ಮಂಗಳೂರು : ದಕ್ಷಿಣ ಕನ್ನಡ ಜಿಲ್ಲಾ ಪಂಚಾಯತ್ ಮಾಜಿ ಅಧ್ಯಕ್ಷೆ ಸುಷ್ಮಾ ಜನಾರ್ದನ್ ಅವರು ಆಗಸ್ಟ್ 30, ಬುಧವಾರದಂದು ದೇರ್ಲಕಟ್ಟೆ ಕಾಯರ್ಪಳಿಕೆಯಲ್ಲಿರುವ ತಮ್ಮ ನಿವಾಸದಲ್ಲಿ ನಿಧನರಾದರು. ಅವರು 56 ವರ್ಷ ವಯಸ್ಸಿನವರಾಗಿದ್ದರು ಮತ್ತು ಸ್ವಲ್ಪ ಸಮಯದಿಂದ ಅನಾರೋಗ್ಯದಿಂದ ಬಳಲುತ್ತಿದ್ದರು. ಸುಷ್ಮಾ ಜನಾರ್ಧನ್ ಅವರು ಪತಿ ಹಾಗೂ ಇಬ್ಬರು ಪುತ್ರರನ್ನು ಅಗಲಿದ್ದಾರೆ. ಅವರು ಎಲ್ಐಸಿ ಏಜೆಂಟ್ಸ್ ಮಲ್ಟಿ-ಪರ್ಪಸ್ ಕೋ-ಆಪರೇಟಿವ್ ಸೊಸೈಟಿಯ ಸಂಸ್ಥಾಪಕ ನಿರ್ದೇಶಕರಾಗಿದ್ದರು ಮತ್ತು ಹಿರಿಯ ಎಲ್ಐಸಿ ಏಜೆಂಟ್ ಆಗಿದ್ದರು. ಅವರು ಸಕ್ರಿಯ ಬಿಜೆಪಿ ಕಾರ್ಯಕರ್ತೆಯಾಗಿದ್ದರು.


