Saturday, March 14, 2026
Flats for sale
Homeಜಿಲ್ಲೆಮಂಗಳೂರು : ನೀರು ಸೇದುತ್ತಿದ್ದಾಗ ಆಯತಪ್ಪಿ ಬಾವಿಗೆ ಬಿದ್ದ ಮಹಿಳೆ : ಅಗ್ನಿಶಾಮಕ ಸಿಬ್ಬಂದಿಗಳಿಂದ ರಕ್ಷಣೆ.

ಮಂಗಳೂರು : ನೀರು ಸೇದುತ್ತಿದ್ದಾಗ ಆಯತಪ್ಪಿ ಬಾವಿಗೆ ಬಿದ್ದ ಮಹಿಳೆ : ಅಗ್ನಿಶಾಮಕ ಸಿಬ್ಬಂದಿಗಳಿಂದ ರಕ್ಷಣೆ.

ಮಂಗಳೂರು ; ಮಂಗಳೂರಿನಲ್ಲಿ ಗುರುವಾರ ಸಂಜೆ ತನ್ನ ನಿವಾಸದ ಬಾವಿಗೆ ಬಿದ್ದ 58 ವರ್ಷದ ಮಹಿಳೆಯನ್ನು ಕದ್ರಿ ಅಗ್ನಿಶಾಮಕ ಠಾಣೆಯ ಸಿಬ್ಬಂದಿ ರಕ್ಷಿಸಿದ್ದಾರೆ.

ಕುಡಿಯಲು ನೀರು ಸೇದುತ್ತಿದ್ದಾಗ ಈ ಘಟನೆ ನಡೆದಿದೆ. ಬಾವಿಯಲ್ಲಿ ಎಂಟು ಅಡಿಗೂ ಹೆಚ್ಚು ನೀರು ಇರುವುದರಿಂದ ಮಹಿಳೆ ನೀರಿನಲ್ಲಿ ಮುಳುಗುವುದನ್ನು ತಪ್ಪಿಸಲು ಪಂಪ್ ಸೆಟ್ ನ ಹಗ್ಗವನ್ನು ಬಿಗಿಯಾಗಿ ಹಿಡಿದುಕೊಂಡಿದ್ದಾರೆ.

ಕದ್ರಿ ಅಗ್ನಿಶಾಮಕ ಠಾಣೆಯ ಸಹಾಯಕ ಅಧಿಕಾರಿ ರಾಜೀವ್, ಮುಖ್ಯ ಅಗ್ನಿಶಾಮಕ ಅಧಿಕಾರಿ ಚಂದ್ರಹಾಸ ಸಾಲಿಯಾನ್ ಮತ್ತು ಅವರ ತಂಡ ರಕ್ಷಣಾ ಕಾರ್ಯಾಚರಣೆ ನಡೆಸಿದರು.

RELATED ARTICLES

LEAVE A REPLY

Please enter your comment!
Please enter your name here

Most Popular