Thursday, July 23, 2026
Homeಜಿಲ್ಲೆಮಂಗಳೂರು : ದಕ್ಷಿಣ ಕನ್ನಡ ಜಿಲ್ಲಾ ಕಾರ್ಯನಿರತ ಪತ್ರಕರ್ತರ ಸಂಘದಿಂದ ಅಂತರಾಷ್ಟ್ರೀಯ ಯೋಗ ದಿನಾಚರಣೆ.

ಮಂಗಳೂರು : ದಕ್ಷಿಣ ಕನ್ನಡ ಜಿಲ್ಲಾ ಕಾರ್ಯನಿರತ ಪತ್ರಕರ್ತರ ಸಂಘದಿಂದ ಅಂತರಾಷ್ಟ್ರೀಯ ಯೋಗ ದಿನಾಚರಣೆ.

ಮಂಗಳೂರು : ದಕ್ಷಿಣ ಕನ್ನಡ ಜಿಲ್ಲಾ ಕಾರ್ಯನಿರತ ಪತ್ರಕರ್ತರ ಸಂಘವು ದೇವಿಕಾ ಯೋಗ ಕೇಂದ್ರದ ದೇವಿಕಾ ಪುರುಷೋತ್ತಮ್ ಅವರ ನೇತೃತ್ವದಲ್ಲಿ ಜೂನ್ 21 ರಂದು ಪತ್ರಿಕಾ ಭವನದಲ್ಲಿ ಅಂತಾರಾಷ್ಟ್ರೀಯ ಯೋಗ ದಿನಾಚರಣೆಯನ್ನು ಆಚರಿಸಿದ್ದಾರೆ .

ಭಾರತೀಯ ರೆಡ್ ಕ್ರಾಸ್ ಸಂಸ್ಥೆಯ ದ.ಕ.ಜಿಲ್ಲೆಯ ಅಧ್ಯಕ್ಷ ಸಿ.ಎ.ಶಾಂತಾರಾಮ ಶೆಟ್ಟಿ ಕಾರ್ಯಕ್ರಮವನ್ನು ಉದ್ಘಾಟಿಸಿದರು. ದ.ಕ ಕಾರ್ಯನಿರತ ಪತ್ರಕರ್ತರ ಸಂಘದ ಅಧ್ಯಕ್ಷ ಶ್ರೀನಿವಾಸ್ ನಾಯಕ್ ಇಂದಾಜೆ ಅಧ್ಯಕ್ಷತೆ ವಹಿಸಿದ್ದರು.

ಮಂಗಳೂರು ಪ್ರೆಸ್ ಕ್ಲಬ್ ಅಧ್ಯಕ್ಷ ಪಿ ಬಿ ಹರೀಶ್ ರೈ, ಜಿಲ್ಲಾ ವಾರ್ತಾಧಿಕಾರಿ ಖಾದರ್ ಶಾ ಮತ್ತಿತರರು ಉಪಸ್ಥಿತರಿದ್ದರು. ದೇವಿಕಾ ಯೋಗ ಕೇಂದ್ರದ ದೇವಿಕಾ ಪುರುಷೋತ್ತಮ ಅವರನ್ನು ಇದೇ ಸಂದರ್ಭದಲ್ಲಿ ಸನ್ಮಾನಿಸಲಾಯಿತು.

RELATED ARTICLES

LEAVE A REPLY

Please enter your comment!
Please enter your name here

Most Popular