Friday, February 21, 2025
Flats for sale
Homeಜಿಲ್ಲೆಮಂಗಳೂರು : ಫೆ.16 ರಂದು ಪಿಲಾರ್ ನಲ್ಲಿ ತುಳು ಪರ್ಬ : ಜಾನಪದ ಸಿರಿ ಪರಿಚಯ,...

ಮಂಗಳೂರು : ಫೆ.16 ರಂದು ಪಿಲಾರ್ ನಲ್ಲಿ ತುಳು ಪರ್ಬ : ಜಾನಪದ ಸಿರಿ ಪರಿಚಯ, ಗ್ರಾಮೀಣ ಆಟಕೂಟ..!

ಮಂಗಳೂರು : ಕರ್ನಾಟಕ ತುಳು ಸಾಹಿತ್ಯ ಅಕಾಡೆಮಿ ಹಾಗೂ ಉಳ್ಳಾಲ ತಾಲೂಕಿನ ಪಿಲಾರ್ ಯುವಕ ಮಂಡಲದ ಜಂಟಿ ಆಶ್ರಯದಲ್ಲಿ ಪಿಲಾರ್ ನ ಪಂಜಂದಾಯ ಸೇವಾ ಸನ್ನಿಧಿಯ ಮೈದಾನದಲ್ಲಿ ಫೆ.16 ರಂದು ಬೆಳಿಗ್ಗೆ ‘ತುಳು ಪರ್ಬ’ ಆಯೋಜಿಸಲಾಗಿದೆ.

ಪಿಲಾರ್ ಯುವಕ ಮಂಡಲದ ಸ್ವರ್ಣ ಮಹೋತ್ಸವದ ಪ್ರಯುಕ್ತ ನಡೆಯುವ ಈ
ಕಾರ್ಯಕ್ರಮವನ್ನು ಭಾನುವಾರ ಬೆಳಿಗ್ಗೆ 9.00 ಗಂಟೆಗೆ ನಿವೃತ್ತ ಪ್ರಾಂಶುಪಾಲ ಪ್ರೊ.ರಾಧಾಕೃಷ್ಣ ಕೆ. ಅವರು ಉದ್ಘಾಟಿಸುವರು. ಕರ್ನಾಟಕ ತುಳು ಸಾಹಿತ್ಯ ಅಕಾಡೆಮಿ ಅಧ್ಯಕ್ಷ ತಾರಾನಾಥ್ ಗಟ್ಟಿ ಕಾಪಿಕಾಡ್ ಅವರು ಸಭೆಯ ಅಧ್ಯಕ್ಷತೆ ವಹಿಸುವರು .

ಹಿರಿಯ ಪಾರ್ದನಗಾರ್ತಿ ಕುತ್ತಾರ್ ತಿಮ್ಮಕ್ಕ ಅವರು ಪಾಡ್ದನ ಪರಿಚಯ ಮಾಡಿಕೊಡುವರು. ಡೋಲು ವಾದಕ ರಮೇಶ್ ಮಂಚಕಲ್ ಅವರು ತುಳುನಾಡಿನ ಸಾಂಪ್ರದಾಯಿಕ ಡೋಲಿನ ಬಗ್ಗೆ ಹಾಗೂ ದುಡಿ ವಾದಕ ಶೀನಾ ಧರ್ಮಸ್ಥಳ ಅವರು ಸಾಂಪ್ರದಾಯಿಕ ದುಡಿ ವಾದನದ ಬಗ್ಗೆ ಪ್ರಾತ್ಯಕ್ಷಿಕೆ ಹಾಗೂ ಪರಿಚಯ ಮಾಡಿಕೊಡುವರು. ಇದೇ ವೇಳೆ ಹಿರಿಯರಿಂದ ಜನಪದ ಕತೆಗಳ ದಾಖಲೀಕರಣ ನಡೆಯಲಿದೆ.

ಜಾನಪದ ಸಿರಿ ವಿಚಾರ ವಿನಿಮಯದ ಬಳಿಕ ಸ್ಥಳೀಯರಿಗಾಗಿ ಗ್ರಾಮೀಣ ಆಟೋಟಗಳು ನಡೆಯಲಿದೆ. ಸಭಾ ಕಾರ್ಯಕ್ರಮದಲ್ಲಿ ಅತಿಥಿಗಳಾಗಿ ಸೋಮೇಶ್ವರ ಪುರಸಭಾ ಉಪಾಧ್ಯಕ್ಷ ರವಿಶಂಕರ್ ಸೋಮೇಶ್ವರ, ಪುರಸಭಾ ಸದಸ್ಯ ಪುರುಷೋತ್ತಮ ಶೆಟ್ಟಿ ಪಿಲಾರ್, ಚೆಂಬುಗುಡ್ಡೆ ಜುಮ್ಮಾ ಮಸೀದಿಯ ಅಧ್ಯಕ್ಷ ಇಮ್ತಿಯಾಜ್ ಪಿಲಾರ್, ನಿವೃತ್ತ ಆಹಾರ ನಿರೀಕ್ಷಕ ಚಂದ್ರಶೇಖರ ಗಟ್ಟಿ ಮಜಲ್, ಉದ್ಯಮಿ ಚಂದ್ರಹಾಸ ಅವರು ಭಾಗವಹಿಸುವರು.‌ ಪಿಲಾರ್ ಯುವಕ ಮಂಡಲದ ಅಧ್ಯಕ್ಷ ಯಶವಂತ ಶೆಟ್ಟಿ, ಗೌರವಾಧ್ಯಕ್ಷ ಗಜಾನಂದ ಗಟ್ಟಿ, ಪ್ರ.ಕಾರ್ಯದರ್ಶೀ ಧನರಾಜ್ ಉಪಸ್ಥಿತರಿರುವರು ಎಂದು ಅಕಾಡೆಮಿಯ ರಿಜಿಸ್ಟ್ರಾರ್ ಪೂರ್ಣಿಮಾ ಪ್ರಕಟಣೆಯಲ್ಲಿ ತಿಳಿಸಿದ್ದಾರೆ.

RELATED ARTICLES

LEAVE A REPLY

Please enter your comment!
Please enter your name here

Most Popular