Tuesday, March 17, 2026
Flats for sale
Homeಜಿಲ್ಲೆಮಂಗಳೂರು : ದೇವಸ್ಥಾನದ ಬ್ರಹ್ಮಕಲಶೋತ್ಸವದ ವೇಳೆ ಕೋಮು ಪ್ರಚೋದನಕಾರಿ ಭಾಷಣ ; ಬಿಜೆಪಿ ಶಾಸಕ ಹರೀಶ್...

ಮಂಗಳೂರು : ದೇವಸ್ಥಾನದ ಬ್ರಹ್ಮಕಲಶೋತ್ಸವದ ವೇಳೆ ಕೋಮು ಪ್ರಚೋದನಕಾರಿ ಭಾಷಣ ; ಬಿಜೆಪಿ ಶಾಸಕ ಹರೀಶ್ ಪೂಂಜಾ ಮೇಲೆ FIR ದಾಖಲು…!

ಮಂಗಳೂರು : ಕೋಮು ಪ್ರಚೋದನಕಾರಿ ಭಾಷಣ ಮಾಡಿದ ಆರೋಪದ ಹಿನ್ನೆಲೆ ಬೆಳ್ತಂಗಡಿ ಬಿಜೆಪಿ ಶಾಸಕ ಹರೀಶ್ ಪೂಂಜಾ ವಿರುದ್ಧ FIR ದಾಖಲಾಗಿದೆ.

ದಕ್ಷಿಣ ಕನ್ನಡ ಜಿಲ್ಲೆಯ ಬೆಳ್ತಂಗಡಿ ತಾಲೂಕಿನ ತೆಕ್ಕಾರು ಗೋಪಾಲಕೃಷ್ಣ ದೇವಸ್ಥಾನದ ಬ್ರಹ್ಮಕಳಶೋತ್ಸವದ ಸಂದರ್ಭದಲ್ಲಿ ಕೋಮು ಪ್ರಚೋದನಕಾರಿ ಭಾಷಣ ಮಾಡಿದ ಆರೋಪದ ಹಿನ್ನೆಲೆ ತಕ್ಕಾರು ನಿವಾಸಿ ಇಬ್ರಾಹಿಂ ಎಸ್‌.ಬಿ ಎಂಬುವರಿಂದ ಉಪ್ಪಿನಂಗಡಿ ಪೊಲೀಸ್ ಠಾಣೆಯಲ್ಲಿ ದೂರು ದಾಖಲಾಗಿದೆ.
.
ಮುಸ್ಲಿಂ ಧರ್ಮದ ವಿರುದ್ಧ ಅವಹೇಳನಕಾರಿ ಹಾಗೂ ಪ್ರಚೋದನಕಾರಿ ಭಾಷಣ ಎಂದು ದೂರಿನಲ್ಲಿ ಆರೋಪಿಸಿದ್ದು ಧರ್ಮ-ಧರ್ಮಗಳ ನಡುವೆ ಧ್ವೇಷ ಬಿತ್ತುವ ಭಾಷಣ ಎಂದು ದೂರಿನಲ್ಲಿ ಉಲ್ಲೇಖಿಸಲಾಗಿದೆ. ಈ ಬಗ್ಗೆ BNSS ಆಕ್ಟ್ 196, 352(2) ಅಡಿ ಪ್ರಕರಣ ದಾಖಲಾಗಿದೆ ಎಂದು ತಿಳಿದುಬಂದಿದೆ.

RELATED ARTICLES

LEAVE A REPLY

Please enter your comment!
Please enter your name here

Most Popular