ಮಂಗಳೂರು : ದಕ್ಷಿಣಕನ್ನಡ ಜಿಲ್ಲೆಯಲ್ಲಿ ಬಾರಿ ಮಳೆಯಾಗುವ ಹಿನ್ನೆಲೆ ಮುಲ್ಕಿ,ಮೂಡಬಿದರೆ,ಉಳ್ಳಾಲ,ಪುತ್ತೂರು,ಬಂಟ್ವಾಳ ,ಬೆಳ್ತಂಗಡಿ,ಕಡಬ ಹಾಗೂ ಮಂಗಳೂರು ತಾಲೂಕಿನ ಎಲ್ಲಾ ಅಂಗನವಾಡಿ,ಸರಕಾರಿ,ಖಾಸಗಿ ಪ್ರಾಥಮಿಕ,ಪ್ರೌಢಶಾಲೆ ,ಪದವಿ ಪೂರ್ವ ಕಾಲೇಜು ಗಳಿಗೆ 24 ಇಂದು ರಜೆ ಘೋಷಿಸಲಾಗಿದೆ.
ದಕ್ಷಿಣ ಕನ್ನಡ ಜಿಲ್ಲೆಯಲ್ಲಿ ಭಾರೀ ಮಳೆಯಾಗುವ ಸಾಧ್ಯತೆ ಇದೆ ಎಂದು ಭಾರತ ಹವಾಮಾನ ಇಲಾಖೆ (ಐಎಂಡಿ) ಎಚ್ಚರಿಕೆ ನೀಡಿರುವ ಹಿನ್ನೆಲೆಯಲ್ಲಿ ಈ ನಿರ್ಧಾರ ತೆಗೆದುಕೊಳ್ಳಲಾಗಿದೆ.
ದಕ್ಷಿಣ ಕನ್ನಡದ ಹಲವಾರು ಭಾಗಗಳಲ್ಲಿ ಬುಧವಾರ, ರಾತ್ರಿ ಮತ್ತು ಗುರುವಾರ ಬೆಳಗಿನ ಜಾವ ಹಗಲು ರಾತ್ರಿ ಭಾರೀ ಮಳೆಯಾಗಿದ್ದು, ಸಾಮಾನ್ಯ ಜನಜೀವನ ಅಸ್ತವ್ಯಸ್ತಗೊಂಡಿದೆ.
ಪೋಷಕರು ಮಕ್ಕಳು ತಗ್ಗು ಪ್ರದೇಶಗಳು, ಸರೋವರಗಳು, ಸಮುದ್ರ ತೀರ ಮತ್ತು ನದಿ ತೀರಗಳಿಗೆ ಹೋಗದಂತೆ ನೋಡಿಕೊಳ್ಳಬೇಕು. ಮೀನುಗಾರರಿಗೂ ನೀರಿಗೆ ಇಳಿಯದಂತೆ ಎಚ್ಚರಿಕೆ ನೀಡಲಾಗಿದೆ. ತಾಲ್ಲೂಕು ಮಟ್ಟದ ಅಧಿಕಾರಿಗಳು ಕೇಂದ್ರ ಕಚೇರಿಯಲ್ಲಿ ಕಡ್ಡಾಯವಾಗಿ ಇರಬೇಕೆಂದು ತಿಳಿಸಲಾಗಿದೆ. ಜಿಲ್ಲಾಡಳಿತದಿಂದ ವಿವಿಧ ಹುದ್ದೆಗಳಿಗೆ ನೇಮಕಗೊಂಡ ನೋಡಲ್ ಅಧಿಕಾರಿಗಳು ಜಾಗರೂಕರಾಗಿರಬೇಕು ಮತ್ತು ಸಾರ್ವಜನಿಕ ದೂರುಗಳಿಗೆ ಸ್ಪಂದಿಸಬೇಕು ಎಂದು ಸೂಚಿಸಲಾಗಿದೆ.