ಮಂಗಳೂರು : ಉತ್ತರ ಕನ್ನಡ, ದಕ್ಷಿಣ ಕನ್ನಡ, ಉಡುಪಿ, ಶಿವಮೊಗ್ಗ, ಕೊಡಗು ಜಿಲ್ಲೆಗಳಲ್ಲಿ ಭಾರೀ ಮಳೆಯಾಗುತ್ತಿದ್ದು ಈಗಾಗಲೇ ಶಾಲಾ ಕಾಲೇಜು ಗಳಿಗೆ ರಜೆಯನ್ನು ಘೋಷಿಸಿದ್ದಾರೆ.ಇಂದು ಮಂಗಳೂರು ತಾಲೂಕಿನಲ್ಲಿ ಅತಿ ಹೆಚ್ಚು ಮಳೆಸುರಿಯುವುದರಿಂದ ಶಾಲೆಗೆ ರಜೆ ಕೊಡದ ಹಿನ್ನೆಲೆ ಜಿಲ್ಲಾಧಿಕಾರಿ ವಿರುದ್ಧ ಮಕ್ಕಳ ಪೋಷಕರು ಆಕ್ರೋಶವ್ಯಕ್ತಪಡಿಸಿದ್ದಾರೆ.
ಮಂಗಳೂರಿನಲ್ಲಿ ವಿಪರೀತ ಮಳೆಯ ಸಂದರ್ಭದಲ್ಲಿ ರಜೆ ಇಲ್ಲದಿದ್ದರು ವಿದ್ಯಾರ್ಥಿ ಗಳಿಗೆ ಹಾಜರಾತಿ ಕಡ್ಡಾಯವಲ್ಲ , ಸುರಕ್ಷಿತವಾಗಿ ಬಂದು ಹೋಗುವ ಸಾಧ್ಯತೆ ಇದ್ದಲ್ಲಿ ಮಾತ್ರ ಪೋಷಕರು ತಮ್ಮ ಮಕ್ಕಳನ್ನು ಶಾಲೆಗೆ ಕಳುಹಿಸಲು ತಿಳಿಸುವುದು. Block Education Officer (ಮಂಗಳೂರು ಉತ್ತರ) ಶಾಲೆಯ ಆಡಳಿತ ಮಂಡಳಿಗಳಿಗೆ ತಿಳಿಸಿದ್ದಾರೆ.
ಜಿಲ್ಲೆಯಲ್ಲಿ ಸುರಿಯುವ ಧಾರಾಕಾರ ಮಳೆಯಿಂದಾಗಿ ಜನಜೀವನ ಅಸ್ಥವ್ಯಸ್ಥಗೊಂಡಿದ್ದು ಗುಡ್ಡ ಗಾಡು ಪ್ರದೇಶಗಳ ಜನರು ಭಯಭೀತರಾಗಿದ್ದಾರೆ.ಜಿಲ್ಲೆಯಲ್ಲಿ ಕಳೆದ 1 ತಿಂಗಳಿಂದ ಅತಿಹೆಚ್ಚು ಸಾವುನೋವು ಸಂಭವಿಸಿದ್ದು ಅವರವರ ಜೀವಕ್ಕೆ ಅವರೇ ಹೊಣೆಯಂತಾಗಿದೆ .ಅದರಿಂದ ನದಿಭಾಗದ ಜನರಿಗೆ ತೆರಳದಂತೆ ಸೂಚನೆ ನೀಡಿದ್ದು ಕಟ್ಟೇಚ್ಚೆರ ವಹಿಸುವಂತೆ ಸೂಚನೆ ನೀಡಿದ್ದಾರೆ .
ಇಂದಿನಿಂದ ಜುಲೈ 21ರವರೆಗೆ ರಾಜ್ಯದಲ್ಲಿ ಭಾರೀ ಮಳೆ ಆಗಲಿದೆ ಅಂತ ಹವಮಾನ ಇಲಾಖೆ ಮುನ್ಸೂಚನೆ ಕೊಟ್ಟಿದೆ. ಉತ್ತರ ಕನ್ನಡ, ದಕ್ಷಿಣ ಕನ್ನಡ, ಉಡುಪಿ, ಶಿವಮೊಗ್ಗ, ಕೊಡಗು, ಚಿಕ್ಕಮಗಳೂರು ಜಿಲ್ಲೆಗಳಲ್ಲಿ ಇಂದು ಮತ್ತು ನಾಳೆ ಈ ಜಿಲ್ಲೆಗಳಿಗೆ ರೆಡ್ ಅಲರ್ಟ್ ಘೋಷಣೆ ಮಾಡಿದೆ.ಇದರ ಮಧ್ಯೆ ಇಂದು ಮತ್ತು ನಾಳೆ ಆರು ಜಿಲ್ಲೆಗಳಿಗೆ ಹವಮಾನ ಇಲಾಖೆ ರೆಡ್ ಅಲರ್ಟ್ ಘೋಷಣೆ ಮಾಡಿದೆ. ಇಂದು ದಕ್ಷಿಣ ಒಳನಾಡು, ಕರಾವಳಿ ಭಾಗದಲ್ಲಿ ವ್ಯಾಪಕ ಮಳೆಯಾಗಲಿದೆ. ಉತ್ತರ ಒಳನಾಡಿನಲ್ಲಿ ಹಲವು ಜಿಲ್ಲೆಗಳಲ್ಲಿ ಮಳೆಯಾಗಲಿದ್ದು, ಉತ್ತರ ಕನ್ನಡದಲ್ಲಿ 23 ಸೆ.ಮೀ, ಶಿವಮೊಗ್ಗ 22 ಸೆ.ಮೀ ವ್ಯಾಪಕ ಮಳೆಯಾಗಲಿದೆ ಎಂದು ಎಚ್ಚರಿಕೆ ಕೊಟ್ಟಿದೆ.


