Thursday, March 26, 2026
Flats for sale
Homeಜಿಲ್ಲೆಮಂಗಳೂರು : ನೀರುಮಾರ್ಗದಲ್ಲಿ ಸ್ಥಳೀಯರ ನಿದ್ದೆಗೆಡಿಸಿದ್ದ ಚಿರತೆ ಕೊನೆಗೂ ಬೋನಿಗೆ.

ಮಂಗಳೂರು : ನೀರುಮಾರ್ಗದಲ್ಲಿ ಸ್ಥಳೀಯರ ನಿದ್ದೆಗೆಡಿಸಿದ್ದ ಚಿರತೆ ಕೊನೆಗೂ ಬೋನಿಗೆ.

ಮಂಗಳೂರು : ನೀರುಮಾರ್ಗ ಹಾಗೂ ಕುಡುಪು ಪರಿಸರದಲ್ಲಿ ಕಳೆದ ಕೆಲವು ದಿನಗಳಿಂದ ರಾಜಗಾಂಭೀರ್ಯದಿಂದ ಓಡಾಡಿ ಸ್ಥಳೀಯರ ನಿದ್ದೆಗೆಡಿಸಿದ್ದ ಚಿರತೆ ಕೊನೆಗೂ ಅರಣ್ಯ ಇಲಾಖೆಯ ಬಲೆಗೆ ಬಿದ್ದಿದೆ.

ಇಂದು ಮುಂಜಾನೆ ನೀರುಮಾರ್ಗದ ಕೆಲಾರೈ ಸಮೀಪ ಅರಣ್ಯ ಇಲಾಖೆ ಅಳವಡಿಸಿದ್ದ ಬೋನಿಗೆ ಚಿರತೆ ಸೆರೆಯಾಗಿದೆ. ಚಿರತೆಯ ಸಂಚಾರದಿಂದ ಆತಂಕಗೊಂಡಿದ್ದ ಸ್ಥಳೀಯರು ಕಳೆದ ಕೆಲವು ದಿನಗಳಿಂದ ಭಯಭೀತರಾಗಿ ಜೀವನ ಸಾಗಿಸುತ್ತಿದ್ದರು.

ಅರಣ್ಯ ಇಲಾಖೆ ಅಧಿಕಾರಿಗಳು ಹಾಗೂ ಸಿಬ್ಬಂದಿ, ಜೊತೆಗೆ ಊರಿನ ಜನರು ಸಮನ್ವಯದಿಂದ ಕಾರ್ಯಾಚರಣೆ ನಡೆಸಿದ ಪರಿಣಾಮ ಈ ಯಶಸ್ಸು ಸಾಧ್ಯವಾಗಿದೆ. ಚಿರತೆಯನ್ನು ಸುರಕ್ಷಿತವಾಗಿ ಹಿಡಿದು ಅರಣ್ಯ ಪ್ರದೇಶಕ್ಕೆ ಸ್ಥಳಾಂತರಿಸುವ ಕಾರ್ಯ ಮುಂದುವರಿದಿದೆ.

RELATED ARTICLES

LEAVE A REPLY

Please enter your comment!
Please enter your name here

Most Popular