Thursday, September 18, 2025
Flats for sale
Homeಜಿಲ್ಲೆಮಂಗಳೂರು : ದಕ್ಷಿಣ ಕನ್ನಡ ಜಿಲ್ಲೆಯಾದ್ಯಂತ ಬಾರಿ ಮಳೆ ಹಿನ್ನೆಲೆ ಅಂಗನವಾಡಿ ಕೇಂದ್ರ,ಪ್ರಾಥಮಿಕ & ಪ್ರೌಢ...

ಮಂಗಳೂರು : ದಕ್ಷಿಣ ಕನ್ನಡ ಜಿಲ್ಲೆಯಾದ್ಯಂತ ಬಾರಿ ಮಳೆ ಹಿನ್ನೆಲೆ ಅಂಗನವಾಡಿ ಕೇಂದ್ರ,ಪ್ರಾಥಮಿಕ & ಪ್ರೌಢ ಶಾಲೆ, ಪದವಿ ಪೂರ್ವ ಕಾಲೇಜು, ಸರ್ಕಾರಿ ಅನುದಾನಿತ ಶಾಲೆಗಳಿಗೆ ನಾಳೆ ರಜೆ ಘೋಷಣೆ..!

ಮಂಗಳೂರು : ದಕ್ಷಿಣ ಕನ್ನಡ ಜಿಲ್ಲೆಯಾದ್ಯಂತ ಮಳೆಯಾಗುತ್ತಿದ್ದು. ಇದೇ ಹವಾಮಾನ ಪರಿಸ್ಥಿತಿಯ ಮುಂದುವರಿಯುವ ಸೂಚನೆಯಿದ್ದು ಜಿಲ್ಲೆಯಾದ್ಯಂತ ರೆಡ್ – ಅಲರ್ಟ್ ಘೋಷಣೆಯಾಗಿದೆ ಮುಂಜಾಗ್ರತಾ ಕ್ರಮವಾಗಿ ದಕ್ಷಿಣ ಕನ್ನಡ ಜಿಲ್ಲಾ ವಿಪತ್ತು ನಿರ್ವಹಣಾ ಪ್ರಾಧಿಕಾರವು ಈ ಕೆಳಗಿನಂತೆ ತುರ್ತು ಕ್ರಮಗಳನ್ನು ಕೈಗೊಂಡಿದ್ದು ನಾಳೆ ಮುನ್ನೆಚ್ಚರಿಕೆ ಕ್ರಮವಾಗಿ, ಎಲ್ಲಾ ಅಂಗನವಾಡಿ ಕೇಂದ್ರಗಳು, ಪ್ರಾಥಮಿಕ ಮತ್ತು ಪ್ರೌಢಶಾಲೆಗಳು, ಪದವಿ ಪೂರ್ವ ಕಾಲೇಜುಗಳು ಮತ್ತು ಸರ್ಕಾರಿ ಅನುದಾನಿತ ಮತ್ತು ಖಾಸಗಿ ಶಿಕ್ಷಣ ಸಂಸ್ಥೆಗಳು ಆಗಸ್ಟ್ ನಾಳೆ 29 ಶುಕ್ರವಾರ ರಜೆ ಘೋಷಿಸಿದೆ.

ಬಂಗಾಳ ಕೊಲ್ಲಿಯಲ್ಲಿನ ವಾಯುಭಾರ ಕುಸಿತದಿಂದ ಕರ್ನಾಟಕದಾದ್ಯಂತ ಭಾರೀ ಮಳೆಯಾಗುತ್ತಿದೆ. ಆಗಸ್ಟ್ 31ರವರೆಗೆ ಭಾರೀ ಮಳೆಯಾಗುವ ಸಾಧ್ಯತೆ ಇದೆ. ಬೆಂಗಳೂರಿನಲ್ಲಿ ಹಗುರದಿಂದ ಸಾಧಾರಣ ಮಳೆ ನಿರೀಕ್ಷಿಸಲಾಗಿದೆ. ಕರಾವಳಿ ಜಿಲ್ಲೆಗಳಲ್ಲಿ ಸೆಪ್ಟೆಂಬರ್ 3ರವರೆಗೆ ವ್ಯಾಪಕ ಮಳೆಯಾಗುವ ಸಾಧ್ಯತೆ ಇದೆ.

ಚಿಕ್ಕಮಗಳೂರು, ಕೊಡಗು ಮತ್ತು ಶಿವಮೊಗ್ಗ ಜಿಲ್ಲೆಗಳಲ್ಲಿ ಒಂದು ಅಥವಾ ಎರಡು ಸ್ಥಳಗಳಲ್ಲಿ, ಬಳ್ಳಾರಿ, ಬೆಂಗಳೂರು, ಬೆಂಗಳೂರು ಗ್ರಾಮಾಂತರ, ಚಾಮರಾಕನರ, ಚಿಕ್ಕಬಳ್ಳಾಪುರು, ಚಿತ್ರದುರ್ಗ, ದಾವಣಗೆರೆ, ಹಾಸನ, ಕೋಲಾರ, ಮಂಡ್ಯ, ಮೈಸೂರು, ರಾಮನಗರ, ತುಮಕೂರು ಜಿಲ್ಲೆಗಳಲ್ಲಿ ಹಲವೆಡೆ (ಗಂಟೆಗೆ 30ರಿಂದ40 ಕಿ.ಮಿ) ಗುಡುಗು ಸಹಿತಿ ಮಳೆಯಾಗುವ ಸಾಧ್ಯತೆ ಇದೆ.

ಬೆಳಗಾವಿ, ಧಾರವಾಡ ಮತ್ತು ಹಾವೇರಿ ಜಿಲ್ಲೆಗಳಲ್ಲಿ ಒಂದು ಅಥವಾ ಎರಡು ಸ್ಥಳಗಳಲ್ಲಿ ಬಿರುಗಾಳಿಯೊಂದಿಗೆ (ಗಂಟೆಗೆ 30ರಿಂದ40 ಕಿ.ಮಿ) ಗುಡುಗು ಸಹಿತಿ ಭಾರೀ ಮಳೆಯಾಗುವ ಸಾಧ್ಯತೆ ಇದೆ. ಬಾಗಲಕೋಟೆ, ಬೀದರ್​ ಗದಗ, ಕಲಬುರ್ಗಿ, ಕೊಪ್ಪಳ, ರಾಯಚೂರು, ವಿಜಯಪುರ ಮತ್ತು ಯಾದಗಿರಿ ಜಿಲ್ಲೆಗಳಲ್ಲಿ ಹಲವೆಡೆ (ಗಂಟೆಗೆ 30ರಿಂದ40 ಕಿ.ಮಿ) ಗುಡುಗು ಸಹಿತಿ ಭಾರೀ ಮಳೆಯಾಗುವ ಸಾಧ್ಯತೆ ಇದೆ.

RELATED ARTICLES

LEAVE A REPLY

Please enter your comment!
Please enter your name here

Most Popular