಯಕ್ಷ ಡಾ. ಇಫ್ತಿಕಾರ್ ಫರೀದ್ ಅವರು ಪಾಲ್ಗೊಂಡು ಸಂದೋರ್ಬಿಜಿತವಾಗಿ ಮಾತನಾಡಿದರು.

ಕಾಲೇಜಿನ ಪ್ರಿನ್ಸಿಪಾಲ್ ಡಾ. ಶಹನವಾಜ್ ಮನಿಪಾಡಿಯವರು ನೂತನ ಪದವಿದದರಿಗೆ ಪ್ರತಿಜ್ಞಾ ವಿಧಿವಿಧಾನವನ್ನು ನೆರವೇರಿಸಿ ಯುಶಸ್ಸು ಹಾರೈಸಿದರು.

ಈ ಸಂದರ್ಭದಲ್ಲಿ ಸ್ನಾತಕೋತ್ತರ ಮೂಳೆ ಶಾಸ್ತ್ರ ವಿಭಾಗದಲ್ಲಿ ಪ್ರಥಮ ರ‍್ಯಾಂಕ್ ಪಡೆದ ಡಾ. ಚೇತನ್ ಕುಮಾರ್ ಅವರ ಗಮನಾರ್ಹ ಸಾಧನೆಯನ್ನು ಪರಿಗಣಿಸಿ ಗೌರವಿಸಲಾಯಿತು. ರಾಜೀವ್ ಗಾಂಧಿ ವಿಶ್ವವಿದ್ಯಾಲಯ ಆಯೋಜಿಸಿದ ಅಂತಿಮ ಎಂ.ಬಿ.ಬಿ.ಎಸ್. ಪರೀಕ್ಷೆಯಲ್ಲಿ ಅತೀ ಹೆಚ್ಚು ಅಂಕ ಮತ್ತು ರ‍್ಯಾಂಕ್ ಪಡೆದ ಡಾ. ಅಯಿಮಾನ್ ಫೈಜಾ ಫಾತಿಮಾ ಅವರಿಗೆ ಕಣಚೂರು ಮೋನು ಸ್ವರ್ಣ ಪದಕ ನೀಡಿ ಸನ್ಮಾನಿಸಲಾಯಿತು. ಸಂಸ್ಥೆಯ ಕಾರ್ಯನಿರ್ವಾಹಕ ನಿರ್ದೇಶಕ ಅಬ್ದುಲ್ ರಹಿಮಾನ್ ಸ್ವಾಗತಿಸಿದರು.

ಈ ಸಂದರ್ಭ ನಿರ್ದೇಶಕರಾದ ಝೊಹಾರ ಮೋನು, ಕಣಚೂರು ಆರೋಗ್ಯ ವಿಜ್ಞಾನ ಸಲಹಾ ಸಮಿತಿಯ ಅಧ್ಯಕ್ಷ ಡಾ. ಮೊಹಮ್ಮದ್ ಇಸ್ಮಾಯಿಲ್, ಸದಸ್ಯ ಡಾ. ವೆಂಕಟ್‌ರಾಯi ಪ್ರಭು, ವೈದ್ಯಕೀಯ ಅಧೀಕ್ಷಕ ಡಾ. ಹರೀಶ್ ಶೆಟ್ಟಿ, ಉಪ ವೈದ್ಯಕೀಯ ಅಧೀಕ್ಷಕ ಡಾ. ಅಂಜನ್ ಕುಮಾರ್, ಆಡಳಿತ ಅಧಿಕಾರಿ ಡಾ. ರೋಹನ್ ಮೋನಿಸ್ ಉಪಸ್ಥಿತರಿದ್ದರು. ನಿಶ್ಚಿತಾ ಸಾಲಿನ್ಸ್ ಮತ್ತು ಪ್ರೀವಲ್ ಶ್ರೇಯಾ ಕ್ರಾಸ್ತ ನಿರೂಪಿಸಿದ ಕಾರ್ಯಕ್ರಮದಲ್ಲಿ ಪ್ರಾಂಶುಪಾಲ ಡಾ. ಶಹನವಾಜ್ ಮನಿಪಾಡಿ ವಂದಿಸಿದರು.

RELATED ARTICLES

LEAVE A REPLY

Please enter your comment!
Please enter your name here

Most Popular