Saturday, March 14, 2026
Flats for sale
Homeಜಿಲ್ಲೆಮಂಗಳೂರು: ಕ್ರಿಕೆಟ್ ಆಡುತ್ತಿದ್ದ ವೇಳೆ ಹೃದಯಾಘಾತ, ಯುವಕ ಸಾವು..!

ಮಂಗಳೂರು: ಕ್ರಿಕೆಟ್ ಆಡುತ್ತಿದ್ದ ವೇಳೆ ಹೃದಯಾಘಾತ, ಯುವಕ ಸಾವು..!

ಮಂಗಳೂರು : ಕ್ರಿಕೆಟ್ ಆಡುತ್ತಿದ್ದ ವೇಳೆ ಯುವಕನೋರ್ವ ಹೃದಯಾಘಾತಗೊಂಡು ಆಸ್ಪತ್ರೆಗೆ ಸಾಗಿಸುವ ಮಾರ್ಗಮಧ್ಯೆ ಕೊನೆಯುಸಿರೆಳೆದ ಘಟನೆ ಮೂಡುಪೆರಾರ ಕಾಯರಣೆಯಲ್ಲಿ ನಡೆದಿದೆ .

ಮೃತರನ್ನು ನಿವಾಸಿ ದಿವಂಗತ ಆನಂದ ಪೂಜಾರಿಯವರ ಪುತ್ರ ಪ್ರದೀಪ್ ಪೂಜಾರಿ (31) ಎಂದು ಗುರುತಿಸಲಾಗಿದೆ.ಭಾನುವಾರ ಸಂಜೆ ಮೂಡುಪೆರಾರ ಕಾಯಾರಣೆಯಲ್ಲಿ ಕ್ರಿಕೆಟ್ ಆಡುತ್ತಿದ್ದಾಗ ಪ್ರದೀಪ್ ಅವರಿಗೆ ಎದೆನೋವು ಕಾಣಿಸಿಕೊಂಡಿದೆ. ಮೊದಲಿಗೆ ಕೈಕಂಬದ ಖಾಸಗಿ ಆಸ್ಪತ್ರೆಗೆ ಕರೆದೊಯ್ದು, ನಂತರ ಬಜ್ಪೆಯ ಪ್ರಾಥಮಿಕ ಆರೋಗ್ಯ ಕೇಂದ್ರಕ್ಕೆ ಕರೆದೊಯ್ದು ಪ್ರಾಥಮಿಕ ಚಿಕಿತ್ಸೆ ನೀಡಲಾಯಿತು. ನಂತರ ಅವರನ್ನು ಮಂಗಳೂರಿನ ಖಾಸಗಿ ಆಸ್ಪತ್ರೆಗೆ ಕರೆದೊಯ್ಯಲಾಯಿತಾದರೂ ಮಾರ್ಗಮಧ್ಯೆ ಮೃತಪಟ್ಟಿದ್ದಾರೆ.

ಪ್ರದೀಪ್ ಪಡುಪೆರಾರ ಗ್ರಾಮ ಪಂಚಾಯತ್ ಉದ್ಯೋಗಿಯಾಗಿದ್ದು, ತಾಯಿ, ಸಹೋದರ ಮತ್ತು ಸಹೋದರಿಯನ್ನು ಅಗಲಿದ್ದಾರೆ. ರಾಜ್ಯ ಗ್ರಾಮ ಪಂಚಾಯತ್ ನೌಕರರ ಕ್ಷೇಮಾಭಿವೃದ್ಧಿ ಸಂಘದ ಮಂಗಳೂರು ತಾಲೂಕು ಸಮಿತಿಯ ಅಧ್ಯಕ್ಷರಾಗಿದ್ದರು. 2012ರಲ್ಲಿ ಪಡುಪೆರಾರ ಗ್ರಾಮ ಪಂಚಾಯಿತಿಗೆ ಸೇರಿದ ಪ್ರದೀಪ್ ಕಾಯರಣೆ ನವರಂಗ ಗೆಳೆಯರ ಬಳಗದ ಕಾರ್ಯದರ್ಶಿಯಾಗಿಯೂ ಸೇವೆ ಸಲ್ಲಿಸಿದ್ದು, ಬಜರಂಗದಳ ಹಾಗೂ ಜವನೆರ್ ಪೆರಾರ್ ಸಂಘಟನೆಯ ಕಾರ್ಯಕರ್ತರಾಗಿದ್ದರು.

RELATED ARTICLES

LEAVE A REPLY

Please enter your comment!
Please enter your name here

Most Popular