Thursday, October 1, 2026
Homeಜಿಲ್ಲೆಮಂಗಳೂರು : ಧರ್ಮಸ್ಥಳ ಸೌಜನ್ಯ ಪ್ರಕರಣ — SIT ಅಧಿಕಾರಿಗಳ ಮಹತ್ವದ ಸಭೆ.

ಮಂಗಳೂರು : ಧರ್ಮಸ್ಥಳ ಸೌಜನ್ಯ ಪ್ರಕರಣ — SIT ಅಧಿಕಾರಿಗಳ ಮಹತ್ವದ ಸಭೆ.

ಮಂಗಳೂರು : ಧರ್ಮಸ್ಥಳದ ಸೌಜನ್ಯ ಅತ್ಯಾಚಾರ ಮತ್ತು ಕೊಲೆ ಪ್ರಕರಣದ ಮರುತನಿಖೆ ಹಿನ್ನೆಲೆಯಲ್ಲಿ ಮಂಗಳೂರಿನಲ್ಲಿ SIT ಅಧಿಕಾರಿಗಳ ಮಹತ್ವದ ಸಭೆ ನಡೆಯುತ್ತಿದೆ.

SIT ಮುಖ್ಯಸ್ಥ ಎನ್. ಶಶಿಕುಮಾರ್ ಅವರ ನೇತೃತ್ವದಲ್ಲಿ ಅಧಿಕಾರಿಗಳು ಸಭೆ ಸೇರಿದ್ದು, ಮರುತನಿಖೆಯ ಮುಂದಿನ ಹಂತಗಳು ಹಾಗೂ ಪ್ರಕರಣಕ್ಕೆ ಸಂಬಂಧಿಸಿದ ಅಂಶಗಳ ಕುರಿತು ಚರ್ಚೆ ನಡೆಯಲಿದೆ. SIT ಅಧಿಕಾರಿಗಳಾದ ಮಂಗಳೂರು ಪೊಲೀಸ್ ಕಮಿಷನರ್ ಸುಧೀರ್ ಕುಮಾರ್ ರೆಡ್ಡಿ, ನಿಶಾ ಜೇಮ್ಸ್ ಹಾಗೂ ಲೋಕೇಶ್ ಜಗಲಸಾರ್ ಸಭೆಯಲ್ಲಿ ಭಾಗವಹಿಸಲು ಬಂದಿಳಿದಿದ್ದಾರೆ.

ಹಳೆಯ ಜಿಲ್ಲಾಧಿಕಾರಿ ಕಚೇರಿ ಆವರಣದಲ್ಲಿ ಅಧಿಕಾರಿಗಳ ಸಭೆ ನಡೆಯುತ್ತಿದ್ದು, ಸೌಜನ್ಯ ಪ್ರಕರಣದ ಮರುತನಿಖೆಗೆ ಸಂಬಂಧಿಸಿದಂತೆ ಮಹತ್ವದ ಚರ್ಚೆ ನಡೆಯುತ್ತಿದೆ.

RELATED ARTICLES

LEAVE A REPLY

Please enter your comment!
Please enter your name here

Most Popular