ಮಂಗಳೂರು : ಬಿಜೈ ನ ಭಾರತಿ ಬಿಲ್ಡರ್ಸ್ ಕಚೇರಿ ಮೇಲೆ ಶೂಟೌಟ್ ಪ್ರಕರಣಕ್ಕೆ ಸಂಭಂದಿಸಿದಂತೆ ಕಳೆದ 10 ವರ್ಷಗಳಿಂದ ತಲೆಮರೆಸಿಕೊಂಡಿದ್ದ ಶಾರ್ಪ್ ಶೂಟರ್ ನನ್ನು ಮುಂಬೈನಲ್ಲಿ ಮಂಗಳೂರು ಪೊಲೀಸರು ಬಂಧಿಸಿದ್ದಾರೆ.
ಈ ಭೂಗತ ಪಾತಕಿ ರವಿ ಪೂಜಾರಿ ಅಣತಿಯಂತೆ ಕೆಲಸ ಮಾಡುತ್ತಿದ್ದ
ಕರಾಡ್ ಗಣೇಶ್ ಲಕ್ಷ್ಮಣ್ ಸಕಟ್ ಬಂಧನ.
2014 ರಲ್ಲಿ ನಡೆದ ಶೂಟ್ಔಟ್ ಪ್ರಕರಣದ ಆರೋಪಿ ಆಗಿದ್ದು ಈತನನ್ನು ಮಹಾರಾಷ್ಟ್ರದ ಪಂಡರಾಪುರ ಎಂಬಲ್ಲಿ ಬಂಧಿಸಲಾಗಿದೆ. ಅಂದು ಬಂಧನ ಆಗಿ ಕೋರ್ಟ್ ಗೆ ಹಾಜರಾಗದೆ ತಲೆಮರೆಸಿಕೊಂಡಿದ್ದು 3 ನೇ ಜೆಎಂಎಫ್ಸಿ ನ್ಯಾಯಾಲಯದಿಂದ ಅರೆಸ್ಟ್ ವಾರಂಟ್ ಜಾರಿಯಾಗಿತ್ತು.
ಈತನ ಮೇಲೆ ಕಾವೂರು ಪೊಲೀಸ್ ಠಾಣೆ ಸೇರಿದಂತೆ ಸತಾರ ಜಿಲ್ಲೆಯಲ್ಲೂ ಆರ್ಮ್ಸ್ ಆಕ್ಟ್ ಅಡಿ ಪ್ರಕರಣ ದಾಖಲಾಗಿದ್ದು ಇದೀಗವಉರ್ವಾ ಪೊಲೀಸರು ಆರೋಪಿಯನ್ನು ಬಂಧಿಸಿದ್ದಾರೆ.