ಮಂಗಳೂರು : ಕೋವಿಡ್-19 ಸೋಂಕಿಗೆ ಒಳಗಾಗಿದ್ದ 40 ವರ್ಷದ ವ್ಯಕ್ತಿಯೊಬ್ಬರು ಚಿಕಿತ್ಸೆ ಪಡೆಯುತ್ತಿದ್ದ ವೆನ್ಲಾಕ್ ಆಸ್ಪತ್ರೆಯಲ್ಲಿ ಶುಕ್ರವಾರ ಮೃತಪಟ್ಟಿದ್ದಾರೆ.
ವಲಸೆ ಕಾರ್ಮಿಕನಾಗಿದ್ದ ವ್ಯಕ್ತಿ ಕೆಲ ದಿನಗಳಿಂದ ಉಸಿರಾಟದ ಸಮಸ್ಯೆಯಿಂದ ಬಳಲುತ್ತಿದ್ದ. ಅವರು ಮದ್ಯವ್ಯಸನಿಯಾಗಿದ್ದು, ಮಧುಮೇಹಿಯೂ ಆಗಿದ್ದರು ಎಂದು ಮೂಲಗಳು ಬಹಿರಂಗಪಡಿಸಿವೆ.
ಸದ್ಯ ನಗರದಲ್ಲಿ ಎರಡು ಸಕ್ರಿಯ ಕೋವಿಡ್ ಪ್ರಕರಣಗಳಿವೆ.


