ಮಂಗಳೂರು : ಉಳ್ಳಾಲ ಪೊಲೀಸ್ ಠಾಣಾ ವ್ಯಾಪ್ತಿಯ ಚೆಂಬುಗುಡ್ಡೆ ಬಳಿ ಶನಿವಾರ ಬೈಕ್ಗೆ ಕಾರೊಂದು ಡಿಕ್ಕಿ ಹೊಡೆದ ಪರಿಣಾಮ ಬೈಕ್ನಲ್ಲಿದ್ದ ಮಗನಿಗೆ ಗಂಭೀರ ಗಾಯಗಳಾಗಿದ್ದು, ಬೈಕ್ ಸವಾರರೊಬ್ಬರು ಮೃತಪಟ್ಟಿದ್ದಾರೆ. ಅಳೇಕಲ್ ನ ಅಬ್ಬಾಸ್ (58) ಮೃತ ವ್ಯಕ್ತಿ. ಅಬ್ಬಾಸ್ ತನ್ನ ಮಗನೊಂದಿಗೆ ದೇರ್ಲಕಟ್ಟೆ ಕಡೆಗೆ ಹೋಗುತ್ತಿದ್ದಾಗ ಈ ದುರ್ಘಟನೆ ಸಂಭವಿಸಿದೆ. ಡಿಕ್ಕಿಯ ರಭಸಕ್ಕೆ ಸವಾರರಿಬ್ಬರೂ ರಸ್ತೆಗೆ ಬಿದ್ದಿದ್ದಾರೆ. ಇಬ್ಬರನ್ನೂ ಆಸ್ಪತ್ರೆಗೆ ಸಾಗಿಸಲಾಯಿತಾದರೂ ಮಾರ್ಗಮಧ್ಯೆ ಅಬ್ಬಾಸ್ ಮೃತಪಟ್ಟಿದ್ದಾರೆ. ನೌಶಾದ್ ದೇರ್ಲಕಟ್ಟೆಯ ಖಾಸಗಿ ಆಸ್ಪತ್ರೆಯಲ್ಲಿ ಚಿಕಿತ್ಸೆ ಪಡೆಯುತ್ತಿದ್ದಾರೆ. ಮಂಗಳೂರು ದಕ್ಷಿಣ ಸಂಚಾರ ಪೊಲೀಸರು ಪ್ರಕರಣ ದಾಖಲಿಸಿಕೊಂಡಿದ್ದಾರೆ.


