Monday, March 16, 2026
Flats for sale
Homeಜಿಲ್ಲೆಮಂಗಳೂರು: ಜನವರಿ 21ಕ್ಕೆ ನಡೆಯಬೇಕಿದ್ದ ಕಾಂಗ್ರೆಸ್ ಕಾರ್ಯಕರ್ತರ ಸಮಾವೇಶ ಮುಂದೂಡಿಕೆ : ಡಿ.ಕೆ.ಶಿವಕುಮಾರ್.

ಮಂಗಳೂರು: ಜನವರಿ 21ಕ್ಕೆ ನಡೆಯಬೇಕಿದ್ದ ಕಾಂಗ್ರೆಸ್ ಕಾರ್ಯಕರ್ತರ ಸಮಾವೇಶ ಮುಂದೂಡಿಕೆ : ಡಿ.ಕೆ.ಶಿವಕುಮಾರ್.

ಮಂಗಳೂರು : ಜನವರಿ 21 ರಂದು ಮಂಗಳೂರಿನಲ್ಲಿ ನಡೆಯಬೇಕಿದ್ದ ರಾಜ್ಯ ಮಟ್ಟದ ಕಾಂಗ್ರೆಸ್ ಕಾರ್ಯಕರ್ತರ ಸಮಾವೇಶವನ್ನು ಮುಂದೂಡಲಾಗಿದೆ. ಸಮಾವೇಶದ ಮುಂದಿನ ದಿನಾಂಕವನ್ನು ಶೀಘ್ರದಲ್ಲೇ ಪ್ರಕಟಿಸಲಾಗುವುದು ಎಂದು ಕೆಪಿಸಿಸಿ ಮುಖ್ಯಸ್ಥ ಹಾಗೂ ಉಪಮುಖ್ಯಮಂತ್ರಿ ಡಿ.ಕೆ.ಶಿವಕುಮಾರ್ ತಿಳಿಸಿದ್ದಾರೆ.

ಡಿಕೆ ಶಿವಕುಮಾರ್ ಅವರು ಇಂದು(ಜನವರಿ 15) ರಾತ್ರಿ ಬೆಂಗಳೂರಿನಲ್ಲಿ ಎಐಸಿಸಿ ಅಧ್ಯಕ್ಷ ಮಲ್ಲಿಕಾರ್ಜುನ ಖರ್ಗೆ ಅವರನ್ನು ಭೇಟಿ ಮಾಡಿ ಮಹತ್ವದ ಮಾತುಕತೆ ನಡೆಸಿದರು. ಬಳಿಕ ಡಿಕೆ ಶಿವಕುಮಾರ್ ಅವರು ಮಂಗಳೂರಿನಲ್ಲಿ ಜನವರಿ 21ರಂದು ನಿಗದಿ ಮಾಡಲಾಗಿದ್ದ ರಾಜ್ಯ ಮಟ್ಟದ ಕಾಂಗ್ರೆಸ್ ಕಾರ್ಯಕರ್ತರ ಸಮಾವೇಶವನ್ನು ಮುಂದೂಡಿ ಪ್ರಕಟಣೆ ಹೊರಡಿಸಿದ್ದಾರೆ.

ಲೋಕಸಭೆ ಚುನಾವಣೆ ಹಿನ್ನೆಲೆ ಪಕ್ಷದ ಕಾರ್ಯಕರ್ತರನ್ನು ಸಜ್ಜುಗೊಳಿಸಲು ಈ ಸಮಾವೇಶ ನಡೆಸಲಾಗುತ್ತಿದ್ದು, ರಾಜ್ಯದ ಎಲ್ಲ ಜಿಲ್ಲೆಗಳಿಂದ ಕಾರ್ಯಕರ್ತರನ್ನು ಒಗ್ಗೂಡಿಸುವ ತಂತ್ರವಾಗಿತ್ತು.ಅಲ್ಲದೇ ಸಿಎಂ ಸಿದ್ದರಾಮಯ್ಯ ಹಾಗೂ ಡಿಸಿಎಂ ಡಿಕೆ ಶಿವಕುಮಾರ್ ಅವರು ಕಾರ್ಯಕರ್ತರಿಗೆ ಲೋಕಸಭಾ ಚುನಾವಣೆ ಸಂಬಂಧ ಮಾರ್ಗದರ್ಶನ ನೀಡುವವರಿದ್ದರು. ಆದರೆ, ಇದೀಗ ಸಮಾವೇಶವನ್ನು ಮುಂದೂಡಲಾಗಿದ್ದು, ದಿನಾಂಕವನ್ನು ಶೀಘ್ರದಲ್ಲೇ ತಿಳಿಸುವುದಾಗಿ ಡಿಕೆ ಶಿವಕುಮಾರ್ ತಿಳಿಸಿದ್ದಾರೆ.

ಪತ್ರಿಕಾ ಪ್ರಕಟಣೆಯಲ್ಲಿ, ಅವರು ಸಮಾವೇಶದ ವ್ಯವಸ್ಥೆಗಳೊಂದಿಗೆ ಮುಂದುವರಿಯುವಂತೆ ಪಕ್ಷದ ಮುಖಂಡರನ್ನು ಕೋರಿದ್ದಾರೆ.

ಪತ್ರಿಕಾ ಪ್ರಕಟಣೆಯಲ್ಲಿ, ಅವರು ಸಮಾವೇಶದ ವ್ಯವಸ್ಥೆಗಳೊಂದಿಗೆ ಮುಂದುವರಿಯುವಂತೆ ಪಕ್ಷದ ಮುಖಂಡರನ್ನು ಕೋರಿದ್ದಾರೆ.

RELATED ARTICLES

LEAVE A REPLY

Please enter your comment!
Please enter your name here

Most Popular