Friday, November 22, 2024
Flats for sale
Homeಜಿಲ್ಲೆಮಂಗಳೂರು : ಜಿಲ್ಲೆಯಾದ್ಯಂತ ಎಲೆಕ್ಟ್ರಿಕ್ ಆಟೋ ರಿಕ್ಷಾಗಳ ಪರವಾನಗೆ ಹಿಂಪಡೆಯುಲು ಸಾಧ್ಯವಿಲ್ಲ - ಜಿಲ್ಲಾಧಿಕಾರಿ ಮುಲ್ಲೈಯನ್...

ಮಂಗಳೂರು : ಜಿಲ್ಲೆಯಾದ್ಯಂತ ಎಲೆಕ್ಟ್ರಿಕ್ ಆಟೋ ರಿಕ್ಷಾಗಳ ಪರವಾನಗೆ ಹಿಂಪಡೆಯುಲು ಸಾಧ್ಯವಿಲ್ಲ – ಜಿಲ್ಲಾಧಿಕಾರಿ ಮುಲ್ಲೈಯನ್ ಮುಹಿಲನ್.

ಮಂಗಳೂರು : ಜಿಲ್ಲೆಯಾದ್ಯಂತ ಎಲೆಕ್ಟ್ರಿಕ್ ಆಟೋ ರಿಕ್ಷಾಗಳ (ಇ-ಆಟೋ) ಪ್ರದೇಶ ನಿರ್ಬಂಧಗಳಿಲ್ಲದೆ ಸಂಚರಿಸಲು ಅನುಮತಿ ನೀಡಿ ಜುಲೈ 26ರಂದು ಹೊರಡಿಸಿರುವ ಆದೇಶವನ್ನು ಹಿಂಪಡೆಯಲು ಸಾಧ್ಯವಿಲ್ಲ ಎಂದು ದಕ್ಷಿಣ ಕನ್ನಡ ಜಿಲ್ಲಾಧಿಕಾರಿ (ಡಿಸಿ) ಮುಲ್ಲೈ ಮುಹಿಲನ್ ಸ್ಪಷ್ಟಪಡಿಸಿದ್ದಾರೆ.

ಜಿಲ್ಲಾಧಿಕಾರಿ ಕಚೇರಿಯಲ್ಲಿ ಗುರುವಾರ ನಡೆದ ಆಟೋ-ರಿಕ್ಷಾ ಮಾಲೀಕರು ಮತ್ತು ಚಾಲಕರೊಂದಿಗಿನ ಸಭೆಯಲ್ಲಿ ಮಾತನಾಡಿದ ಮುಹಿಲನ್, ”ಕೇಂದ್ರ ಸರಕಾರದ ಮಾರ್ಗಸೂಚಿಗಳು ಮತ್ತು ಹೈಕೋರ್ಟ್‌ನ ನಿರ್ದೇಶನದ ಮೇರೆಗೆ ಈ ಆದೇಶವನ್ನು ಕಾನೂನು ಚೌಕಟ್ಟಿನಲ್ಲಿ ಹೊರಡಿಸಲಾಗಿದೆ. ಸಂಬಂಧಪಟ್ಟವರು ಉನ್ನತ ನ್ಯಾಯಾಲಯದಲ್ಲಿ ಮೇಲ್ಮನವಿ ಮೂಲಕ ಹೆಚ್ಚಿನ ಸ್ಪಷ್ಟೀಕರಣವನ್ನು ಪಡೆಯಬಹುದು ಎಂದು ಹೇಳಿದ್ದಾರೆ.

ಯಾವುದೇ ನಗರ (ವಲಯ-1) ಅಥವಾ ಗ್ರಾಮಾಂತರ (ವಲಯ-2) ನಿರ್ಬಂಧಗಳಿಲ್ಲದೆ ಇ-ಆಟೋಗಳು ಕಾರ್ಯನಿರ್ವಹಿಸಲು ಕೇಂದ್ರ ಸರ್ಕಾರವು ಉಚಿತ ಪರವಾನಗಿಗಳನ್ನು ನೀಡಿದೆ. ಇದನ್ನು ಮಂಗಳೂರು ಸೇರಿದಂತೆ ಕರ್ನಾಟಕದಾದ್ಯಂತ ಜಾರಿಗೆ ತರಲಾಗುತ್ತಿದೆ, ಬೆಂಗಳೂರಿನಲ್ಲಿ ಇದೇ ರೀತಿಯ ನಿಬಂಧನೆಗಳಿವೆ ಎಂದು ತಿಳಿಸಿದರು.

RELATED ARTICLES

LEAVE A REPLY

Please enter your comment!
Please enter your name here

Most Popular