ಮಂಗಳೂರು : ಜೋಕಟ್ಟೆಯ ಬಾಡಿಗೆ ಮನೆಯೊಂದರಲ್ಲಿ ಬೆಳಗಾವಿ ಮೂಲದ ಹನುಮಂತ ಎಂಬವರ ಮನೆಯಲ್ಲಿ ಕಳೆದ 4 ದಿನಗಳ ಹಿಂದೆ ತಮ್ಮನ ಮಗಳಾದ 13 ವರ್ಷದ ಬಾಲಕಿಯು ಕೈ ನೋವಿನ ಚಿಕಿತ್ಸೆ ಪಡೆಯಲು ಬೆಳಗಾವಿಯಿಂದ ಬಂದು ಉಳಿದುಕೊಂಡಿದ್ದ ಬಾಲಕಿ ಮೃತಪಟ್ಟ ಘಟನೆ ನಡೆದಿದೆ.
ಜೋಕಟ್ಟೆಯ ಬಾಡಿಗೆ ಮನೆಯಿಂದ ಮನೆಯಲ್ಲಿರುವವರೆಲ್ಲಾ ಕೆಲಸಕ್ಕೆ ಹೋದ ನಂತರ ಸಮಯ ಸುಮಾರು ಬೆಳ್ಳಿಗ್ಗೆ 11.30 ಗಂಟೆಗೆ ಘಟನೆ ನಡೆದಿದೆ ಎಂದು ತಿಳಿದಿದೆ. ಅಪ್ರಾಪ್ತ ಮೃತ ಬಾಲಕಿಯ ತಾಯಿಯು ಪಕ್ಕದ ಮನೆಯವರಿಗೆ ಕರೆ ಮಾಡಿ ಬಾಲಕಿಗೆ ಪೋನ್ ಕೊಡಲು ತಿಳಿಸಿದಾಗ ಪಕ್ಕದ ಮನೆಯವರು ಪೋನ್ ಕೊಡಲು ಬಾಲಕಿಯು ವಾಸವಿದ್ದ ಬಾಡಿಗೆ ಮನೆಗೆ ಬಂದಾಗ ಬಾಲಕಿಯ ಕುತ್ತಿಗೆಗೆ ಬಟ್ಟೆಯಿಂದ ಬಿಗಿದು ಯಾರೋ ಕೊಲೆ ಮಾಡಿದ ರೀತಿ ಕಂಡುಬಂದಿದೆ. ಕೂಡಲೇ ಪಕ್ಕದ ಮನೆಯವರು ತಾಯಿಗೆ ಪೋನಿನಲ್ಲಿ ತಿಳಿಸಿದರು ಕೂಡಲೇ ಮೃತ ಬಾಲಕಿಯ ತಾಯಿಯು ಹನುಮಂತನಿಗೆ ಪೋನ್ ಮೂಲಕ ಬಾಡಿಗೆ ಮನೆಗೆ ಹೋಗುವಂತೆ ತಿಳಿಸಿದ ಮೇರೆಗೆ ಹನುಮಂತನು ಬಾಡಿಗೆ ಮನೆಗೆ ಬಂದು ನೋಡಿ ಪೊಲೀಸರಿಗೆ ಮಾಹಿತಿ ನೀಡಿದ್ದಾರೆ.
ಈ ಬಗ್ಗೆ ಸ್ಥಳಕ್ಕೆ ಪೊಲೀಸ್ ಆಯುಕ್ತರ ಅನುಪಮ್ ಅಗರವಾಲ್ ಮತ್ತು ಪಣಂಬೂರು ಠಾಣೆಯ ಅಧಿಕಾರಿ ಆಗಮಿಸಿದ್ದು ಪ್ರಕರಣದ ತನಿಖೆ ಕೈಗೊಂಡಿದ್ದಾರೆ .


