Saturday, July 4, 2026
Homeಜಿಲ್ಲೆಮಂಗಳೂರು : ಪರವಾನಿಗೆಗೆ ಅರ್ಜಿ ಸಲ್ಲಿಸದ 1389 ಇ-ಆಟೋ ವಾಹನ ಮಾಲಕರಿಗೆ ಆರ್‌ಟಿಒ ಎಚ್ಚರಿಕೆ,ತಕ್ಷಣ ಕ್ರಮ...

ಮಂಗಳೂರು : ಪರವಾನಿಗೆಗೆ ಅರ್ಜಿ ಸಲ್ಲಿಸದ 1389 ಇ-ಆಟೋ ವಾಹನ ಮಾಲಕರಿಗೆ ಆರ್‌ಟಿಒ ಎಚ್ಚರಿಕೆ,ತಕ್ಷಣ ಕ್ರಮ ಕೈಗೊಳ್ಳಲು ಸೂಚನೆ..!

ಮಂಗಳೂರು : ಮಂಗಳೂರು ಉಪಸಾರಿಗೆ ಆಯುಕ್ತರು ಹಾಗೂ ಹಿರಿಯ ಪ್ರಾದೇಶಿಕ ಸಾರಿಗೆ ಅಧಿಕಾರಿಗಳ ಕಚೇರಿ (ಕೆಎ-19) ವ್ಯಾಪ್ತಿಯಲ್ಲಿ ನೋಂದಣಿಗೊಂಡಿರುವ ಇಲೆಕ್ಟ್ರಿಕ್ ಆಟೋ ರಿಕ್ಷಾಗಳಿಗೆ ಸಂಬಂಧಿಸಿದಂತೆ ಮಹತ್ವದ ಪ್ರಕಟಣೆ ಹೊರಡಿಸಲಾಗಿದೆ.

ಕಚೇರಿ ವ್ಯಾಪ್ತಿಯಲ್ಲಿ ಒಟ್ಟು 3551 ಇಲೆಕ್ಟ್ರಿಕ್ ಆಟೋ ರಿಕ್ಷಾಗಳು ನೋಂದಣಿಯಾಗಿದ್ದು, ಇದರಲ್ಲಿ 2162 ಇ-ಆಟೋ ರಿಕ್ಷಾಗಳ ಪರವಾನಿಗೆಗಾಗಿ ಮಾತ್ರ ಅರ್ಜಿಗಳು ಸಲ್ಲಿಕೆಯಾಗಿವೆ. ಇನ್ನೂ 1389 ವಾಹನ ಮಾಲಕರು ಪರವಾನಿಗೆ ಪಡೆಯಲು ಅಗತ್ಯ ಅರ್ಜಿಗಳನ್ನು ಸಲ್ಲಿಸಿಲ್ಲ ಎಂದು ಅಧಿಕಾರಿಗಳು ತಿಳಿಸಿದ್ದಾರೆ.ಆದ್ದರಿಂದ ಬಾಕಿ ಉಳಿದಿರುವ ಎಲ್ಲಾ ಇಲೆಕ್ಟ್ರಿಕ್ ಆಟೋ ರಿಕ್ಷಾ ಮಾಲಕರು ತಕ್ಷಣ ಪರವಾನಿಗೆಗಾಗಿ ಅರ್ಜಿ ಸಲ್ಲಿಸುವಂತೆ ಸೂಚಿಸಲಾಗಿದೆ.

ಇನ್ನಷ್ಟು ವಿಳಂಬ ಮಾಡಿದಲ್ಲಿ ಮೋಟಾರು ವಾಹನ ನಿಯಮಾವಳಿಗಳ ಪ್ರಕಾರ ಕಾನೂನು ಕ್ರಮ ಕೈಗೊಳ್ಳಲಾಗುವುದು ಎಂದು ಮಂಗಳೂರು ಉಪಸಾರಿಗೆ ಆಯುಕ್ತರು ಹಾಗೂ ಹಿರಿಯ ಪ್ರಾದೇಶಿಕ ಸಾರಿಗೆ ಅಧಿಕಾರಿಗಳ ಕಚೇರಿ ಎಚ್ಚರಿಕೆ ನೀಡಿದೆ.

RELATED ARTICLES

LEAVE A REPLY

Please enter your comment!
Please enter your name here

Most Popular