ಮಂಗಳೂರು : ನಗರದ ಖಾಸಗಿ ಆಸ್ಪತ್ರೆಯಿಂದ ಹೊರ ಬರುತ್ತಿದ್ದ ಸ್ಕೂಟರ್ ಸವಾರನಿಗೆ ಕಾರೊಂದು ಡಿಕ್ಕಿ ಹೊಡೆದ ಪರಿಣಾಮ ಸ್ಥಳದಲ್ಲೇ ಸಾವನ್ನಪ್ಪಿರುವ ಘಟನೆ ನಗರದ ಕುಂಟಿಕಾನ್ ಎಂಬಲ್ಲಿ ಬುಧವಾರ ತಡರಾತ್ರಿ ನಡೆದಿದೆ.
ಕಾವೂರು ನಿವಾಸಿ ಕೌಶಿಕ್ (21) ಈ ದುರಂತಕ್ಕೆ ಬಲಿಯಾದ ದುರ್ದೈವಿ.ಕೌಶಿಕ್ ಆಸ್ಪತ್ರೆಯಿಂದ ಹೊರಬರುತ್ತಿದ್ದಾಗ ಅವರ ಸ್ಕೂಟರ್ ಆಟೋ ರಿಕ್ಷಾಕ್ಕೆ ಡಿಕ್ಕಿ ಹೊಡೆದಿದೆ. ಕೌಶಿಕ್ ರಸ್ತೆಗೆ ಬಿದ್ದ ಪರಿಣಾಮ ಆ ವೇಳೆ ಆ ಮೂಲಕ ಹೋಗುತ್ತಿದ್ದ ಕಾರು ಅವರ ಮೇಲೆ ಹರಿದ ಪರಿಣಾಮ ಕೌಶಿಕ್ ಸ್ಥಳದಲ್ಲೇ ಸಾವನ್ನಪ್ಪಿದ್ದಾನೆ.
ಕದ್ರಿ ಪೊಲೀಸ್ ಠಾಣೆಯಲ್ಲಿ ಪ್ರಕರಣ ದಾಖಲಾಗಿದೆ.


