ಮಂಗಳೂರು : ಧರ್ಮಸ್ಥಳ ಪ್ರಕರಣಕ್ಕೆ ಸಂಬಂಧಿಸಿದಂತೆ, ಹಲವಾರು ಶವಗಳನ್ನು ಹೂಳಲಾಗಿದೆ ಎಂಬ ಆರೋಪ ಕೇಳಿಬಂದಿದ್ದು, ಎಸ್‌ಐಟಿ ಅಧಿಕಾರಿಗಳು ದೂರುದಾರ ‘ಮಾಸ್ಕ್‌ಮ್ಯಾನ್’ ಅವರನ್ನು ಸುಳ್ಳು ಮಾಹಿತಿ ನೀಡಿದ ಆರೋಪದ ಮೇಲೆ ಬಂಧಿಸಿದ್ದಾರೆ. ಆಗಸ್ಟ್ 23 ರ ಶನಿವಾರ ಬೆಳಿಗ್ಗೆ 11 ಗಂಟೆಗೆ ಎಸ್‌ಐಟಿ ಅಧಿಕಾರಿಗಳು ಬೆಳ್ತಂಗಡಿ ನ್ಯಾಯಾಲಯದ ಮುಂದೆ ಹಾಜರುಪಡಿಸಿದ್ದಾರೆ.
ಮೂಲಗಳ ಪ್ರಕಾರ, ಎಸ್‌ಐಟಿ ಮುಖ್ಯಸ್ಥ ಪ್ರಣವ್ ಮೊಹಾಂತಿ ಅವರು ಆಗಸ್ಟ್ 22 ರಂದು ಬೆಳಿಗ್ಗೆ 10 ರಿಂದ ಆಗಸ್ಟ್ 23 ರಂದು ಬೆಳಿಗ್ಗೆ 5 ಗಂಟೆಯವರೆಗೆ ದೂರುದಾರರನ್ನು ತೀವ್ರ ವಿಚಾರಣೆಗೆ ಒಳಪಡಿಸಿದರು. ವಿಚಾರಣೆಯ ನಂತರ, ದೂರು ಸುಳ್ಳು ಎಂದು ದೃಢಪಟ್ಟಿತು, ಇದರಿಂದಾಗಿ ಬಂಧಿಸಿದ್ದಾರೆ.
ಅನಾಮಿಕನ ಅಸಲಿ ಮುಖ ಈಗ ಅನಾವರಣಗೊಂಡಿದೆ.ಅನಾಮಿಕ ಮೂಲತಃ ಮಂಡ್ಯ ಜಿಲ್ಲೆಯವನು ಎನ್ನಲಾಗಿದ್ದು, ಆತನ ಹೆಸರು ಸಿಎ ಚಿನ್ನಯ್ಯ ಅಲಿಯಾಸ್ ಚೆನ್ನ ಎಂದು ಹೇಳಲಾಗಿದೆ. ಸದ್ಯ ಆತ ಎಸ್‌ಐಟಿ ವಶದಲ್ಲಿದ್ದು, ತನಿಖೆ ನಡೆಯುತ್ತಿರುವ ಕಾರಣ ಹೆಚ್ಚಿನ ಮಾಹಿತಿ ನೀಡಲಾಗದು ಎಂದು ಗೃಹ ಸಚಿವ ಡಾ. ಜಿ ಪರಮೇಶ್ವರ ಪ್ರತಿಕ್ರಿಯಿಸಿದ್ದಾರೆ.


