ಮಂಗಳೂರು : ಬಿಲ್ಲವ ಬ್ರಿಗೇಡ್ ಕಳೆದ ಕೆಲವು ವರ್ಷಗಳಿಂದ ಸಾಮಾಜಿಕ, ಶೈಕ್ಷಣಿಕ ಹಾಗೂ ಧಾರ್ಮಿಕ ಕ್ಷೇತ್ರಗಳಲ್ಲಿ ಸತತವಾಗಿ ಸೇವಾ ಚಟುವಟಿಕೆಗಳನ್ನು ನಡೆಸುತ್ತಿದ್ದು ನಂದದೀಪ ವಸತಿ ಯೋಜನೆ ಮೂಲಕ, ಬಿಲ್ಲವ ಸಮಾಜದ ಸದಸ್ಯರ ಸಹಕಾರದಿಂದ ಕಳೆದ ಮೂರು ವರ್ಷಗಳಲ್ಲಿ ಆರ್ಥಿಕವಾಗಿ ಹಿಂದುಳಿದ 14 ಕುಟುಂಬಗಳಿಗೆ ನೂತನ ಮನೆಗಳ ನಿರ್ಮಾಣವನ್ನು ಯಶಸ್ವಿಯಾಗಿ ಪೂರ್ಣಗೊಳಿಸಲಾಗಿದೆ.


ಈ ವರ್ಷ ತಂಡದ ಸೇವಾ ಚಟುವಟಿಕೆಗಳನ್ನು ಗುರುತಿಸಿ ದಕ್ಷಿಣ ಕನ್ನಡ ಜಿಲ್ಲಾ ಆಡಳಿತವು ಸಾಮಾಜಿಕ ಸೇವಾ ಕ್ಷೇತ್ರದಲ್ಲಿ ಜಿಲ್ಲಾ ರಾಜ್ಯೋತ್ಸವ ಪ್ರಶಸ್ತಿ ನೀಡಿ ಗೌರವಿಸಿದೆ. ಸಂಸ್ಥಾಪಕರಾದ ಶ್ರೀ ಸದಾನಂದ ಪೂಜಾರಿ ಅವರು ಪ್ರಶಸ್ತಿಯನ್ನು ಸ್ವೀಕರಿಸಿದರು.
ಈ ಪ್ರಶಸ್ತಿ ನೀಡಿ ಗುರುತಿಸಿದಕ್ಕೆ ದಕ್ಷಿಣ ಕನ್ನಡ ಜಿಲ್ಲೆಯ ಸಂಸದರಾದ ಕ್ಯಾಪ್ಟನ್ ಬ್ರಿಜೇಶ್ ಚೌಟಾ, ದಕ್ಷಿಣ ಕನ್ನಡ ಜಿಲ್ಲೆಯ ಜಿಲ್ಲಾಧಿಕಾರಿಗಳಾದ ದರ್ಶನ್ .ಹೆಚ್ .ವಿ, ದಕ್ಷಿಣ ಕನ್ನಡ ಜಿಲ್ಲಾ ಉಸ್ತುವಾರಿ ಸಚಿವರಾದ ದಿನೇಶ್ ಗುಂಡೂರಾವ್, ಕರ್ನಾಟಕ ವಿಧಾನಸಭಾ ಸಭಾಪತಿಗಳಾದ ಯು.ಟಿ.ಖಾದರ್, ಶಾಸಕರಾದ ವೇದವ್ಯಾಸ್ ಕಾಮತ್ ಹಾಗೂ ಜಿಲ್ಲೆಯ ಎಲ್ಲಾ ಮಾನ್ಯ ಜನಪ್ರತಿನಿಧಿಗಳಿಗೆ ಹೃತ್ಪೂರ್ವಕ ಧನ್ಯವಾದಗಳನ್ನು ಸಲ್ಲಿಸಿದ್ದಾರೆ.


