ಮಂಗಳೂರು : ಬೆಳಗಾವಿಯಲ್ಲಿ ಮರಾಠಿಗರ ಪುಂಡಾಟಿಕೆ ಹೆಚ್ಚಾಗಿದೆ,ಇತ್ತೀಚೆಗೆ ಬೆಳಗಾವಿಯಲ್ಲಿ ಮರಾಠಿ ಯುವಕರ ಗುಂಪೊಂದು ಕೆಎಸ್‌ಆರ್‌ಟಿಸಿ ಬಸ್ ಕಂಡಕ್ಟರ್ ಮೇಲೆ ಹಲ್ಲೆ ನಡೆಸಿದ್ದು, ಬೆಳಗಾವಿಯಲ್ಲಿ ಮರಾಠಿ ಮಾತನಾಡುವ ಜನರ ಗಲಭೆಯ ಕೃತ್ಯಗಳನ್ನು ಖಂಡಿಸಿ ವಿವಿಧ ಕನ್ನಡ ಪರ ಸಂಘಟನೆಗಳು ಕರ್ನಾಟಕ ಬಂದ್‌ಗೆ ಕರೆ ನೀಡಿರುವ ಹಿನ್ನೆಲೆಯಲ್ಲಿ ಮಾರ್ಚ್ 22 ರಂದು ಜಿಲ್ಲೆಯಲ್ಲಿ ಯಾವುದೇ ಬಸ್ ಬಂದ್ ಇರುವುದಿಲ್ಲ ಎಂದು ದಕ್ಷಿಣ ಕನ್ನಡ ಕೆನರಾ ಬಸ್ ಮಾಲಕರ ಸಂಘ ತಿಳಿಸಿದೆ.
ದ.ಕ. ಬಸ್ ಮಾಲಕರ ಸಂಘದ ಅಧ್ಯಕ್ಷ ಅಜೀಜ್ ಪಾರ್ತಿಪ್ಪಾಡಿ ಮಾತನಾಡಿ, ಕನ್ನಡ ಸಂಘಟನೆಗಳ ಬೇಡಿಕೆಯನ್ನು ಸಂಘ ಬೆಂಬಲಿಸುತ್ತದೆಯಾದರೂ, ಬಂದ್‌ನಲ್ಲಿ ಭಾಗವಹಿಸುವುದಿಲ್ಲ. ಎಸ್‌ಎಸ್‌ಎಲ್‌ಸಿ ಪರೀಕ್ಷೆಗಳು ನಡೆಯುತ್ತಿರುವುದರಿಂದ ಸಾರ್ವಜನಿಕರ ಹಾಗೂ ವಿದ್ಯಾರ್ಥಿಗಳ ಹಿತದೃಷ್ಟಿಯಿಂದ ಬಸ್‌ಗಳು ಎಂದಿನಂತೆ ಸಂಚರಿಸಲಿವೆ ಎಂದು ಅವರು ಸ್ಪಷ್ಟಪಡಿಸಿದ್ದಾರೆ.