Saturday, March 14, 2026
Flats for sale
Homeಜಿಲ್ಲೆಮಂಗಳೂರು ; ನನ ಮಂಡೆ ಬೆಚ್ಚ ಮಲ್ಪೆರೆ ಇಜ್ಜಿ : ಗೂಗಲ್ ಟ್ರಾನ್ಸೇಲಟರ್ ನಲ್ಲಿ ತುಳು...

ಮಂಗಳೂರು ; ನನ ಮಂಡೆ ಬೆಚ್ಚ ಮಲ್ಪೆರೆ ಇಜ್ಜಿ : ಗೂಗಲ್ ಟ್ರಾನ್ಸೇಲಟರ್ ನಲ್ಲಿ ತುಳು ಭಾಷೆ (ಉಂಡು) ಸೇರ್ಪಡೆ..!

ಮಂಗಳೂರು ; ಗೂಗಲ್ ಅನುವಾದದಲ್ಲಿ ತುಳು ಭಾಷೆಯನ್ನು ಸೇರಿಸಲಾಗಿದೆ ಎಂದು ತುಳು ಸಾಹಿತ್ಯ ಅಕಾಡೆಮಿ ಅಧ್ಯಕ್ಷ ತಾರಾನಾಥ ಗಟ್ಟಿ ಕಾಪಿಕಾಡ್ ಪ್ರಕಟಣೆಯಲ್ಲಿ ತಿಳಿಸಿದ್ದಾರೆ.

ಗೂಗಲ್ ಟ್ರಾನ್ಸೇಲಟರ್ ನಲ್ಲಿ ತುಳು ಭಾಷೆ ಸೇರ್ಪಡೆಗೊಂಡಿರುವುದು ತುಳು ಭಾಷೆಗೆ ಜಾಗತಿಕವಾಗಿ ಸಂದ ಗೌರವವಾಗಿದೆ, ತುಳುವರು ಸಂಭ್ರಮಪಡುವಂತವ ವಿಚಾರವಾಗಿದೆ . ಗೂಗಲ್ ಟ್ರಾನ್ಸೇಲಟರ್ ನಲ್ಲಿ ಕೆಲವು ಸಂದರ್ಭದಲ್ಲಿ ಶಬ್ದಗಳು ತಪ್ಪಾಗಿ ಉಲ್ಲೇಖವಾಗುವುದು ಸಾಮಾನ್ಯ ವಿಚಾರ. ಇಂತಹ ಸಂದರ್ಭಗಳಲ್ಲಿ ಅಲ್ಲೇ ಇರುವ ಫೀಡ್ ಬ್ಯಾಕ್ ಕಾಲಮ್ ನಲ್ಲಿ ಸರಿಯಾದ ಶಬ್ದವನ್ನು ಉಲ್ಲೇಖಿಸಿ ಪ್ರತಿಕ್ರಿಯಿಸಿದರೆ ಗೂಗಲ್ ಅದನ್ನು ಮುಂದಕ್ಕೆ ಸರಿ ಮಾಡಿಕೊಳ್ಳುವುದು. ಈ ಅಂಶವನ್ನು ತುಳುವರು ಸಮರ್ಪಕವಾಗಿ ಬಳಸಿಕೊಂಡರೆ ತುಳುವರಿಗೆ ಹಾಗೂ ತುಳುವೇತರರಿಗೂ ಪ್ರಯೋಜನವಾಗಲಿದೆ ಹಾಗೂ ಬಳಕೆದಾರರು ಪ್ರತಿಕ್ರಿಯೆಯ ಅಂಕಣದಲ್ಲಿ ಸರಿಯಾದ ಪದವನ್ನು ಒದಗಿಸಬಹುದು ಮತ್ತು Google ಅಗತ್ಯ ತಿದ್ದುಪಡಿಗಳನ್ನು ಮಾಡುತ್ತದೆ. ತುಳು ಭಾಷಿಗರು ಈ ವೈಶಿಷ್ಟ್ಯವನ್ನು ಸೂಕ್ತವಾಗಿ ಬಳಸಿಕೊಂಡರೆ ತುಳು ಭಾಷಿಕರಿಗೂ ಮತ್ತು ಅನ್ಯಭಾಷಿಕರಿಗೂ ಅನುಕೂಲವಾಗುತ್ತದೆ ಎಂದು ತಾರಾನಾಥ ಗಟ್ಟಿ ಕಾಪಿಕಾಡ್ ತಿಳಿಸಿದ್ದಾರೆ.

RELATED ARTICLES

LEAVE A REPLY

Please enter your comment!
Please enter your name here

Most Popular