ಮಂಗಳೂರು : ಪ್ರಜಾಪ್ರಭುತ್ವ ವ್ಯವಸ್ಥೆಯಲ್ಲಿ ಜನರಿಂದ ಆಯ್ಕೆಯಾದ ಪ್ರಧಾನಮಂತ್ರಿ Narendra Modi ಅವರ ವಿರುದ್ಧ ಕಾಂಗ್ರೆಸ್ ರಾಷ್ಟ್ರೀಯ ಅಧ್ಯಕ್ಷ Mallikarjun Kharge ಅವಹೇಳನಕಾರಿ ಹೇಳಿಕೆ ನೀಡಿರುವುದು ದೇಶದ ಸಮಸ್ತ ಪ್ರಜೆಗಳಿಗೆ ಮಾಡಿದ ಅವಮಾನವಾಗಿದೆ ಎಂದು ದಕ್ಷಿಣ ಕನ್ನಡ ಸಂಸದ Brigesh Chowta ತೀವ್ರ ಆಕ್ಷೇಪ ವ್ಯಕ್ತಪಡಿಸಿದ್ದಾರೆ.
“ಮೋದಿ ಭಯೋತ್ಪಾದಕ” ಎಂಬ ಹೇಳಿಕೆ ಕುರಿತು ಪ್ರತಿಕ್ರಿಯಿಸಿದ ಅವರು, ಪ್ರಜಾಸತ್ತಾತ್ಮಕವಾಗಿ ಆಯ್ಕೆಯಾದ ದೇಶದ ಪ್ರಧಾನಿಯನ್ನು ಇಂತಹ ಕೀಳುಮಟ್ಟದ ಪದಗಳಿಂದ ನಿಂದಿಸುವುದು ಜನಾದೇಶಕ್ಕೆ ಮಾಡಿದ ಅಪಚಾರವಾಗಿದೆ ಎಂದು ಹೇಳಿದರು. ಜವಾಬ್ದಾರಿಯುತ ಸ್ಥಾನದಲ್ಲಿರುವ Mallikarjun Kharge ಅವರ ಈ ಹೇಳಿಕೆ ಕಾಂಗ್ರೆಸ್ ಪಕ್ಷದ ಬೌದ್ಧಿಕ ಅಧಃಪತನ ಮತ್ತು ಸಂಕುಚಿತ ಮನೋಭಾವವನ್ನು ತೋರಿಸುತ್ತದೆ ಎಂದು ಆರೋಪಿಸಿದರು.
ಕಳೆದ ಹಲವು ವರ್ಷಗಳಿಂದ ಕಾಂಗ್ರೆಸ್ ಪಕ್ಷವು ಹೆಣೆದಿದ್ದ ಸುಳ್ಳಿನ ಜಾಲವನ್ನು Narendra Modi ತಮ್ಮ ಆಡಳಿತದ ಮೂಲಕ ಬಯಲಿಗೆಳೆದಿದ್ದಾರೆ. ಇದನ್ನು ಸಹಿಸಿಕೊಳ್ಳಲಾಗದೆ ರಾಜಕೀಯ ನೆಲೆ ಕಳೆದುಕೊಳ್ಳುವ ಭೀತಿಯಲ್ಲಿ ಕಾಂಗ್ರೆಸ್ ವೈಯಕ್ತಿಕ ದಾಳಿಗೆ ಇಳಿದಿದೆ ಎಂದು ಸಂಸದರು ಟೀಕಿಸಿದರು.
ಅಭಿವೃದ್ಧಿ ರಾಜಕಾರಣದ ಎದುರು ಸೋತಿರುವ ಕಾಂಗ್ರೆಸ್, ಇಂತಹ ಹೇಳಿಕೆಗಳ ಮೂಲಕ ಜನರನ್ನು ತಪ್ಪು ದಾರಿಗೆಳೆಯಲು ಪ್ರಯತ್ನಿಸುತ್ತಿದೆ ಎಂದು Brigesh Chowta ಅಭಿಪ್ರಾಯಪಟ್ಟಿದ್ದಾರೆ.


