Wednesday, November 5, 2025
Flats for sale
Homeಜಿಲ್ಲೆಮಂಗಳೂರು ; ದ.ಕ ಜಿಲ್ಲೆಯಾದ್ಯಂತ ಬಾರಿ ಮಳೆ ಹಿನ್ನೆಲೆ ನಾಳೆ ಅಂಗನವಾಡಿ ಕೇಂದ್ರ,ಪ್ರಾಥಮಿಕ & ಪ್ರೌಢ...

ಮಂಗಳೂರು ; ದ.ಕ ಜಿಲ್ಲೆಯಾದ್ಯಂತ ಬಾರಿ ಮಳೆ ಹಿನ್ನೆಲೆ ನಾಳೆ ಅಂಗನವಾಡಿ ಕೇಂದ್ರ,ಪ್ರಾಥಮಿಕ & ಪ್ರೌಢ ಶಾಲೆ, ಸರ್ಕಾರಿ ಅನುದಾನಿತ ಹಾಗೂ ಖಾಸಗಿ ವಿದ್ಯಾ ಸಂಸ್ಥೆಗಳಿಗೆ ರಜೆ ಘೋಷಣೆ..!

ಮಂಗಳೂರು : ಭಾರತೀಯ ಹವಾಮಾನ ಇಲಾಖೆ ಮತ್ತು ಕರ್ನಾಟಕ ರಾಜ್ಯ ನೈಸರ್ಗಿಕ ವಿಕೋಪ ಉಸ್ತುವಾರಿ ಕೇಂದ್ರ, ಬೆಂಗಳೂರು ಹೊರಡಿಸಿರುವ ಮುನ್ಸೂಚನೆಯಂತೆ ದಕ್ಷಿಣ ಕನ್ನಡ ಜಿಲ್ಲೆಯಾದ್ಯಂತ ಮಳೆಯಾಗುತ್ತಿದ್ದು. ಇದೇ ಹವಾಮಾನ ಪರಿಸ್ಥಿತಿಯ ಮುಂದುವರಿಯುವ ಸೂಚನೆಯಿದ್ದು ಮುಂಜಾಗ್ರತಾ ಕ್ರಮವಾಗಿ ದಕ್ಷಿಣ ಕನ್ನಡ ಜಿಲ್ಲಾ ವಿಪತ್ತು ನಿರ್ವಹಣಾ ಪ್ರಾಧಿಕಾರವು ಈ ಕೆಳಗಿನಂತೆ ತುರ್ತು ಕ್ರಮಗಳನ್ನು ಕೈಗೊಂಡಿದೆ.

ಈ ಹಿನ್ನೆಲೆ ದಕ್ಷಿಣ ಕನ್ನಡ ಜಿಲ್ಲೆಯ ಎಲ್ಲಾ ಅಂಗನವಾಡಿ ಕೇಂದ್ರಗಳಿಗೆ, ಪ್ರಾಥಮಿಕ & ಪ್ರೌಢ ಶಾಲೆ, ಸರ್ಕಾರಿ ಅನುದಾನಿತ ಮತ್ತು ಖಾಸಗಿ ವಿದ್ಯಾಸಂಸ್ಥೆಗಳಿಗೆ ದಿನಾಂಕ: 30-08-2025 ರಂದು ರಜೆಯನ್ನು ಘೋಷಿಸಲಾಗಿದೆ.

ಈ ಬಗ್ಗೆ ಜಿಲ್ಲಾಡಳಿತ ಹೆಚ್ಚರಿಸಿದ್ದು ನೀರು ಇರುವ ತಗ್ಗು ಪ್ರದೇಶ. ಕೆರೆ, ನದಿತೀರ ಸಮುದ್ರತೀರಕ್ಕೆ ಮಕ್ಕಳು ಹೋಗದಂತೆ ಪಾಲಕರು ಜಾಗ್ರತೆ ವಹಿಸುವುದು.
ಮೀನುಗಾರರು ಸಮುದ್ರಕ್ಕೆ ಇಳಿಯದಂತೆ ಈ ಮೂಲಕ ಸೂಚನೆ ನೀಡಿದೆ.

ಜಿಲ್ಲಾ ಮಟ್ಟದ ಮತ್ತು ತಾಲ್ಲೂಕು ಮಟ್ಟದ ಅಧಿಕಾರಿಗಳು, ಕಡ್ಡಾಯವಾಗಿ ಕೇಂದ್ರ ಸ್ಥಾನದಲ್ಲಿರತಕ್ಕದು ಹಾಗೂ ವಿಪತ್ತು ನಿರ್ವಹಣೆಯನ್ನು ಚಾಚೂ ತಪ್ಪದೇ ಕಡ್ಡಾಯವಾಗಿ ನಿರ್ವಹಿಸುವುದು ಸಾರ್ವಜನಿಕ ದೂರುಗಳಿಗೆ ತಕ್ಷಣ ಸ್ಪಂದಿಸುವುದು ಮತ್ತು ಜಿಲ್ಲಾಧಿಕಾರಿ ಕಛೇರಿಯ ನಿಯಂತ್ರಣ ಕೊಠಡಿಯೊಂದಿಗೆ ನಿರಂತರ ಸಂಪರ್ಕದಲ್ಲಿರುವುದು. ಪ್ರವಾಸಿಗರು / ಸಾರ್ವಜನಿಕರು ನದಿತೀರಕ್ಕೆ, ಸಮುದ್ರತೀರಕ್ಕೆ ತೆರಳದಂತೆ ಸೂಚಿಸಲಾಗಿದೆ.

RELATED ARTICLES

LEAVE A REPLY

Please enter your comment!
Please enter your name here

Most Popular