Monday, July 6, 2026
Homeಜಿಲ್ಲೆಮಂಗಳೂರು : ಕದ್ದ FZ  ಬೈಕ್ ನೊಂದಿಗೆ ರೌಂಡ್ಸ್ ಹೋಗುವ ವೇಳೆ ಸರಗಳ್ಳತನ, ಆರೋಪಿಗಳ ಬಂಧನ...

ಮಂಗಳೂರು : ಕದ್ದ FZ  ಬೈಕ್ ನೊಂದಿಗೆ ರೌಂಡ್ಸ್ ಹೋಗುವ ವೇಳೆ ಸರಗಳ್ಳತನ, ಆರೋಪಿಗಳ ಬಂಧನ .

ಮಂಗಳೂರು : ಡಿ. 12 ರಂದು ಯೆಯ್ಯಾಡಿಯ ಶ್ರೀ ಹರಿ ಕಾಂಪ್ಲೆಕ್ಸ್ ನ ಪಾರ್ಕಿಂಗ್ ಬಳಿ ನಿಲ್ಲಿಸಿದ್ದ  ಯಮಹಾ  FZ   ಕಂಪನಿಯ  KA-19-ER-7755 ನೇ ಮೋಟಾರ್ ಸೈಕಲ್ ನ್ನು ಕಳವು ಆದ ಬಗ್ಗೆ ಕದ್ರಿ ಪೊಲೀಸ್ ಠಾಣೆಯಲ್ಲಿ ದೂರು ದಾಖಲಾಗಿತ್ತು ಈ ಬಗ್ಗೆ ಕದ್ರಿ ಅಫರಾಧ ವಿಭಾಗದ ಸಿಬ್ಬಂದಿಗಳಿಗೆ ದೊರೆತ ಖಚಿತ ಮಾಹಿತಿಯಂತೆ ಡಿ. 16 ರಂದು ಪ್ರಕರಣದ ಪ್ರಮುಖ ಆರೋಪಿ  ಪೈಸಲ್ ತೋಟ ಹಾಗೂ ನಿತೀನ್  ಕುಮಾರ್ ಎಂಬವರನ್ನು ಮೈಸೂರಿನಲ್ಲಿ ವಶಕ್ಕೆ ಪಡೆದು ವಿಚಾರಿಸಿದಾಗ ಈ ಆರೋಪಿಗಳು ಡಿ.13 ರಂದು ಭಟ್ಕಳ ಗ್ರಾಮಿಣ ಪೊಲೀಸ್ ಠಾಣಾ ವ್ಯಾಪ್ತಿಯ ಗರ್ಡಿ ಹಿತ್ಲು ಬೆಳಕೆ ಭಟ್ಕಳ ತಾಲೂಕಿನಲ್ಲಿ ವಯೋವೃದ್ದ ಮಹಿಳೆಯಾದ 70 ವರ್ಷದ ಹೊನ್ನಮ್ಮ ಮಹಾದೇವ ನಾಯ್ಕ್ ರವರ ಕುತ್ತಿಗೆಯಿಂದ ಚಿನ್ನದ ಚೈನ್ ನ್ನು ಕಸಿದುಕೊಂಡು ಪರಾರಿಯಾದ ಪ್ರಕರಣದಲ್ಲಿ ಭಾಗಿಯಾಗಿರುವುದಾಗಿ ಬಾಯಿ ಬಿಟ್ಟಿದ್ದಾರೆ.ಆರೋಪಿಗಳಿಂದ 1,20,000/- ಮೌಲ್ಯದ ಚಿನ್ನದ ಸರ-1, ಇದರ ಒಂದು ಬೈಕ್-1 ಅಂದಾಜು ಮೌಲ್ಯ ರೂ  45,000/- ಸೊತ್ತನ್ನು ವಶಪಡಿಸಿಕೊಳ್ಳಲಾದೆ.

 ಆರೋಪಿ ಪೈಸಲ್ ನ ವಿರುದ್ದ ಕರ್ನಾಟಕದ ಉಡುಪಿ ಕಾರ್ಕಳ, ಮಣಿಪಾಲ .ಮಂಗಳೂರು. ಬೆಳ್ತಂಗಡಿ, ವಿಟ್ಲ, ಕಂಕನಾಡಿ ನಗರ ಪೊಲೀಸ್ ಠಾಣೆ, ಪುತ್ತೂರು, ಶಿರ್ವ ಸುರತ್ಕಲ್, ಕಡಬ, ಕೊಣಾಜೆ, ಮಡಿಕೇರಿಯ ಕುಶಾಲ ನಗರ,  ಹಾಗೂ ಕೇರಳ ರಾಜ್ಯಗಳಲ್ಲಿ ರಾಬರಿ, ದರೋಡೆ, ಕಳ್ಳತನದ ಮತ್ತು ಕೊಲೆ ಪ್ರಕರಣ ಸೇರಿದಂತೆ  ಸುಮಾರು 42 ಪ್ರಕರಣಗಳು ದಾಖಲಾಗಿದೆ. ಈತನ ವಿರುದ್ದ ವಿವಿಧ ನ್ಯಾಯಾಲಯಗಳಲ್ಲಿ 10 ಕ್ಕಿಂತಲೂ ಹೆಚ್ಚು ಜಾಮೀನು ರಹಿತ ವಾರೆಂಟ್ ಇದ್ದು, ನ್ಯಾಯಾಲಯಕ್ಕೆ ಹಾಜರಾಗದೇ ತಲೆ ತಪ್ಪಿಸಿಕೊಂಡಿದ್ದಾನೆ.

RELATED ARTICLES

LEAVE A REPLY

Please enter your comment!
Please enter your name here

Most Popular