ಮಂಗಳೂರು : ದಕ್ಷಿಣ ಕನ್ನಡ ಜಿಲ್ಲೆಯಾದ್ಯಂತ ರೆಡ್ ಅಲರ್ಟ್ ಹಿನ್ನಲೆ ಭಾರೀ ಮಳೆ ಸಾಧ್ಯತೆ ಇರುವುದರಿಂದ ಮಂಗಳೂರು,ಪುತ್ತೂರು,ಬಂಟ್ವಾಳ ಮುಲ್ಕಿ,ಮೂಡಬಿದರೆ, ಉಳ್ಳಾಲ ತಾಲೂಕಿನ ಎಲ್ಲಾ ಅಂಗನವಾಡಿ, ಸರ್ಕಾರಿ, ಅನುದಾನಿತ ಮತ್ತು ಖಾಸಗಿ ಪ್ರಾಥ ಪ್ರೌಢಶಾಲೆ, ಪದವಿ ಪೂರ್ವ ಕಾಲೇಜು, (12 ನೇ ತರಗತಿವರೆಗೆ) ಇಂದು ರಜೆ ಘೋಷಿಸಲಾಗಿದೆ.
ಬಂಗಾಳಕೊಲ್ಲಿಯಲ್ಲಿ ವಾಯುಭಾರ ಕುಸಿತ ಉಂಟಾಗಿದ್ದು, ಚಂಡಮಾರುತ ರೂಪುಗೊಂಡಿದೆ. ಹೀಗಾಗಿ ಕರ್ನಾಟಕದಲ್ಲೂ ಹೆಚ್ಚು ಮಳೆ ಯಾಗುತ್ತಿದೆ. ಇಂದು ಐದು ಜಿಲ್ಲೆಗಳಲ್ಲಿ ವಿಪರೀತ ಮಳೆಯಾಗಲಿದ್ದು, ರೆಡ್ ಅಲರ್ಟ್ ಘೋಷಿಸಲಾಗಿದೆ. ದಕ್ಷಿಣ ಕನ್ನಡ, ಉತ್ತರ ಕನ್ನಡ, ಉಡುಪಿ, ಚಿಕ್ಕಮಗಳೂರು, ಶಿವಮೊಗ್ಗ ಜಿಲ್ಲೆಗಳಿಗೆ ರೆಡ್ ಅಲರ್ಟ್ ಘೋಷಿಸಲಾಗಿದೆ.
ಪೋಷಕರು ಮಕ್ಕಳು ತಗ್ಗು ಪ್ರದೇಶಗಳು, ಸರೋವರಗಳು, ಸಮುದ್ರ ತೀರ ಮತ್ತು ನದಿ ತೀರಗಳಿಗೆ ಹೋಗದಂತೆ ನೋಡಿಕೊಳ್ಳಬೇಕು. ಮೀನುಗಾರರಿಗೂ ನೀರಿಗೆ ಇಳಿಯದಂತೆ ಎಚ್ಚರಿಕೆ ನೀಡಲಾಗಿದೆ. ತಾಲ್ಲೂಕು ಮಟ್ಟದ ಅಧಿಕಾರಿಗಳು ಕೇಂದ್ರ ಕಚೇರಿಯಲ್ಲಿ ಕಡ್ಡಾಯವಾಗಿ ಇರಬೇಕೆಂದು ತಿಳಿಸಲಾಗಿದೆ. ಜಿಲ್ಲಾಡಳಿತದಿಂದ ವಿವಿಧ ಹುದ್ದೆಗಳಿಗೆ ನೇಮಕಗೊಂಡ ನೋಡಲ್ ಅಧಿಕಾರಿಗಳು ಜಾಗರೂಕರಾಗಿರಬೇಕು ಮತ್ತು ಸಾರ್ವಜನಿಕ ದೂರುಗಳಿಗೆ ಸ್ಪಂದಿಸಬೇಕು ಎಂದು ಸೂಚಿಸಲಾಗಿದೆ.