Wednesday, May 20, 2026
Flats for sale
Homeಜಿಲ್ಲೆಮಂಗಳೂರು : ಕರಾವಳಿಯ ಇತಿಹಾಸದಲ್ಲೇ ಮೊದಲ ಬಾರಿಗೆ ಮಂಗಳೂರಿನಲ್ಲಿ ಏಕಕಾಲಕ್ಕೆ ಮಾಜಿ ಸಚಿವ ಕೃಷ್ಣ. ಜೆ...

ಮಂಗಳೂರು : ಕರಾವಳಿಯ ಇತಿಹಾಸದಲ್ಲೇ ಮೊದಲ ಬಾರಿಗೆ ಮಂಗಳೂರಿನಲ್ಲಿ ಏಕಕಾಲಕ್ಕೆ ಮಾಜಿ ಸಚಿವ ಕೃಷ್ಣ. ಜೆ .ಪಾಲೆಮಾರ್ ರವರಿಂದ ನಾಲ್ಕು ಭವ್ಯ ಸಭಾಭವನಗಳ ಲೋಕಾರ್ಪಣೆ.

ಮಂಗಳೂರು : ಲ್ಯಾಂಡ್ ಲಿಂಕ್ಸ್ ಅಂದ್ರೆ ಕೃಷ್ಣ. ಜೆ .ಪಾಲೆಮಾರ್. ಸಂಸ್ಥೆಯ 45 ವರ್ಷಗಳ ಯಶಸ್ವಿ ಪಯಣದ ಸವಿನೆನಪಿಗಾಗಿ, ಕೃಷ್ಣ ಜೆ. ಪಾಲೆಮಾರ್ ನೇತೃತ್ವದಲ್ಲಿ ಮಂಗಳೂರಿನ ನಾಲ್ಕು ಪ್ರಮುಖ ಪ್ರದೇಶಗಳಲ್ಲಿ ನಿರ್ಮಾಣಗೊಂಡಿರುವ ನಾಲ್ಕು ಅತ್ಯಾಧುನಿಕ ಮತ್ತು ಅದ್ದೂರಿ ಸಭಾಭವನಗಳು ಮೇ 23ರಂದು ಏಕಕಾಲದಲ್ಲಿ ಲೋಕಾರ್ಪಣೆಯಾಗಲಿವೆ.

ಈ ಐತಿಹಾಸಿಕ ಸಮಾರಂಭವನ್ನು ಎಸ್. ಅಬ್ದುಲ್ ನಜೀರ್ ಉದ್ಘಾಟಿಸಲಿದ್ದಾರೆ. ಮಂಗಳೂರಿನ ಮೇರಿಹಿಲ್‌ನಲ್ಲಿರುವ ಪಾಲೆಮಾರ್ ಕನ್ವೆನ್ಶನ್ ಸೆಂಟರ್‌ನಲ್ಲಿ ಬೆಳಿಗ್ಗೆ 10 ಗಂಟೆಗೆ ಮುಖ್ಯ ಕಾರ್ಯಕ್ರಮ ನಡೆಯಲಿದೆ.

ಕಾರ್ಯಕ್ರಮದಲ್ಲಿ ಕೇಂದ್ರ ರೈಲ್ವೆ ಮತ್ತು ಜಲಶಕ್ತಿ ರಾಜ್ಯ ಸಚಿವ ವಿ. ಸೋಮಣ್ಣ, ವಿಧಾನಸಭೆ ಸಭಾಧ್ಯಕ್ಷ ಯು.ಟಿ. ಖಾದರ್, ಸಂಸದ ಕ್ಯಾಪ್ಟನ್ ಬ್ರಿಜೇಶ್ ಚೌಟ, ಶಾಸಕರಾದ ಡಾ. ವೈ. ಭರತ್ ಶೆಟ್ಟಿ, ಡಿ. ವೇದವ್ಯಾಸ ಕಾಮತ್, ಉಮಾನಾಥ ಕೋಟ್ಯಾನ್, ವಿಧಾನ ಪರಿಷತ್ ಸದಸ್ಯ ಐವನ್ ಡಿಸೋಜ ಸೇರಿದಂತೆ ಹಲವು ಗಣ್ಯರು ಭಾಗವಹಿಸಲಿದ್ದಾರೆ.

ನಾಲ್ಕು ಸಭಾಭವನಗಳ ವಿಶೇಷತೆ

ಪಾಲೆಮಾರ್ ಕನ್ವೆನ್ಷನ್ ಸೆಂಟರ್ : ಸಾಂಪ್ರದಾಯಿಕತೆ ಮತ್ತು ಆಧುನಿಕತೆಯ ಸಮ್ಮಿಲನವಾಗಿರುವ ಈ ಸಭಾಂಗಣದಲ್ಲಿ ಅತ್ಯಾಧುನಿಕ ಒಳಾಂಗಣ ಸಭಾಂಗಣ, ಅತಿಥಿ ಕೊಠಡಿಗಳು, ಪ್ರಾರ್ಥನಾ ಮಂದಿರ ಮತ್ತು ವಿಶಾಲ ಪಾರ್ಕಿಂಗ್ ವ್ಯವಸ್ಥೆ ಇದೆ.

ಪಾಲೆಮಾರ್ ಗಾರ್ಡನ್ : ಹಸಿರು ಪರಿಸರದ ಮಧ್ಯೆ ನಿರ್ಮಾಣಗೊಂಡಿರುವ ಈ ಗಾರ್ಡನ್‌ನಲ್ಲಿ ಒಳಾಂಗಣ ಮತ್ತು ತೆರೆದ ಸಭಾಂಗಣ, ಕಾಟೇಜ್‌ಗಳು, ಈಜುಕೊಳ ಹಾಗೂ ವಿಶಾಲ ಮೈದಾನವಿದೆ.

ಪಾಲೆಮಾರ್ ಫಾರ್ಮ್ಸ್ : 20 ಎಕರೆ ಪ್ರದೇಶದಲ್ಲಿ ನಿರ್ಮಾಣಗೊಂಡಿರುವ ಈ ಫಾರ್ಮ್ಸ್ ಮದುವೆ, ಮೆಹೆಂದಿ, ಬರ್ತ್‌ಡೇ ಪಾರ್ಟಿ ಸೇರಿದಂತೆ ಹೊರಾಂಗಣ ಕಾರ್ಯಕ್ರಮಗಳಿಗೆ ಸೂಕ್ತವಾಗಿದೆ.

ನೇತ್ರಾವತಿ ಸಭಾಭವನ : ನೇತ್ರಾವತಿ ನದಿ ತಟದಲ್ಲಿರುವ ಈ ಸಭಾಂಗಣ ಧಾರ್ಮಿಕ, ಸಾಂಸ್ಕೃತಿಕ ಹಾಗೂ ವಿವಾಹ ಕಾರ್ಯಕ್ರಮಗಳಿಗೆ ಅನುಕೂಲಕರವಾಗಿದೆ. ಇಲ್ಲಿ ಕೇವಲ ಸಸ್ಯಾಹಾರಿ ಆಹಾರ ತಯಾರಿಕೆಗೆ ಮಾತ್ರ ಅವಕಾಶ ಕಲ್ಪಿಸಲಾಗಿದೆ.

ಕೃಷ್ಣ ಜೆ. ಪಾಲೆಮಾರ್ ಮಾತನಾಡಿ, “ಇವು ಕೇವಲ ವ್ಯಾಪಾರ ಉದ್ದೇಶದ ಯೋಜನೆಗಳಲ್ಲ. ಕರಾವಳಿ ಜನತೆ ನೀಡಿದ ಪ್ರೀತಿ ಮತ್ತು ಬೆಂಬಲಕ್ಕೆ ಪ್ರತಿಯಾಗಿ ಸಮಾಜಕ್ಕೆ ಏನಾದರೂ ಕೊಡುಗೆ ನೀಡಬೇಕು ಎಂಬ ಉದ್ದೇಶದಿಂದ ನಿರ್ಮಿಸಿದ್ದೇನೆ” ಎಂದು ತಿಳಿಸಿದ್ದಾರೆ.

ಸಾಮೂಹಿಕ ವಿವಾಹಗಳು ಹಾಗೂ ಸಮಾಜಮುಖಿ ಕಾರ್ಯಕ್ರಮಗಳಿಗೆ ನಿಯಮಾನುಸಾರ ಸಭಾಂಗಣಗಳನ್ನು ಉಚಿತವಾಗಿ ನೀಡಲು ಸಂಸ್ಥೆ ನಿರ್ಧರಿಸಿದೆ.

ಸಭಾಂಗಣಗಳ ನಿರ್ಮಾಣದಿಂದ ಡೆಕೋರೇಶನ್, ಕ್ಯಾಟರಿಂಗ್, ಫೋಟೋಗ್ರಫಿ, ಲೈಟಿಂಗ್ ಸೇರಿದಂತೆ ವಿವಿಧ ಕ್ಷೇತ್ರಗಳಲ್ಲಿ ಸ್ಥಳೀಯ ಯುವಕರಿಗೆ ಉದ್ಯೋಗಾವಕಾಶಗಳು ಹೆಚ್ಚಲಿವೆ ಎಂದು ಸಂಸ್ಥೆ ತಿಳಿಸಿದೆ.

RELATED ARTICLES

LEAVE A REPLY

Please enter your comment!
Please enter your name here

Most Popular