Wednesday, July 1, 2026
Homeಜಿಲ್ಲೆಮಂಗಳೂರು : ದಕ್ಷಿಣ ಕನ್ನಡ ಜಿಲ್ಲೆಯಲ್ಲಿ ಬಾರಿ ಮಳೆ, ನಾಳೆ ಅಂಗನವಾಡಿ, PU ಕಾಲೇಜುವರೆಗೆ ರಜೆ...

ಮಂಗಳೂರು : ದಕ್ಷಿಣ ಕನ್ನಡ ಜಿಲ್ಲೆಯಲ್ಲಿ ಬಾರಿ ಮಳೆ, ನಾಳೆ ಅಂಗನವಾಡಿ, PU ಕಾಲೇಜುವರೆಗೆ ರಜೆ ಘೋಷಣೆ.

ಮಂಗಳೂರು : ಭಾರತೀಯ ಹವಾಮಾನ ಇಲಾಖೆ ಹಾಗೂ ಕರ್ನಾಟಕ ರಾಜ್ಯ ನೈಸರ್ಗಿಕ ವಿಕೋಪ ಉಸ್ತುವಾರಿ ಕೇಂದ್ರದ ಮುನ್ಸೂಚನೆಯಂತೆ ದಕ್ಷಿಣ ಕನ್ನಡ ಜಿಲ್ಲೆಯಲ್ಲಿ ಭಾರೀ ಮಳೆಯ ಸಾಧ್ಯತೆಯಿಂದ ರೆಡ್ ಅಲರ್ಟ್ ಘೋಷಿಸಲಾಗಿದೆ.

ಮುಂಜಾಗ್ರತಾ ಕ್ರಮವಾಗಿ ಜಿಲ್ಲಾ ವಿಪತ್ತು ನಿರ್ವಹಣಾ ಪ್ರಾಧಿಕಾರವು ಜುಲೈ 2, 2026ರಂದು ಜಿಲ್ಲೆಯ ಎಲ್ಲಾ ಅಂಗನವಾಡಿ ಕೇಂದ್ರಗಳು, ಪ್ರಾಥಮಿಕ ಹಾಗೂ ಪ್ರೌಢ ಶಾಲೆಗಳು, ಸರ್ಕಾರಿ, ಅನುದಾನಿತ ಮತ್ತು ಖಾಸಗಿ ಶಾಲೆಗಳು ಹಾಗೂ ಪದವಿ ಪೂರ್ವ ಕಾಲೇಜುಗಳಿಗೆ (12ನೇ ತರಗತಿಯವರೆಗೆ) ರಜೆ ಘೋಷಿಸಿದೆ.

ಜಿಲ್ಲಾಡಳಿತ ಸಾರ್ವಜನಿಕರಿಗೆ ಹಲವು ಮುನ್ನೆಚ್ಚರಿಕೆ ಸೂಚನೆಗಳನ್ನು ನೀಡಿದ್ದು, ಮಕ್ಕಳು ನದಿ, ಕೆರೆ, ತಗ್ಗು ಪ್ರದೇಶ ಹಾಗೂ ಸಮುದ್ರ ತೀರಗಳಿಗೆ ತೆರಳದಂತೆ ಪಾಲಕರು ಎಚ್ಚರ ವಹಿಸುವಂತೆ ಮನವಿ ಮಾಡಿದೆ. ಮೀನುಗಾರರು ಸಮುದ್ರಕ್ಕೆ ಇಳಿಯಬಾರದು ಎಂದು ಸೂಚಿಸಲಾಗಿದೆ.

ಪ್ರವಾಸಿಗರು ಹಾಗೂ ಸಾರ್ವಜನಿಕರು ನದಿ ಮತ್ತು ಸಮುದ್ರ ತೀರಗಳಿಗೆ ತೆರಳದಂತೆ ಎಚ್ಚರಿಕೆ ನೀಡಲಾಗಿದೆ. ಜಿಲ್ಲಾ ಹಾಗೂ ತಾಲ್ಲೂಕು ಮಟ್ಟದ ಅಧಿಕಾರಿಗಳು ಕೇಂದ್ರ ಸ್ಥಾನದಲ್ಲಿದ್ದು ವಿಪತ್ತು ನಿರ್ವಹಣೆಗೆ ಸನ್ನದ್ಧರಾಗಿರಬೇಕು ಹಾಗೂ ಸಾರ್ವಜನಿಕರ ದೂರುಗಳಿಗೆ ತಕ್ಷಣ ಸ್ಪಂದಿಸುವಂತೆ ನಿರ್ದೇಶಿಸಲಾಗಿದೆ.

ಇದಲ್ಲದೆ, ಎಲ್ಲಾ ತಾಲ್ಲೂಕುಗಳಲ್ಲಿ ಕಾಳಜಿ ಕೇಂದ್ರಗಳನ್ನು ತೆರೆದು ಅಗತ್ಯ ಸಿದ್ಧತೆಗಳನ್ನು ಕೈಗೊಳ್ಳುವಂತೆ ಸಂಬಂಧಿತ ಇಲಾಖೆಯ ಅಧಿಕಾರಿಗಳಿಗೆ ಸೂಚಿಸಲಾಗಿದೆ. ಪ್ರಾಕೃತಿಕ ವಿಕೋಪಕ್ಕೆ ಸಂಬಂಧಿಸಿದ ತುರ್ತು ಪರಿಸ್ಥಿತಿಯಲ್ಲಿ ಜಿಲ್ಲಾಧಿಕಾರಿ ಕಚೇರಿಯ ನಿಯಂತ್ರಣ ಕೊಠಡಿ ಹಾಗೂ ಜಿಲ್ಲಾ ವಿಪತ್ತು ನಿರ್ವಹಣಾ ಪ್ರಾಧಿಕಾರದ ಸಹಾಯವಾಣಿಯನ್ನು ಸಂಪರ್ಕಿಸುವಂತೆ ಸಾರ್ವಜನಿಕರಿಗೆ ಮನವಿ ಮಾಡಲಾಗಿದೆ.

RELATED ARTICLES

LEAVE A REPLY

Please enter your comment!
Please enter your name here

Most Popular