Friday, September 18, 2026
Homeಜಿಲ್ಲೆಮಂಗಳೂರು: ದ.ಕ.ಜಿಲ್ಲೆಯ ನಗರ ವ್ಯಾಪ್ತಿಯಲ್ಲಿ 148 ರೌಡಿಶೀಟರ್‌ಗಳ ಮನೆಗಳ ಮೇಲೆ ಪೊಲೀಸರ ದಾಳಿ.

ಮಂಗಳೂರು: ದ.ಕ.ಜಿಲ್ಲೆಯ ನಗರ ವ್ಯಾಪ್ತಿಯಲ್ಲಿ 148 ರೌಡಿಶೀಟರ್‌ಗಳ ಮನೆಗಳ ಮೇಲೆ ಪೊಲೀಸರ ದಾಳಿ.

ಮಂಗಳೂರು : ದಕ್ಷಿಣ ಕನ್ನಡ ಜಿಲ್ಲಾ ಪೊಲೀಸ್ ಠಾಣಾ ವ್ಯಾಪ್ತಿಯ 83 ರೌಡಿ ಶೀಟರ್‌ಗಳ ಮನೆಗಳ ಮೇಲೆ ಪೊಲೀಸರು ಭಾನುವಾರ ಬೆಳಗ್ಗೆ ದಾಳಿ ನಡೆಸಿದ್ದಾರೆ.

ಅವರ ಮನೆಗಳಲ್ಲಿ ಶಸ್ತ್ರಾಸ್ತ್ರಗಳಿಗಾಗಿ ಪೊಲೀಸರು ಶೋಧ ನಡೆಸಿದ್ದು, ಯಾವುದೇ ರೌಡಿಸಂ ಚಟುವಟಿಕೆಗಳಲ್ಲಿ ಭಾಗಿಯಾಗದಂತೆ ಎಚ್ಚರಿಕೆ ನೀಡಲಾಗಿದೆ. ದಾಳಿ ವೇಳೆ ಯಾವುದೇ ಶಸ್ತ್ರಾಸ್ತ್ರಗಳು ಪತ್ತೆಯಾಗಿಲ್ಲ.

ಸಮಾಜಘಾತುಕರ ಚಟುವಟಿಕೆಗಳ ಮೇಲೆ ನಿಗಾ ಇಡಲು ಆಗಾಗ್ಗೆ ಇದೇ ರೀತಿ ದಾಳಿ ನಡೆಸುತ್ತಿದ್ದೇವೆ ಎಂದು ಪೊಲೀಸ್ ಅಧಿಕಾರಿಗಳು ತಿಳಿಸಿದ್ದಾರೆ.

ನಗರ ಪೊಲೀಸ್ ಆಯುಕ್ತರು ನೀಡಿದ ಮಾಹಿತಿ ಮೇರೆಗೆ ಮಂಗಳೂರು ಪೊಲೀಸ್ ಕಮಿಷನರೇಟ್ ವ್ಯಾಪ್ತಿಯಲ್ಲಿ ದಾಳಿ ನಡೆಸಲಾಗಿದ್ದು, 148 ರೌಡಿ ಶೀಟರ್‌ಗಳನ್ನು ಕೂಲಂಕುಷವಾಗಿ ತಪಾಸಣೆಗೆ ಒಳಪಡಿಸಲಾಗಿದೆ.

RELATED ARTICLES

LEAVE A REPLY

Please enter your comment!
Please enter your name here

Most Popular