ಮಂಗಳೂರು : ಉಡುಪಿ ಜಿಲ್ಲೆಯ ಕಾಪು ಕ್ಷೇತ್ರದಲ್ಲಿ ನಡೆಯುವ ಬ್ರಹ್ಮಕಲಶೋತ್ಸವ ಕಾರ್ಯಕ್ರಮದಲ್ಲಿ ಭಾಗವಹಿಸಲು ರಾಜ್ಯದ ಉಪ ಮುಖ್ಯಮಂತ್ರಿ ಡಿ.ಕೆ.ಶಿವಕುಮಾರ್ ಮಂಗಳೂರು ವಿಮಾನ ನಿಲ್ದಾಣಕ್ಕೆ ಬಂದಿಳಿದಿದ್ದಾರೆ.ಬಳಿಕ ಕಾರ್ಕಳ ಹಾಗೂ ಇನ್ನಿತರ ಕಡೆ ಕಾರ್ಯಕ್ರದಲ್ಲಿ ಭಾಗವಹಿಸುವ ಸಾಧ್ಯತೆಯಿದೆ.
ಮಾಧ್ಯಮ ಪ್ರತಿನಿಧಿ ಗಳೊಂದಿಗೆ ಮಾತನಾಡಿದ ಅವರು ಕೇಂದ್ರ ಸರ್ಕಾರ ಕ್ಷೇತ್ರ ಪುನರ್ ವಿಂಗಡಣೆ ಮಾಡಲು ಮುಂದಾಗಿದ್ದು, ಅದನ್ನು ಕಾಂಗ್ರೆಸ್ ಪಕ್ಷ ವಿರೋಧಿಸುತ್ತದೆ ಎಂದು ಹೇಳಿದ್ದಾರೆ. ಇದು ಸರಿಯಲ್ಲ ಇದರ ವಿರುದ್ದ ಚುನಾವಣಾ ಆಯೋಗ ಹಾಗೂ ನ್ಯಾಯಾಲಯದ ಮೊರೆ ಹೋಗುವ ಮೂಲಕ ಹೋರಾಟ ಮಾಡುವುದಾಗಿ ಅವರು ಹೇಳಿದ್ದಾರೆ. ಸಂಸತ್ತಿನಲ್ಲಿ ದಕ್ಷಿಣ ರಾಜ್ಯಗಳ ಸಂಖ್ಯಾಬಲವನ್ನು ಕಡಿಮೆ ಮಾಡಲು ಬಿಜೆಪಿ ಸರ್ಕಾರ ಮುಂದಾಗಿದ್ದು, ಅದರ ಭಾಗವಾಗಿ ಈ ಕ್ಷೇತ್ರ ಪುನರ್ ವಿಂಗಡಣೆ ಮಾಡಲಾಗುತ್ತಿದೆ ಎಂದು ಅವರು ಆರೋಪಿಸಿದ್ದಾರೆ.