ಮಂಗಳೂರು / ಉಡುಪಿ : ಜಿಲ್ಲೆಯಲ್ಲಿ ಎಡೆಬಿಡದೆ ಸುರಿಯುವ ಬಾರೀ ಮಳೆಗೆ ಜನಜೀವನ ಅಸ್ತವ್ಯಸ್ಥಗೊಂಡಿದೆ. ಉಡುಪಿಯಲ್ಲಿ ಅಂತೂ ಮನೆಗೆ ನೀರು ನುಗ್ಗಿ ಮನೆಯಿಂದ ಹೊರಬರಲು ಪರದಾಡುವಂತಾಗಿದೆ. ಕಲ್ಸಂಕ, ಬೈಲಕೆರೆ, ಮಠದಬೆಟ್ಟು ವ್ಯಾಪ್ತಿ, ಗುಂಡಿಬೈಲು, ಪಾಡಿಗಾರು, ಸಗ್ರಿ ವ್ಯಾಪ್ತಿಯಿಂದ ಜನರನ್ನು ರಕ್ಷಣೆ ಮಾಡಲಾಗಿದೆ. ಅಗ್ನಿಶಾಮಕ ದಳದ ಬೋಟ್ ಟ್ಯೂಬ್ ಬಳಸಿ ಜನರ ರಕ್ಷಿಸುವ ಮಹಾತ್ಕಾರ್ಯ ಮಾಡಿದ್ದಾರೆ.ಕೆಲವೆಡೆ ಮಳೆಯಿಂದ ಮನೆಗಳು ಜಲಾವೃತವಾಗಿವೆ. ಗುಂಡಿಬೈಲು ಸಮೀಪ ಐದಾರು ಮನೆಯವರ ರಕ್ಷಣೆ ಮಾಡಲಾಗಿದೆ.
ಕರಾವಳಿ ಜಿಲ್ಲೆಗಳಾದ ಉಡುಪಿ, ದಕ್ಷಿಣ ಕನ್ನಡ, ಉತ್ತರ ಕನ್ನಡ ಜಿಲ್ಲೆಗಳಲ್ಲಿ ಇಂದಿನಿಂದ ಜುಲೈ 11 ರವರೆಗೂ ಮಳೆ ಇರಲಿದ್ದು ಆರೆಂಜ್ ಅಲರ್ಟ್ ಘೋಷಿಸಲಾಗಿದೆ.
ದಕ್ಷಿಣ ಕನ್ನಡ, ಉಡುಪಿ, ಉತ್ತರ ಕನ್ನಡ ಜಿಲ್ಲೆಗಳಲ್ಲಿ ಭಾರಿ ಮಳೆಯಾಗುವ ಸಾಧ್ಯತೆ ಇದ್ದು ಮಳೆಯ ಅಲರ್ಟ್ ನೀಡಲಾಗಿದೆ. ಇನ್ನು ಉತ್ತರ ಒಳನಾಡಿನ ಬೆಳಗಾವಿಗೆ ಇಂದಿನಿಂದ ಜುಲೈ 10ರ ವರೆಗೆ ಯಲ್ಲೋ ಅಲರ್ಟ್ ನೀಡಿದ್ದು ಬಾಗಲಕೋಟೆ, ಧಾರವಾಡ, ಗದಗ, ಹಾವೇರಿ, ಕೊಪ್ಪಳ, ರಾಯಚೂರು, ವಿಜಯಪುರ ಜಿಲ್ಲೆಯ ಕೆಲವು ಸ್ಥಳಗಳಲ್ಲಿ ಗುಡುಗು ಸಹಿತ ಮಳೆಯಾಗಲಿದೆ ಎಂದು ಹವಾಮಾನ ಇಲಾಖೆ ತಿಳಿಸಿದೆ.
ಇನ್ನು ಬೀದರ್, ಕಲ್ಬುರ್ಗಿ, ಯಾದಗಿರಿ ಜಿಲ್ಲೆಗೆ ಇಂದು ಯೆಲ್ಲೋ ಅಲರ್ಟ್ ನೀಡಿದ್ದು ಬೆಳಗಾವಿ, ಬೀದರ್, ಕಲಬುರ್ಗಿ, ಯಾದಗಿರಿ ಜಿಲ್ಲೆಗಳಲ್ಲಿ 40 ರಿಂದ 50 ಕಿಲೋಮೀಟರ್ ವೇಗದಲ್ಲಿ ಗಾಳಿ ಬೀಸಲಿದೆ. ದಕ್ಷಿಣ ಒಳನಾಡು ಜಿಲ್ಲೆಗಳಿಗೆ ಐದು ದಿನದ ಮಳೆಯ ಅಲರ್ಟ್ ನೀಡಿದ್ದು ಬಳ್ಳಾರಿ, ಬೆಂಗಳೂರು ಗ್ರಾಮಾಂತರ, ಬೆಂಗಳೂರು ನಗರ, ಚಾಮರಾಜನಗರ, ಚಿಕ್ಕಬಳ್ಳಾಪುರ, ಚಿತ್ರದುರ್ಗ, ದಾವಣಗೆರೆ, ಹಾಸನ, ಕೊಡಗು, ಕೋಲಾರ, ಮಂಡ್ಯ, ಮೈಸೂರು, ರಾಮನಗರ, ತುಮಕೂರು, ವಿಜಯನಗರ ಜಿಲ್ಲೆಗಳಲ್ಲಿ ನಿರಂತರ ಗಾಳಿ ಮತ್ತು ಹಗುರದಿಂದ ಸಾಧಾರಣ ಮಳೆಯಾಗಲಿದೆ.