Tuesday, November 24, 2026
Homeಜಿಲ್ಲೆಮಂಗಳೂರು : ಧರ್ಮಸ್ಥಳ ಸೌಜನ್ಯ ಪ್ರಕರಣ ಮರುತನಿಖೆ: ಎಸ್‌ಐಟಿ ಕಚೇರಿಗೆ ದಾಖಲೆಗಳ ಬ್ಯಾಗ್ ಹೊತ್ತು ಬಂದ...

ಮಂಗಳೂರು : ಧರ್ಮಸ್ಥಳ ಸೌಜನ್ಯ ಪ್ರಕರಣ ಮರುತನಿಖೆ: ಎಸ್‌ಐಟಿ ಕಚೇರಿಗೆ ದಾಖಲೆಗಳ ಬ್ಯಾಗ್ ಹೊತ್ತು ಬಂದ ಗಿರೀಶ್ ಮಟ್ಟಣ್ಣವರ್.!

ಮಂಗಳೂರು : ಧರ್ಮಸ್ಥಳದ ಸೌಜನ್ಯ ಪ್ರಕರಣದ ಮರುತನಿಖೆ ವಿಚಾರ ಮತ್ತೆ ಮಹತ್ವ ಪಡೆದುಕೊಂಡಿದೆ. ಪ್ರಕರಣಕ್ಕೆ ಸಂಬಂಧಿಸಿದಂತೆ ದಾಖಲೆ ಹಾಗೂ ಸಾಕ್ಷ್ಯಗಳನ್ನು ಸಲ್ಲಿಸುವಂತೆ ವಿಶೇಷ ತನಿಖಾ ತಂಡ (SIT) ಸೂಚನೆ ನೀಡಿರುವ ಹಿನ್ನೆಲೆಯಲ್ಲಿ, ಸೌಜನ್ಯ ಪರ ಹೋರಾಟಗಾರ ಗಿರೀಶ್ ಮಟ್ಟಣ್ಣವರ್ ಅವರು ಮಂಗಳೂರಿನ ಎಸ್‌ಐಟಿ ಕಚೇರಿಗೆ ಆಗಮಿಸಿದ್ದಾರೆ.

ಬ್ಯಾಗ್ ತುಂಬಾ ದಾಖಲೆಗಳು, ಹಲವು ಕಡತಗಳು ಹಾಗೂ ಪತ್ರಿಕಾ ವರದಿಗಳನ್ನು ಹೊತ್ತು ತಂದಿರುವ ಮಟ್ಟಣ್ಣವರ್, ತನಿಖಾಧಿಕಾರಿಗಳಿಗೆ ಸಂಬಂಧಿತ ಮಾಹಿತಿಗಳನ್ನು ಸಲ್ಲಿಸಲು ಆಗಮಿಸಿದ್ದಾರೆ.

ಸೌಜನ್ಯ ಪ್ರಕರಣಕ್ಕೆ ಸಂಬಂಧಿಸಿದಂತೆ ತಮ್ಮ ಬಳಿ ಇರುವ ದಾಖಲೆಗಳು ಮತ್ತು ಸಾಕ್ಷ್ಯಗಳನ್ನು ಎಸ್‌ಐಟಿಗೆ ಒದಗಿಸುವಂತೆ ಸೂಚನೆ ನೀಡಲಾಗಿತ್ತು. ಈ ಹಿನ್ನೆಲೆಯಲ್ಲಿ ಹಲವು ದಾಖಲೆಗಳನ್ನು ಸಂಗ್ರಹಿಸಿ ಅವರು ಕಚೇರಿಗೆ ಬಂದಿದ್ದಾರೆ.

ಇದೇ ವೇಳೆ, ಸೌಜನ್ಯ ಪ್ರಕರಣದ ಹೋರಾಟಗಾರ ಮಹೇಶ್ ಶೆಟ್ಟಿ ತಿಮರೋಡಿ ಅವರಿಗೂ ಎಸ್‌ಐಟಿ ವಿಚಾರಣೆಗೆ ಹಾಜರಾಗುವಂತೆ ಬುಲಾವ್ ನೀಡಿದೆ ಎಂದು ತಿಳಿದುಬಂದಿದೆ.

ಪ್ರಕರಣದ ಮರುತನಿಖೆಯ ಹಿನ್ನೆಲೆಯಲ್ಲಿ ಹೋರಾಟಗಾರರಿಂದ ದಾಖಲೆ ಹಾಗೂ ಮಾಹಿತಿಗಳ ಸಂಗ್ರಹಕ್ಕೆ ಎಸ್‌ಐಟಿ ಮುಂದಾಗಿರುವುದು ಕುತೂಹಲ ಮೂಡಿಸಿದೆ.

RELATED ARTICLES

LEAVE A REPLY

Please enter your comment!
Please enter your name here

Most Popular