Saturday, March 14, 2026
Flats for sale
Homeಜಿಲ್ಲೆಮಂಗಳೂರು : ಧರ್ಮಸ್ಥಳ ವ್ಯಾಪ್ತಿಯಲ್ಲಿ ಕಳೆದ ಹಲವಾರು ವರ್ಷಗಳಿಂದ ಅಸಹಜ ಸಾವು ಪ್ರಕರಣ : ನೈಜ...

ಮಂಗಳೂರು : ಧರ್ಮಸ್ಥಳ ವ್ಯಾಪ್ತಿಯಲ್ಲಿ ಕಳೆದ ಹಲವಾರು ವರ್ಷಗಳಿಂದ ಅಸಹಜ ಸಾವು ಪ್ರಕರಣ : ನೈಜ ಆರೋಪಿಗಳನ್ನು ಪತ್ತೆ ಹಚ್ಚುವಂತೆ ಆಗಸ್ಟ್.24 ರಂದು ಸೌಜನ್ಯ ಹೋರಾಟ ಸಮಿತಿಯಿಂದ ‘ಉಜಿರೆ ಚಲೋ’ …!

ಮಂಗಳೂರು : ಧರ್ಮಸ್ಥಳ ವ್ಯಾಪ್ತಿಯಲ್ಲಿ ಕಳೆದ ಹಲವಾರು ವರ್ಷಗಳಿಂದ ಅತ್ಯಾಚಾರ, ಕೊಲೆ, ದರೋಡೆಯಂತಹ ಹಲವಾರು ಪ್ರಕರಣಗಳು ನಡೆಯುತ್ತಿದೆ. 1983 ರಲ್ಲಿ ಧರ್ಮಸ್ಥಳದಲ್ಲಿ ನಡೆದಂತಹ ಸಾವುಗಳ ಬಗ್ಗೆ ಅಂದಿನ ವಿಧಾನ ಸಭೆಯಲ್ಲಿ ಕೂಡಾ ಚರ್ಚೆಗಳು ನಡೆದಿದ್ದವು. ಅದಾದ ನಂತರ 1986 ರಲ್ಲಿ ಶ್ರೀ ಕ್ಷೇತ್ರ ಧರ್ಮಸ್ಥಳದ ವತಿಯಿಂದ ನಡೆಯುವ ಶಾಲೆಯ ಶಿಕ್ಷಕಿಯಾದ ವೇದವಲ್ಲಿ ಎನ್ನುವವರನ್ನು ಪೆಟ್ರೋಲ್ ಸುರಿದು ಕೊಲೆ ಮಾಡಲಾಗಿತ್ತು. ಈ ಪ್ರಕರಣ ಆರೋಪಿ ಸಿಕ್ಕಿಲ್ಲ,ನಂತರ 1973 ರಲ್ಲಿ ಎಸ್.ಡಿ.ಎಮ್ ಕಾಲೇಜಿನ ವಿದ್ಯಾರ್ಥಿನಿ ಪದ್ಮಲತಾ ಅತ್ಯಾಚಾರ ಮತ್ತು ಕೊಲೆ ನಡೆದಿತ್ತು. ಇದರಲ್ಲೂ ಆರೋಪಿ ಸಿಕ್ಕಿಲ್ಲ. ನಂತರ 2012 ರಲ್ಲಿ ಶ್ರೀ ಕ್ಷೇತ್ರದಲ್ಲಿ ಕೆಲಸ ಮಾಡಿರುವ ಆನೆ ಮಾವುತ ನಾರಾಯಣ ಮತ್ತು ಯಮುನಾರವರ ಕೊಲೆ, ದರೋಡೆ ನಡೆದಿತ್ತು, ಇಲ್ಲೂ ಕೂಡ ಆರೋಪಿ ಸಿಕ್ಕಿಲ್ಲ. ಇದಾಗಿ 20 ದಿನದಲ್ಲೇ ಅಂದರೆ 9/10/2012 ರಲ್ಲಿ ಸೌಜನ್ಯ ಅತ್ಯಾಚಾರ ಮತ್ತು ಕೊಲೆ ನಡೆದಿತ್ತು. ಇಲ್ಲೂ ಕೂಡಾ ಆರೋಪಿ ಸಿಕ್ಕಿಲ್ಲ, ಅಲ್ಲದೇ ಈ ಮಧ್ಯೆ ಧರ್ಮಸ್ಥಳ ಮತ್ತು ಉಜಿರೆಯಲ್ಲಿ 2002 ರಿಂದ 2012 ರವರೆಗೆ 452 ಆಸಹಜ ಸಾವು ಪ್ರಕರಣ ನಡೆದಿತ್ತು. ಇದರಲ್ಲಿ ಧರ್ಮಸ್ಥಳ ಗ್ರಾಮ ಪಂಚಾಯತ್‌ನವರು ಹೇಳಿರುವ ಶವಗಳಿಗೂ ಪೋಲಿಸ್ ಇಲಾಖೆ ನೀಡಿರುವ ಯು.ಡಿ.ಆರ್.ಗೂ ವ್ಯತ್ಯಾಸ ಕಂಡು ಬರುತ್ತದೆ. ಅಲ್ಲದೇ 1970 ರಿಂದ 2025 ರ ವರೆಗೆ ಹಲವಾರು ಕೊಲೆ ಮತ್ತು ಅತ್ಯಾಚಾರದಂತಹ ಪ್ರಕರಣಗಳು ನಡೆದಿದೆ. ಇಷ್ಟೆಲ್ಲಾ ಪ್ರಕರಣಗಳು ಧರ್ಮಸ್ಥಳದಲ್ಲಿ ನಡೆಯುತ್ತಿದ್ದರೂ ಕೂಡಾ ಯಾವ ಪ್ರಕರಣದಲ್ಲೂ ಆರೋಪಿ ಸಿಗುತ್ತಿಲ್ಲ ಎಂದು ಪತ್ರಿಕಾಗೋಷ್ಠಿಯಲ್ಲಿ ಕೆ.ದಿನೇಶ್ ಗಾಣಿಗರವರು ತಿಳಿಸಿದ್ದಾರೆ.

ಇದರಿಂದಾಗಿ ಶ್ರೀ ಕ್ಷೇತ್ರದ ಹೆಸರು ಹಾಳಾಗುತ್ತಿದೆ, ಜನರಲ್ಲಿ ಕ್ಷೇತ್ರದ ಬಗ್ಗೆ ಅಪನಂಬಿಕೆ ಬರುತ್ತಿವೆ. ಇದಕ್ಕೆಲ್ಲ ಕಾರಣ ಪೋಲಿಸ್ ಇಲಾಖೆ ಆರೋಪಿಗಳನ್ನು ಹಿಡಿಯದೆ ಇರೋದು ಹಾಗಾಗಿ ಈ ಬಗ್ಗೆ ಹಿಂದಿನ ಎಲ್ಲಾ ಪ್ರಕರಣಗಳನ್ನು ತನಿಖೆ ಮಾಡಿ ಆರೋಪಿಗಳನ್ನು ಹಿಡಿಯಬೇಕು ಎಂದು ರಾಜ್ಯದ ಸರಕಾರದ ಪ್ರಧಾನ ಕಾರ್ಯದರ್ಶಿಯವರಿಗೆ ದೂರು ನೀಡಲಾಗಿದೆ. ಈ ಮಧ್ಯೆ ಕೆಲವು ರಾಜಕೀಯ ನಾಯಕರು ಮತ್ತು ಸಂಘಟನೆಯ ನಾಯಕರು ಶ್ರೀಕ್ಷೇತ್ರದ ಹೆಸರು ಹಾಳಾಗುತ್ತಿದೆ, ಹಿಂದೂ ಧರ್ಮ ಹಾಳಾಗುತ್ತಿದೆ ಪತ್ರಿಕಾಗೋಷ್ಠಿ ಮಾಡುತ್ತಿದ್ದಾರೆ. ಅಲ್ಲದೇ ಕೆಲವು ಶಾಸಕರು ವಿಧಾನಸಭೆಯಲ್ಲೂ ಕೂಡಾ ಈ ವಿಷಯ ಚರ್ಚೆ ಮಾಡುತ್ತಿದ್ದಾರೆ. ಈ ಹಿಂದೆ ನಡೆದಂತಹ ವೇದವಲ್ಲಿ, ಪದ್ಮಲತಾ, ನಾರಾಯಣ ಮತ್ತು ಯಮುನಾ, ಸೌಜನ್ಯ ಕೊಲೆ ನಡೆದಾಗ ಮಾತನಾಡದ ಮತ್ತು ಆಕ್ವಿಟಲ್ ಕಮಿಟಿ ಮಾಡುವುದರ ಬಗ್ಗೆ ಮಾತನಾಡದ ಈ ಶಾಸಕರು ಈಗ ಯಾಕೆ ಹೋರಾಟ ನಡೆಸುತ್ತಿದ್ದಾರೆ. ಯಾರನ್ನು ಉಳಿಸುವ ಸಲುವಾಗಿ ಈಗ ಹೋರಾಟ ನಡೆಸುತ್ತಿದ್ದಾರೆ ಈ ಬಗ್ಗೆ ಜನಸಾಮಾನ್ಯರಿಗೆ ತಿಳಿದಿದೆ ಎಂದರು.

ಹಾಗಾಗಿ ಈ ನಾಲ್ಕು ಪ್ರಕರಣವನ್ನು ಎಸ್.ಐ.ಟಿಗೆ ವಹಿಸಿ ತನಿಖೆ ನಡೆಸಿ, ಆರೋಪಿಗಳನ್ನು ಬಂಧಿಸಬೇಕು ಮತ್ತು ಈಗ ನಡೆಯುತ್ತಿರುವ ಎಸ್.ಐ.ಟಿ ತನಿಖೆಗೆ ಬೆಂಬಲ ವ್ಯಕ್ತಪಡಿಸಿ, ರಾಜ್ಯದ ಎಲ್ಲಾ ಭಾಗದ ಜನರೊಂದಿಗೆ ಸೇರಿ ದಿನಾಂಕ 24-08-2025 ಭಾನುವಾರದಂದು ‘ಉಜಿರೆ ಚಲೋ’ ಎಂಬ ಕಾರ್ಯಕ್ರಮವನ್ನು ಹಮ್ಮಿಕೊಂಡಿರುತ್ತೇವೆ ಎಂದು ತಿಳಿಸಿದ್ದಾರೆ.

ಪತ್ರಿಕಾಗೋಷ್ಠಿಯಲ್ಲಿ ಆದಿತ್ಯ ,ಯೋಗೇಂದ್ರ ಪುತ್ರನ್,ಕಿರಣ್ ರವರು ಉಪಸ್ಥಿತರಿದ್ದರು.

RELATED ARTICLES

LEAVE A REPLY

Please enter your comment!
Please enter your name here

Most Popular