Tuesday, October 21, 2025
Flats for sale
Homeಜಿಲ್ಲೆಮಂಗಳೂರು : ದಿ.ಮನೋಜ್ ಕುಮಾರ್ ಶೆಟ್ಟಿಯವರ ಸವಿನೆನಪಿಗಾಗಿ ಕುಟುಂಬದ ವತಿಯಿಂದ ಸರಕಾರಿ ಪ್ರೌಢಶಾಲೆ ಹೊಯ್ಗೆ ಬಜಾರ್...

ಮಂಗಳೂರು : ದಿ.ಮನೋಜ್ ಕುಮಾರ್ ಶೆಟ್ಟಿಯವರ ಸವಿನೆನಪಿಗಾಗಿ ಕುಟುಂಬದ ವತಿಯಿಂದ ಸರಕಾರಿ ಪ್ರೌಢಶಾಲೆ ಹೊಯ್ಗೆ ಬಜಾರ್ ನಲ್ಲಿ ಉಚಿತ ಪುಸ್ತಕ ವಿತರಣೆ..!

ಮಂಗಳೂರು : ದಿ.ಮನೋಜ್ ಕುಮಾರ್ ಶೆಟ್ಟಿಯವರ ಸವಿನೆನಪಿಗಾಗಿ ಕುಟುಂಬದ ವತಿಯಿಂದ ಶಾಸಕ ವೇದವ್ಯಾಸ ಕಾಮತ್ ರವರ ಉಪಸ್ಥಿತಿಯಲ್ಲಿ ಸರಕಾರಿ ಪ್ರೌಢ ಶಾಲೆ ಹೊಯ್ಗೆ ಬಜಾರ್ ನಲ್ಲಿ ಉಚಿತ ಪುಸ್ತಕ ವಿತರಣೆ ಸಮಾರಂಭವು ನಡೆಯಿತು.

ಈ ಸಂದರ್ಭದಲ್ಲಿ ಮಾತನಾಡಿದ ಶಾಸಕರು, ದಿ.ಮನೋಜ್ ಕುಮಾರ್ ರವರು ಭಾರತೀಯ ಜನತಾ ಪಾರ್ಟಿಯಲ್ಲಿ ಸಕ್ರಿಯರಾಗಿದ್ದವರು. ವೈಯಕ್ತಿಕವಾಗಿ ನನಗೂ ಬಹಳ ಆತ್ಮೀಯರಾಗಿದ್ದ ಅವರು ಈ ಭಾಗದ ಪಕ್ಷ ಸಂಘಟನೆಯಲ್ಲಿ ಎಲ್ಲರಿಗೂ ಮಾದರಿಯಾಗುವಂತೆ ತೊಡಗಿಸಿಕೊಂಡಿದ್ದರು. ಸಮಾಜಕ್ಕಾಗಿ ಏನಾದರೂ ಮಾಡಬೇಕು ಎನ್ನುತ್ತಲೇ ಸದಾ ಸಾಮಾಜಿಕ ಕಾರ್ಯಗಳಲ್ಲಿ ನಿರತರಾಗಿದ್ದ ಅವರ ಸೇವಾ ಚಟುವಟಿಕೆಗಳನ್ನು ಇದೀಗ ಕುಟುಂಬಸ್ಥರು ಮುಂದುವರಿಸಿಕೊಂಡು ಹೋಗುತ್ತಿರುವುದು ಶ್ಲಾಘನೀಯ ಎಂದರು.

ಮಾಜಿ ಮೇಯರ್ ದಿವಾಕರ ಪಾಂಡೇಶ್ವರ, ನಿಕಟಪೂರ್ವ ಪಾಲಿಕೆ ಸದಸ್ಯೆ ರೇವತಿ ಶ್ಯಾಮ ಸುಂದರ್ ಶೆಟ್ಟಿ, ಮನೋಜ್ ರವರ ಸಹೋದರರಾದ ಸತೀಶ್ ಶೆಟ್ಟಿ, ಸಂತೋಷ್ ಶೆಟ್ಟಿ, ಬಿಜೆಪಿ ಪ್ರಮುಖರಾದ ಲಲ್ಲೇಶ್ ಕುಮಾರ್, ವಿನೋದ್ ಮೆಂಡನ್, ಅನಿಲ್ ಹೊಯ್ಗೆ ಬಜಾರ್, ನಿತಿನ್ ಕುಮಾರ್, ಸೇರಿದಂತೆ ಶಾಲೆಯ ಶಿಕ್ಷಕರು, ವಿದ್ಯಾರ್ಥಿಗಳು ಉಪಸ್ಥಿತರಿದ್ದರು.

RELATED ARTICLES

LEAVE A REPLY

Please enter your comment!
Please enter your name here

Most Popular