ಮಂಗಳೂರು ; 6 ವರ್ಷದ ಬಳಿಕ ಮತ್ತೆ ಕೊಡಗಿನಲ್ಲಿ ಕೆಂಪು ಉಗ್ರರು ಮಡಿಕೇರಿ ಜಿಲ್ಲೆಯ ಕಡಮಕಲ್ಲು ತಾಲೂಕು ಬಳಿಯ ಕೂಜಿಮಲೆ ರಬ್ಬರ್ ಎಸ್ಟೇಟ್ ಬಳಿ ಪ್ರತ್ಯಕ್ಷಗೊಂಡಿದ್ದಾರೆ ಎಂದು ವರದಿಯಾಗಿತ್ತು .8 ಜನರ ನಕ್ಸಲ್ ತಂಡ ಶನಿವಾರ ಸಂಜೆ ಪ್ರತ್ಯಕ್ಷ ವಾಗಿದ್ದರೆಂದು ಸ್ಥಳೀಯರು ಮಾಹಿತಿ ನೀಡಿದ್ದರು. ಇದೀಗ ಶಂಕಿತ ನಕ್ಸಲರ ಚಲನವಲನದ ವರದಿಗಳ ಹಿನ್ನೆಲೆಯಲ್ಲಿ ದಕ್ಷಿಣ ಕನ್ನಡ-ಕೊಡಗು ಗಡಿ ಪ್ರದೇಶಗಳಲ್ಲಿ ನಕ್ಸಲ್ ನಿಗ್ರಹ ಪಡೆ(ಎಎನ್‌ಎಫ್) ಸಿಬ್ಬಂದಿ ಕೂಂಬಿಂಗ್ ಕಾರ್ಯಾಚರಣೆ ಆರಂಭಿಸಿದೆ.
ಶನಿವಾರ ಸಂಜೆ 8 ಮಂದಿ ಶಂಕಿತ ನಕ್ಸಲರ ತಂಡ ಮಡಿಕೇರಿ ಪೊಲೀಸ್ ಠಾಣಾ ವ್ಯಾಪ್ತಿಯ ಸುಬ್ರಹ್ಮಣ್ಯ ಸಮೀಪದ ಕೂಜಮಲೈ ರಬ್ಬರ್ ಎಸ್ಟೇಟ್ ಬಳಿಯ ಅಂಗಡಿಯೊಂದರಲ್ಲಿ ಶಸ್ತ್ರಾಸ್ತ್ರಗಳೊಂದಿಗೆ ದಿನಸಿ ವಸ್ತುಗಳನ್ನು ಖರೀದಿಸಿದ ವರದಿಗಳಿವೆ.ಈ ಬಗ್ಗೆ ಹೆಚ್ಚೆತ್ತ ಪೊಲೀಸ್ ಇಲಾಖೆ ಸೋಮವಾರ ಬೆಳಗ್ಗೆ ಕೂಂಬಿಂಗ್ ಕಾರ್ಯಾಚರಣೆ ಆರಂಭವಾಗಿದೆ ಎಂದು ಸುಬ್ರಹ್ಮಣ್ಯ ಠಾಣೆಯ ಪೊಲೀಸ್ ಅಧಿಕಾರಿಯೊಬ್ಬರು ಖಚಿತಪಡಿಸಿದ್ದಾರೆ.


