Saturday, July 12, 2025
Flats for sale
Homeಸಿನಿಮಾಮಂಗಳೂರು ; ತುಳು ಚಿತ್ರ " ಧರ್ಮ ಚಾವಡಿ " ಜುಲೈ 11 ಕ್ಕೆ ಕರಾವಳಿಯಾದ್ಯಂತ...

ಮಂಗಳೂರು ; ತುಳು ಚಿತ್ರ ” ಧರ್ಮ ಚಾವಡಿ ” ಜುಲೈ 11 ಕ್ಕೆ ಕರಾವಳಿಯಾದ್ಯಂತ ಬಿಡುಗಡೆ.

ಮಂಗಳೂರು : ಕೃಷ್ಣವಾಣಿ ಪಿಚ್ಚರ್ಸ್‌ ಲಾಂಛನದಲ್ಲಿ ತಯಾರಾದ ನಡುಬೈಲ್ ಜಗದೀಶ್ ಅಮೀನ್ ನಿರ್ಮಾಣದಲ್ಲಿ ನಿತಿನ್ d_{b} ಕುಕ್ಕವಳ್ಳಿ ನುಳಿಯಾಲು ನಿರ್ದೇಶನದಲ್ಲಿ ತಯರಾದ “ಧರ್ಮ ದೈವ’ ತುಳು ಚಿತ್ರ ಜುಲೈ 11 ರಂದು ಬಿಡುಗಡೆಗೊಳ್ಳಲಿದೆ ಎಂದು ಪತ್ರಿಕಾಗೋಷ್ಠಿಯಲ್ಲಿ ರಮೇಶ್ ರೈ ಕುಕ್ಕುವಳ್ಳಿಯವರು ತಿಳಿಸಿದ್ದಾರೆ.

ಧರ್ಮದೈವ ನಿರ್ದೇಶಕರ ಎರಡನೇ ಚಿತ್ರ ‘ಧರ್ಮ ಚಾವಡಿ’ ತುಳು ಚಿತ್ರದ ಟೀಸರ್ ಪ್ರೇಕ್ಷಕರ ಮೆಚ್ಚುಗೆ ಗಳಿಸಿತ್ತು. ಮುಂಬೈಯಲ್ಲಿ ಸಿನಿಮಾದ ಪ್ರೀಮಿಯರ್ ಶೋ ವೀಕ್ಷಿಸಿದ ಪ್ರೇಕ್ಷಕರು ಸಿನಿಮಾವನ್ನು ಮುಕ್ತಕಂಠದಿಂದ ಶ್ಲಾಘಿಸಿದ್ದಾರೆ. ಸಿನಿಮಾ ಹೊಸ ನಿರೀಕ್ಷೆ ಹುಟ್ಟು ಹಾಕಿದೆ. ಸಾಕಷ್ಟು ಜನರು ಇದು ಧರ್ಮ ದೈವದ ಮುಂದುವರೆದ ಭಾಗ ಎಂದು ಭಾವಿಸಿದ್ದರು, ಆದರೆ ಟೀಸರ್ ಬೇರೆಯೇ ರೀತಿಯಲ್ಲಿದ್ದು ಬಹಳಷ್ಟು ಕುತೂಹಲವನ್ನು ಹುಟ್ಟಿಹಾಕಿತ್ತು. ಮುಂಬೈ ಮತ್ತು ಪುತ್ತೂರಿನಲ್ಲಿ ನಡೆದ ಪ್ರೀಮಿಯರ್ ನೋಡಿದ ಜನ ಬಹಳಷ್ಟು ಮೆಚ್ಚುಗೆ ವ್ಯಕ್ತಪಡಿಸಿದ್ದಾರೆ ಎಂದು ತಿಳಿಸಿದ್ದಾರೆ.

ನಿತಿನ್ ರೈ ಕುಕ್ಕುವಳ್ಳಿ ನಿರ್ದೇಶನದಲ್ಲಿ ಜಗದೀಶ್ ಅಮೀನ್ ನಡುಬೈಲು ಚಿತ್ರವನ್ನು ನಿರ್ಮಾಣ ಮಾಡಿದ್ದು ಪ್ರಸಾದ್ ಕೆ ಶೆಟ್ಟಿ ಸಂಗೀತ ನೀಡಿದ್ದಾರೆ. ಶ್ರೀನಾಥ್ ಪವಾರ್ ಸಂಕಲನ ಅರುಣ್ ರೈ ಪುತ್ತೂರು ಛಾಯಾಗ್ರಹಣ ಚಿತ್ರಕ್ಕಿದ್ದು ರಜಾಕ್ ಪುತ್ತೂರು ಚಿತ್ರಕಥೆ ಬರೆದಿದ್ದಾರೆ.

ಚಿತ್ರದಲ್ಲಿ ರಮೇಶ್ ರೈ ಕುಕ್ಕುವಳ್ಳಿ ಮುಖ್ಯ ಭೂಮಿಕೆಯಲ್ಲಿ ನಟಿಸಿದ್ದು ರವಿ ಸ್ನೇಹಿತ್, ಚೇತನ್ ರೈ ಮಾಣಿ, ಸುರೇಶ್ ರೈ, ಪ್ರಕಾಶ್ ಧರ್ಮ ನಗರ, ದೀಪಕ್ ರೈ ಪಾಣಾಜೆ, ಸುಂದರ್ ರೈ ಮಂದಾರ.ರಂಜನ್ ಬೋಲೂರು, ಮನೀಶ್ ಶೆಟ್ಟಿ ಸಿದ್ದಕಟ್ಟೆ, ರಕ್ಷಣ್ ಮಾಡೂರು, ರೂಪ ಡಿ ಶೆಟ್ಟಿ ಸವಿತಾಅಂಚನ್, ಧನ್ಯ ಪೂಜಾರಿ, ನೇಹಾ ಕೋಟ್ಯಾನ್, ನಿಶ್ಮಿತಾ ಶೆಟ್ಟಿ ಸೇರಿದಂತೆ ಅನೇಕ ಕಲಾವಿದರು ನಟಿಸಿದ್ದಾರೆ. ಸಚಿನ್ ಉಪ್ಪಿನಂಗಡಿ ಚಿತ್ರದ ವಿತರಣೆ ಹಕ್ಕನ್ನು ಪಡೆದುಕೊಂಡಿದ್ದಾರೆ.

ಚಿತ್ರ ದಕ್ಷಿಣ ಕನ್ನಡ ಉಡುಪಿ ಜಿಲ್ಲೆಯ ಎಲ್ಲಾ ಥಿಯೇಟರ್ ಗಳಲ್ಲಿ ಬಿಡುಗಡೆಗೋಳ್ಳುತ್ತಿದೆ ಎಂದು ತಿಳಿಸಿದ್ದಾರೆ .ಪತ್ರಿಕಾಗೋಷ್ಠಿಯಲ್ಲಿ ಜಗದೀಶ್ ಅಮೀನ್,ನಿತೀನ್ ರೈ ಕುಕ್ಕುವಳ್ಳಿ,ಪ್ರಸಾದ್ ಕೆ.ಶೆಟ್ಟಿ, ಅರುಣ್ ರೈ ಪುತ್ತೂರು, ಧನ್ಯಾ ಪೂಜಾರಿ,ನೇಹ ಕೋಟ್ಯಾನ್ ರವರು ಉಪಸ್ಥಿತರಿದ್ದರು.

RELATED ARTICLES

LEAVE A REPLY

Please enter your comment!
Please enter your name here

Most Popular