Monday, March 16, 2026
Flats for sale
Homeಜಿಲ್ಲೆಮಂಗಳೂರು : ನರ್ಸಿಂಗ್ ಕಾಲೇಜಿನ ವಿದ್ಯಾರ್ಥಿ ಆತ್ಮಹತ್ಯೆಗೆ ಶರಣು.

ಮಂಗಳೂರು : ನರ್ಸಿಂಗ್ ಕಾಲೇಜಿನ ವಿದ್ಯಾರ್ಥಿ ಆತ್ಮಹತ್ಯೆಗೆ ಶರಣು.

ಮಂಗಳೂರು : ನಗರದ ಖಾಸಗಿ ಕಾಲೇಜಿನ ಹಾಸ್ಟೆಲ್‌ನಲ್ಲಿ ನರ್ಸಿಂಗ್ ವಿದ್ಯಾರ್ಥಿಯೊಬ್ಬರು ನೇಣು ಬಿಗಿದುಕೊಂಡು ಆತ್ಮಹತ್ಯೆ ಮಾಡಿಕೊಂಡ ಘಟನೆ ನಡೆದಿದೆ.

ಕೇರಳದ ಅಲೆಪ್ಪಿ ಮೂಲದ ಸಚಿನ್ ಸಾಜು (19) ಮೃತ ವ್ಯಕ್ತಿ. ಅವರು ನವೆಂಬರ್ 30 ರಂದು ಕಾಲೇಜಿಗೆ ಪ್ರವೇಶ ಪಡೆದಿದ್ದರು. ಆದರೆ ಕೆಲವು ದಿನಗಳಿಂದ ಅವರು ಕೆಲವು ಆರೋಗ್ಯ ಸಮಸ್ಯೆಗಳು ಮತ್ತು ಖಿನ್ನತೆಯ ಕಾರಣದಿಂದ ತರಗತಿಗಳಿಗೆ ಹಾಜರಾಗುತ್ತಿರಲಿಲ್ಲ.

ತನ್ನ ರೂಮ್‌ಮೇಟ್ ಇಲ್ಲದಿದ್ದಾಗ ವಿದ್ಯಾರ್ಥಿ ಸಚಿನ್ ಸಾಜು ನೇಣು ಬಿಗಿದುಕೊಂಡು ಆತ್ಮಹತ್ಯೆ ಮಾಡಿಕೊಂಡಿದ್ದಾನೆ .ಮಂಗಳೂರು ಗ್ರಾಮಾಂತರ ಪೊಲೀಸರು ಪ್ರಕರಣ ದಾಖಲಿಸಿಕೊಂಡಿದ್ದು,ತನಿಖೆ ನಡೆಯುತ್ತಿದೆ.

RELATED ARTICLES

LEAVE A REPLY

Please enter your comment!
Please enter your name here

Most Popular