Friday, March 13, 2026
Flats for sale
Homeಜಿಲ್ಲೆಮಂಗಳೂರು : ಕುಕ್ಕೆ ಸುಬ್ರಹ್ಮಣ್ಯ ಸಮೀಪ ಪ್ರತ್ಯಕ್ಷವಾದ ನಕ್ಸಲರು..!

ಮಂಗಳೂರು : ಕುಕ್ಕೆ ಸುಬ್ರಹ್ಮಣ್ಯ ಸಮೀಪ ಪ್ರತ್ಯಕ್ಷವಾದ ನಕ್ಸಲರು..!

ಮಂಗಳೂರು ; 6 ವರ್ಷದ ಬಳಿಕ ಮತ್ತೆ ಕೊಡಗಿನಲ್ಲಿ ಕೆಂಪು ಉಗ್ರರು ಪ್ರತ್ಯಕ್ಷಗೊಂಡಿದ್ದು ಮಡಿಕೇರಿ ತಾಲೂಕು ಕಡಮಕಲ್ಲು ಬಳಿಯ ಕೂಜಿಮಲೆ ರಬ್ಬರ್ ಎಸ್ಟೇಟ್ ಬಳಿ ಮಾವೋವಾದಿಗಳು ಕಾಣಿಸಿಕೊಂಡಿದ್ದರು ಇದೀಗ 3 ಜನರ ನಕ್ಸಲ್ ತಂಡ ಶನಿವಾರ ಸಂಜೆ 6 ಗಂಟೆಗೆ ಸುಬ್ರಹ್ಮಣ್ಯ ಗ್ರಾಮದ ಐನೆಕಿದು ಗ್ರಾಮದಳ್ಳಿ ಪ್ರತ್ಯಕ್ಷ ವಾಗಿದ್ದರೆಂದು ತಿಳಿದು ಬಂದಿದೆ.

ನಿವಾರ ಸಂಜೆ ಸಣ್ಣದಾಗಿ ಮಳೆಯಾಗುತ್ತಿದ್ದ ಸಂದರ್ಭದಲ್ಲಿ ಮೂವರಿದ್ದ ತಂಡ ಐನೆಕಿದು ಗ್ರಾಮದ ಅಶೋಕ್ ಎಂಬವರ ಮನೆಗೆ ಭೇಟಿ ನೀಡಿದ್ದಾರೆ ಎಂಬುದಾಗಿ ವರದಿಯಾಗಿದೆ. ಮನೆಯವರ ಜತೆ ಸುಮಾರು ಒಂದು ತಾಸಿಗೂ ಅಧಿಕ ಕಾಲ ಮಾತುಕತೆ ನಡೆಸಿ ಅವರು ವಾಪಸ್​ ತೆರಳಿದ್ದಾರೆ ಎಂದು ಹೇಳುತ್ತಿದ್ದಾರೆ.

ಕೈಯ್ಯಲ್ಲಿ ಶಸ್ತ್ರಾಸ್ತ್ರಗಳಿದ್ದು ಮನೆಯವರ ಜೊತೆ ಸ್ವಲ್ಪ ಸಮಯ ಕಳೆದು ಮೊಬೈಲ್ ಚಾರ್ಜ್ ಮಾಡಿ ಅಲ್ಲಿಂದ ಹೋಗಿದ್ದಾರೆ ಎಂದು ಹೇಳಲಾಗುತ್ತಿದೆ. ಇದೀಗ ನಕ್ಸಲ್ ನಿಗ್ರಹ ದಳದವರು ಇದೆ ಪ್ರದೇಶದಲ್ಲಿ ಕೂಂಬಿಂಗ್ ನಡೆಸುತ್ತಿದ್ದಾರೆ.ನಕ್ಸಲರು ಭೇಟಿ ನೀಡಿದ ಪ್ರದೇಶ ಕುಮಾರಪರ್ವತ ಸಾಲಿನ ಪಾಟಿ ಕುಮೇರಿ ದಟ್ಟ ಕಾಡಿಗೆ ಹತ್ತಿರವಿದೆ. ಇಲ್ಲಿಂದ ಸೋಮವಾರಪೇಟೆ ಮತ್ತು ಇನ್ನೊಂದು ದಾರಿಯಾಗಿ ಗಾಳಿಬೀಡು. ಆ ಬಳಿಕ ಸಂಪಾಜೆ ಮೂಲಕ ಕೇರಳಕ್ಕೆ ಅರಣ್ಯದೊಳಗೆ ಸಂಪರ್ಕ ಸಾಧಿಸಲು ಸಾಧ್ಯವಿದೆ. ಸದ್ಯ ನಕ್ಸಲ್‌ ನಿಗ್ರಹ ದಳ ಶೋಧ ಚುರುಕುಗೊಳಿಸಿದೆ.

RELATED ARTICLES

LEAVE A REPLY

Please enter your comment!
Please enter your name here

Most Popular