Tuesday, October 21, 2025
Flats for sale
Homeಜಿಲ್ಲೆಮಂಗಳೂರು : ಕೋಮು ಪ್ರಚೋದನಕಾರಿ ಭಾಷಣ ಪ್ರಕರಣ : ಶಾಸಕ ಹರೀಶ್ ಪೂಂಜಾ ವಿರುದ್ದ ನ್ಯಾಯಾಲಯಕ್ಕೆ...

ಮಂಗಳೂರು : ಕೋಮು ಪ್ರಚೋದನಕಾರಿ ಭಾಷಣ ಪ್ರಕರಣ : ಶಾಸಕ ಹರೀಶ್ ಪೂಂಜಾ ವಿರುದ್ದ ನ್ಯಾಯಾಲಯಕ್ಕೆ ಪೊಲೀಸರು ಚಾರ್ಜ್ ಶೀಟ್ ಸಲ್ಲಿಕೆ…!

ಮಂಗಳೂರು ; ತೆಕ್ಕಾರು ಗೋಪಾಲಕೃಷ್ಣ ದೇವಸ್ಥಾನದ ಬ್ರಹ್ಮಕಲಶೋತ್ಸವದ ವೇದಿಕೆಯಲ್ಲಿ ಕೋಮು ಪ್ರಚೋದನಕಾರಿ ಭಾಷಣ ಮಾಡಿದ ಆರೋಪದಲ್ಲಿ ಬೆಳ್ತಂಗಡಿ ಶಾಸಕ ಹರೀಶ್ ಪೂಂಜ ವಿರುದ್ದ ಪ್ರಕರಣ ದಾಖಲಿಸಿದ್ದು ಇದೀಗ ಪೊಲೀಸರು ಇಂದು ಕೋರ್ಟ್ ಗೆ ಚಾರ್ಜ್ ಶೀಟ್ ಸಲ್ಲಿಸಿದ್ದಾರೆ.

ಈ ಹಿಂದೆ ಎಫ್ಐಆರ್ ರದ್ದುಗೊಳಿಸುವಂತೆ ಹರೀಶ್ ಪೂಂಜ ಹೈಕೋರ್ಟ್ ಮೊರೆ ಹೋಗಿದ್ದರು ಆದರೆ ಈ ಬಗ್ಗೆ ತಕ್ಷಣಕ್ಕೆ ಯಾವುದೇ ಕ್ರಮಕೈಗೊಳ್ಳದ ಹೈಕೋರ್ಟ್ ದೂರುದಾರರಿಗೆ ಮತ್ತು ರಾಜ್ಯ ಸರ್ಕಾರಕ್ಕೆ ನೋಟಿಸ್ ಜಾರಿಗೊಳಿಸಿತ್ತು.

ಈ ನಡುವೆ ಪೊಲೀಸರು ಶಾಸಕ ಪೂಂಜ ವಿರುದ್ದ ಹೈಕೋರ್ಟಿಗೆ ಚಾರ್ಜ್ ಶೀಟ್ ಸಲ್ಲಿಸಿದ್ದು ಶಾಸಕ ಹರೀಶ್ ಪೂಂಜಗೆ ಮತ್ತೊಂದು ಹಿನ್ನಡೆಯಾಗಿದೆ.
ಇಂದು (ಮೇ 20) ಪ್ರಕರಣ ಸಂಬಂಧ ವಾದ – ಪ್ರತಿವಾದ ನಡೆಯಲಿದ್ದು ದೂರುದಾರ ಎಸ್ ಬಿ. ಇಬ್ರಾಹಿಂ ಅವರ ಪರವಾಗಿ ಹೈಕೊರ್ಟಿನ ಹಿರಿಯ ನ್ಯಾಯವಾದಿ ಬಾಲನ್ ಅವರು ವಾದಿಸಲಿದ್ದಾರೆ.

RELATED ARTICLES

LEAVE A REPLY

Please enter your comment!
Please enter your name here

Most Popular