ಮಂಗಳೂರು : ರಾಷ್ಟ್ರೀಯ ಹೆದ್ದಾರಿ 66ರ ನೇತ್ರಾವತಿ ಸೇತುವೆಯ ಮೇಲೆ ಬುಧವಾರ ಬೆಳಗ್ಗೆ ಸಂಭವಿಸಿದ ರಸ್ತೆ ಅಪಘಾತದಲ್ಲಿ 21 ವರ್ಷದ ಬೈಕ್ ಸವಾರರೊಬ್ಬರು ಮೃತಪಟ್ಟಿದ್ದಾರೆ.
ಕೋಟೆಕಾರ್ನ ಹನೀಫ್ ಎಂಬವರ ಪುತ್ರ ಅಜ್ವೀನ್ ಮೃತಪಟ್ಟವರು. ಹಜ್ವೀನ್ ಅವರು ಮೀನುಗಾರಿಕೆ ಕೆಲಸಕ್ಕಾಗಿ ಮಂಗಳೂರು ಬಂದರಿಗೆ ಮುಂಜಾನೆ 3.30 ರ ಸುಮಾರಿಗೆ ತೆರಳುತ್ತಿದ್ದಾಗ ಅವಘಡ ಸಂಭವಿಸಿದೆ. ಲಾರಿ ಚಾಲಕ ಸಡನ್ ಬ್ರೇಕ್ ಹಾಕಿದಾಗ ಅಜ್ವೀನ್ ಬೈಕ್ ಹಿಂಬದಿಯಿಂದ ಮೀನಿನ ಲಾರಿಗೆ ಡಿಕ್ಕಿ ಹೊಡೆದಿದೆ.
ಕೂಡಲೇ ಅಜ್ವೀನ್ ಅವರನ್ನು ಆಸ್ಪತ್ರೆಗೆ ಸಾಗಿಸಲಾಯಿತಾದರೂ, ವೈದ್ಯರು ಮೃತಪಟ್ಟಿರುವುದಾಗಿ ಘೋಷಿಸಿದರು.
ಸಂಚಾರ ದಕ್ಷಿಣ ಪೊಲೀಸರು ಪ್ರಕರಣ ದಾಖಲಿಸಿಕೊಂಡಿದ್ದಾರೆ.


