Saturday, March 14, 2026
Flats for sale
Homeಸಿನಿಮಾಮಂಗಳೂರು : ಕುತ್ತಾರು ಕೊರಗಜ್ಜ ಕ್ಷೇತ್ರಕ್ಕೆ ಬೇಟಿ ನೀಡಿದ ಬಾಲಿವುಡ್‌ ನಟಿ ಕತ್ರಿನಾ ಕೈಫ್.

ಮಂಗಳೂರು : ಕುತ್ತಾರು ಕೊರಗಜ್ಜ ಕ್ಷೇತ್ರಕ್ಕೆ ಬೇಟಿ ನೀಡಿದ ಬಾಲಿವುಡ್‌ ನಟಿ ಕತ್ರಿನಾ ಕೈಫ್.

ಮಂಗಳೂರು ; ಕುತ್ತಾರು ಕೊರಗಜ್ಜನ ಕ್ಷೇತ್ರಕ್ಕೆ ಬಾಲಿವುಡ್ ನಟಿ ಕತ್ರಿನಾ ಕೈಪ್ ಸೇರಿದಂತೆ ಸುನೀಲ್ ಶೆಟ್ಟಿ ಪುತ್ರ ಅಹನ್ ಶೆಟ್ಟಿ, ಪುತ್ರಿ ಅತಿಯಾ ಶೆಟ್ಟಿ, ಹಾಗೂ ಸ್ಟಾರ್ ಕ್ರಿಕೆಟರ್ ಕೆ.ಎಲ್.ರಾಹುಲ್ ಭೇಟಿ ನೀಡಿದ್ದಾರೆ.

ಕಾರಣಿಕ ಕ್ಷೇತ್ರವಾಗಿರುವ ಕುತ್ತಾರು ಕೊರಗಜ್ಜ ಕ್ಷೇತ್ರಕ್ಕೆ ಈಗಾಗಲೇ ಹಲವಾರು ಸೆಲೆಬ್ರೆಟಿಗಳು ಆಗಮಿಸಿ ಪ್ರಾರ್ಥನೆ ಸಲ್ಲಿಸಿದ್ದಾರೆ. ಇದೀಗ ಬಾಲಿವುಡ್ ತಂಡವೇ ಕೊರಗಜ್ಜನ ಕ್ಷೇತ್ರಕ್ಕೆ ಭೇಟಿ ನೀಡಿದೆ. ತುಳುನಾಡಿನವರೇ ಆಗಿರುವ ಬಾಲಿವುಡ್ ನಟ ಸುನೀಲ್ ಶೆಟ್ಟಿ ಪುತ್ರ,ಪುತ್ರಿ, ಅಳಿಯನ ಜೊತೆ ಖ್ಯಾತ ನಟಿ ಕತ್ರಿನಾ ಕೈಫ್ ಕೊರಗಜ್ಜನ ಸನ್ನಿಧಿಗೆ ಆಗಮಿಸಿ ಕೋಲದಲ್ಲಿ ಭಾಗವಹಿಸಿದ್ದಾರೆ.

ಜುಲೈ 14 ರ ಭಾನುವಾರ ಕುತ್ತಾರು ಕೊರಗಜ್ಜನ ಕೊರಗಜ್ಜನ ಕ್ಷೇತ್ರದಲ್ಲಿ ಹರಕೆ ಕೋಲದಲ್ಲಿ ಬಾಲಿವುಡ್ ನಟ ನಟಿಯರು ಭಾಗವಹಿಸಿದ್ದಾರೆ. ಹಲವು ನಟ ನಟಿಯರು ಕ್ಷೇತ್ರಕ್ಕೆ ಆಗಮಿಸಿ ಕೊರಗಜ್ಜನ ಆಶೀರ್ವಾದ ಪಡೆದುಕೊಂಡಿದ್ದಾರೆ. ಬಳಿಕ ರಾತ್ರಿ ನಡೆದ ಕೋಲದಲ್ಲಿ ಪುರಷರಿಗಷ್ಟೇ ಅವಕಾಶ ಇದ್ದ ಕಾರಣ ಮಹಿಳೆಯರು ಹೊರ ಬಂದಿದ್ದಾರೆ. ಈ ವೇಳೆ ಕ್ಷೇತ್ರದ ಕಛೇರಿಯಲ್ಲಿ ಕತ್ರಿನಾ ಕೈಫ್ ಕಾಣಿಸಿಕೊಂಡಿದ್ದಾರೆ.

ಹಿಂದಿನಿಂದಲೂ ಕೊರಗಜ್ಜನ ಕ್ಷೇತ್ರದಲ್ಲಿ ಚಿತ್ರೀಕರಣಕ್ಕೆ ಅವಕಾಶ ಇಲ್ಲ. ಆದರೂ ಸೆಲೆಬ್ರಿಟಿಗಳು ಬಂದಾಗ ಕ್ಷೇತ್ರದ ದ್ವಾರದ ಮುಂಭಾಗ ಹಾಗೂ ಕಛೇರಿ ಒಳಗೆ ಇದಕ್ಕೆ ಅವಕಾಶ ನೀಡಲಾಗುತ್ತಿತ್ತು. ಆದ್ರೆ ಇಂದು ಬಾಲಿವುಡ್ ನ ದೊಡ್ಡ ತಂಡವೇ ಆಗಮಿಸಿದ ಕಾರಣದಿಂದ ಯಾರಿಗೂ ಫೋಟೋ ವಿಡಿಯೋಕ್ಕೆ ಅವಕಾಶವನ್ನು ನೀಡಿಲ್ಲ. ಆದ್ರೆ ಇದರ ನಡುವೆಯೂ ಕ್ಷೇತ್ರದಲ್ಲಿದ್ದ ಕತ್ರಿನಾ ಕೈಫ್ ಅವರ ಫೋಟೋ ಸಾಮಾಜಿಕ ಜಾಲ ತಾಣದಲ್ಲಿ ವೈರಲ್ ಆಗಿದೆ.

RELATED ARTICLES

LEAVE A REPLY

Please enter your comment!
Please enter your name here

Most Popular